KSRTC: ಬೇಡಿಕೆ ಮೇರೆಗೆ ಹೊಸ ರೂಟ್: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ
ವಿಧಾನ ಸಭೆಯಲ್ಲಿ ಶಾಸಕ ಕಿರಣ್ ಕುಮಾರ್ ಕೊಡ್ಗಿ ಪ್ರಶ್ನೆ
Team Udayavani, Jul 20, 2024, 7:25 AM IST
ಬೆಂಗಳೂರು: ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೋವಿಡ್ ಹಿನ್ನೆಲೆಯಲ್ಲಿ ಸ್ಥಗಿತಗೊಳಿಸಿದ್ದ ಮಾರ್ಗಗಳ ಪೈಕಿ 9 ಮಾರ್ಗಗಳು ಪುನರಾರಂಭಕ್ಕೆ ಬಾಕಿ ಇದ್ದು ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳ ಬೇಡಿಕೆಗೆ ಅನುಗುಣವಾಗಿ 10 ಸಂಚಾರ ಹೊಸದಾಗಿ ಆರಂಭಿಸಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ವಿಧಾನಸಭೆಯಲ್ಲಿ ತಿಳಿಸಿದ್ದಾರೆ.
ಶಾಸಕ ಕಿರಣ್ ಕುಮಾರ್ ಕೊಡ್ಗಿ ಅವರ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಲಿಖಿತ ಉತ್ತರ ನೀಡಿದ ಸಚಿವರು, ಕೋವಿಡ್ ಹಿನ್ನೆಲೆಯಲ್ಲಿ 43 ರೂಟ್‌ಗಳ ಪೈಕಿ 34 ರೂಟ್‌ಗಳನ್ನು ಆರಂಭಿಸಲಾಗಿದೆ. 9 ರೂಟ್‌ಗಳು ಬಾಕಿಯಿದೆ. ಸಾರ್ವಜನಿಕರು, ವಿದ್ಯಾರ್ಥಿಗಳು ಬೇಡಿಕೆ ನೀಡಿದ ಹಿನ್ನೆಲೆಯಲ್ಲಿ ಕುಂದಾಪುರ ಬಡಾಕೆರೆ ಮಾರ್ಗದಲ್ಲಿ ಹೊಸದಾಗಿ ಸಾರಿಗೆ ಸೌಲಭ್ಯ ಕಲ್ಪಿಸಲಾಗಿದೆ ಎಂದರಲ್ಲದೇ ಶಕ್ತಿ ಯೋಜನೆ ಬಳಿಕ ವಿವಿಧ ಮಾರ್ಗಗಳಲ್ಲಿ ಹೆಚ್ಚಿನ ಸಾರಿಗೆ ಸೌಲಭ್ಯ ಕಲ್ಪಿಸುವಂತೆ ಬೇಡಿಕೆ ಬಂದಿದ್ದು ರೂಟ್‌ಗಳಲ್ಲಿ ಪರಿಷ್ಕರಣೆ ಮಾಡಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mumbai Train; ಮಹಿಳಾ ಬೋಗಿಗೆ ಬೆ*ತ್ತಲೆ ಯಾಗಿ ನುಗ್ಗಿದ ಪುರುಷ!!: ವಿಡಿಯೋ ವೈರಲ್
Year ender: ಈ ವರ್ಷ ನಕ್ಕು ನಗಿಸಿ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದ ವಿಡಿಯೋಗಳಿವು..
Meditation: ವರ್ಧಿತ ಶೈಕ್ಷಣಿಕ ಕಾರ್ಯಕ್ಷಮತೆಗೆ ಧ್ಯಾನ
Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು
Loksabha:ಕಾಂಗ್ರೆಸ್ ಅಂಬೇಡ್ಕರ್ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.