KSCA Stadium: ಪುತ್ತೂರು, ಮಂಗಳೂರಿನಲ್ಲಿ ಸ್ಟೇಡಿಯಂ: ರಘುರಾಮ್‌ ಭಟ್‌

ಪ್ರತಿಭಾವಂತರಿಗೆ ಪ್ರೋತ್ಸಾಹ ಸಿಗಬೇಕಾದರೆ ಸೌಲಭ್ಯಗಳು ಬೇಕು: ಕೆಎಸ್‌ಸಿಎ ಅಧ್ಯಕ್ಷ

Team Udayavani, Aug 13, 2024, 11:33 PM IST

Mangaluru

ಮಂಗಳೂರು: ಮಂಗಳೂರಿನಲ್ಲಿ ಕರ್ನಾಟಕ ಕ್ರಿಕೆಟ್‌ ಅಸೋಸಿಯೇಶನ್‌ನಿಂದ ಸ್ಟೇಡಿಯಂ ನಿರ್ಮಾಣಕ್ಕೆ ಜಾಗ ಹುಡುಕಾಟ ಅಂತಿಮಗೊಂಡಿದೆ. ಶೀಘ್ರ ಖರೀದಿ ಪ್ರಕ್ರಿಯೆ ನಡೆಯಲಿದೆ ಎಂದು ಕೆಎಸ್‌ಸಿಎ ಅಧ್ಯಕ್ಷ ರಘುರಾಮ್‌ ಭಟ್‌ ಹೇಳಿದರು.

ನಗರದಲ್ಲಿ ಮಂಗಳವಾರ ಕೆಎಸ್‌ಸಿಎ ಮಂಗಳೂರು ವಲಯ (ಕೊಡಗು, ಮಂಗಳೂರು, ಉಡುಪಿ ಸೇರಿದಂತೆ) 2023-24ನೇ ಸಾಲಿನ ಪ್ರಶಸ್ತಿ ವಿತರಣ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು. ಕ್ರಿಕೆಟ್‌ನಲ್ಲಿ ನಮ್ಮ ರಾಜ್ಯ ಪ್ರತಿಭಾವಂತರ ಆಗರ ಎನ್ನುವುದಕ್ಕೆ ನಮ್ಮ ಅಂಡರ್‌ 14, 19, ಬಾಲಕ ಬಾಲಕಿಯರು, ಅಂಡರ್‌-23 ಯುವಕರು ರಾಷ್ಟ್ರಮಟ್ಟದಲ್ಲಿ ಚಾಂಪಿಯನ್‌ ಆಗಿರುವುದು ನಿದರ್ಶನ. ನಮ್ಮ ಪ್ರತಿಭಾವಂತರಿಗೆ ಪ್ರೋತ್ಸಾಹ ಸಿಗಬೇಕಾದರೆ ಸೌಲಭ್ಯ ಗಳು ಬೇಕು, ಅದಕ್ಕಾಗಿ ಪುತ್ತೂರಿನಲ್ಲಿ ಈಗಾಗಲೇ ಒಂದು ಜಾಗ ಅಂತಿಮಗೊಂಡಿದೆ, ಮಂಗಳೂರಿನಲ್ಲೂ ಜಾಗ ಗುರುತಿಸಲಾಗಿದ್ದು, ಡಿಸಿ ಜತೆ ಸಭೆ ನಡೆಸಲಾಗಿದೆ ಎಂದರು.

ಜಿಲ್ಲಾಧಿಕಾರಿ ಮುಲ್ಲೆ„ ಮುಗಿಲನ್‌ ಮುಖ್ಯ ಅತಿಥಿಯಾಗಿ ಮಾತನಾಡಿ, ಇಂದು ದೇಶದೆಲ್ಲೆಡೆ ಐಪಿಎಲ್‌ನಿಂದಾಗಿ ಕ್ರಿಕೆಟ್‌ ಪ್ರತಿಭೆಗೆ ಅವಕಾಶ ಸಿಗುವಂತಾಗಿದೆ. ಇದರಲ್ಲಿ ಮಂಗಳೂರಿನ ಪ್ರತಿಭೆಗಳೂ ಮಿಂಚುವಂತಾಗಲಿ ಎಂದು ಆಶಿಸಿ, ಜಿಲ್ಲೆಯಲ್ಲಿ ಕ್ರಿಕೆಟ್‌ ಸೌಲಭ್ಯ ಉತ್ತಮಗೊಳ್ಳುವುದಕ್ಕೆ ಎಲ್ಲ ನೆರವು ನೀಡಲಾಗುವುದು ಎಂದರು.

ಮಂಗಳೂರು ವಲಯದ ಪ್ರಭಾರಿ ಡಿ.ಟಿ. ಕುಮಾರ್‌ ಅವರು ಮಾತನಾಡಿ, ರಾಜ್ಯದಿಂದ ಭಾರತ ತಂಡಕ್ಕೆ ಕೆ.ಎಲ್‌. ರಾಹುಲ್‌ ಬಳಿಕ ಯಾರೂ ಆಯ್ಕೆಯಾಗದಿರುವುದು ಗಮ ನಾರ್ಹ ವಿಚಾರ. ನಮ್ಮಲ್ಲಿ ಪ್ರತಿಭೆಗೆ ಕೊರತೆ ಯಿಲ್ಲ, ಆದರೆ ಸೂಕ್ತ ಮೂಲಸೌಕರ್ಯ ಒದಗಿಸುವ ಸವಾಲು ಮುಂದಿದೆ ಎಂದರು.

ಕೆಎಸ್‌ಸಿಎ ಮಂಗಳೂರು ವಲಯ ಅಧ್ಯಕ್ಷ ಮನೋಹರ್‌ ಅಮೀನ್‌ ಸ್ವಾಗತಿಸಿದರು, ಕೆಎಸ್‌ಸಿಎ ಸಂಚಾಲಕ ರತನ್‌ ಕುಮಾರ್‌, ಕೆಎಸ್‌ಸಿಎ ಸದಸ್ಯ ಮಂಜುನಾಥ್‌ ರಾಜು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

3-rabakavi

Rabkavi Banhatti: ತೇರಿನ ಮೇಲಿನಿಂದ ಬಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

2-katapady

Katapady:ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ವಾಹನ

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

China Open 2024: ಒಲಿಂಪಿಕ್‌ ವಿಜೇತೆಗೆ ಮಾಳವಿಕಾ ಆಘಾತ

China Open 2024: ಒಲಿಂಪಿಕ್‌ ವಿಜೇತೆಗೆ ಮಾಳವಿಕಾ ಆಘಾತ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

Test Cricket : ಮೆಂಡಿಸ್‌ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌

MU-Univerasity

Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ

3-rabakavi

Rabkavi Banhatti: ತೇರಿನ ಮೇಲಿನಿಂದ ಬಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

2-katapady

Katapady:ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ವಾಹನ

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.