ಶಾರ್ಟ್ ಸರ್ಕ್ಯೂಟ್ ನಿಂದ ಅಂಗಡಿಗೆ ಬೆಂಕಿ : ತಪ್ಪಿದ ಭಾರಿ ದುರಂತ, ಲಕ್ಷಾಂತರ ರೂ ನಷ್ಟ
Team Udayavani, Mar 10, 2022, 1:41 PM IST
ಕುಷ್ಟಗಿ: ಇಲ್ಲಿನ ಬಸವೇಶ್ವರ ವೃತ್ತದ ಬಳಿ ಹಳೆ ಸ್ಟೇಷನ್ ಎದುರಿಗೆ ಇರುವ ಚಹಾ ದ ಅಂಗಡಿಗೆ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡು ಉರಿದ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ.
ಮುತ್ತಣ್ಣ ಗೊಂದಿ ಅವರಿಗೆ ಸೇರಿದ ಚಾಯ್ ತಲಾಬ್ ಚಹಾದ ಅಂಗಡಿಗೆ ಇತ್ತೀಚೆಗೆ ವೈಯರಿಂಗ್ ದುರಸ್ಥಿ ಮಾಡಿಸಿದ್ದರು. ಆದರೆ ಇಂದು ಬೆಳಗ್ಗೆ ಅಂಗಡಿಯಲ್ಲಿ ಏಕಾಏಕಿ ಬೆಂಕಿಯ ಕಿಡಿ ಕಾಣಿಸಿಕೊಂಡಿದೆ ಇದರಿಂದ ಗಾಬರಿಗೊಂಡ ಅಂಗಡಿ ಮಾಲೀಕ ಕೂಡಲೇ ಇಲೆಕ್ಟ್ರಿಕಲ್ ದುರಸ್ತಿ ಕಾರ್ಯಕ್ಕೆ ಸಂಬಂಧಿಸಿದವರನ್ನು ಕರೆಯಲು ಹೋಗಿದ್ದಾರೆ, ಅಷ್ಟೋತ್ತಿಗೆ ಬೆಂಕಿಯ ಕಿಡಿಯ ಜ್ವಾಲೆ ದೊಡ್ಡ ಪ್ರಮಾಣದಲ್ಲಿ ಕಾಣಿಸಿಕೊಂಡು ಇಡೀ ಅಂಗಡಿಗೆ ಆವರಿಸಿ ಆತಂಕದ ಸ್ಥಿತಿ ನಿರ್ಮಾಣವಾಗಿದೆ.
ಅಂಗಡಿಯ ಒಳಗೆ ಮೂರು ತುಂಬಿದ ಗ್ಯಾಸ್ ಸಿಲಿಂಡರ್ ಗಳು ಇರುವುದು ಸುದ್ದಿ ತಿಳಿಯುತ್ತಿದ್ದಂತೆ ಅಲ್ಲಿದ್ದ ಜನರಲ್ಲಿ ಆತಂಕ ಹೆಚ್ಚಾಯಿತು.
ಕೂಡಲೇ ಅಗ್ನಿಶಾಮಕ ಹಾಗೂ ಪೊಲೀಸ್ ಠಾಣೆಗೆ ವಿಷಯ ತಿಳಿಸಿದ್ದು ಘಟನಾ ಸ್ಥಳಕ್ಕೆ ಪೊಲೀಸರು ಬಂದು ಅಲ್ಲಿ ನೆರೆದಿದ್ದ ಜನರನ್ನು ಚದುರಿಸಿದರು. ಆದಾಗ್ಯೂ ಜನ ಮುಗಿಬಿದ್ದು ಮೋಬೈಲ್ ಗಳಲ್ಲಿ ವಿಡಿಯೋ ದೃಶ್ಯೀಕರಣ ಮಾಡುವುದರಲ್ಲೇ ಸಹಾಸ ಪ್ರದರ್ಶಿಸಿಸುತ್ತಿರುವುದು ಕಂಡು ಬಂತು.
ಇದನ್ನೂ ಓದಿ : Results; ಪಟಿಯಾಲಾದಲ್ಲಿ ಮಾಜಿ ಸಿಎಂ ಅಮರೀಂದರ್ ಗೆ ಸೋಲು, AAPಗೆ ಅಭಿನಂದನೆ ಸಲ್ಲಿಸಿದ ಸಿಧು
ಬಳಿಕ ಬಂದ ಅಗ್ನಿ ಶಾಮಕ ಸಿಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿ, ಬೆಂಕಿಯ ಜ್ವಾಲೆಯಲ್ಲಿ ಸುಟ್ಟು ಕರಕಲಾಗುವ ಹಂತದಲ್ಲಿದ 2 ಲಕ್ಷಕ್ಕೂ ಅಧಿಕ ಹಣವನ್ನು ರಕ್ಷಿಸಿದ್ದು, ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ
Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್
Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್ ಜಾಮೀನ ಮಂಜೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.