UK Polls: ಬ್ರಿಟನ್ ಸಂಸತ್ ಚುನಾವಣೆ-ರಿಷಿ ಪಕ್ಷಕ್ಕೆ ಸೋಲು, ಲೇಬರ್ ಪಕ್ಷ ಜಯಭೇರಿ?
ಶುಕ್ರವಾರ ಫಲಿತಾಂಶ ಪ್ರಕಟವಾಗಲಿದೆ.
Team Udayavani, Jul 4, 2024, 6:04 PM IST
ಲಂಡನ್: 650 ಸದಸ್ಯ ಬಲದ ಬ್ರಿಟನ್ ಸಂಸತ್ ಗೆ ಗುರುವಾರ (ಜುಲೈ 04) ಬೆಳಗ್ಗೆ 9ಗಂಟೆಯಿಂದ ಮತದಾನ ಆರಂಭಗೊಂಡಿದ್ದು, ಈ ಬಾರಿಯ ಚುನಾವಣೆಯಲ್ಲಿ ಆಡಳಿತರೂಢ ಕನ್ಸರ್ವೆಟಿವ್ ಪಕ್ಷ ಭಾರೀ ಅಂತರದಿಂದ ಪರಾಜಯಗೊಳ್ಳುವ ಸಾಧ್ಯತೆ ಇದ್ದಿರುವುದಾಗಿ ಸಮೀಕ್ಷೆಗಳು ತಿಳಿಸಿವೆ.
ಇದನ್ನೂ ಓದಿ:Team India: ಕೊಹ್ಲಿ-ರೋಹಿತ್ ಗೆ ವಿಶೇಷ ಗೌರವ ನೀಡಿದ ವಿಸ್ತಾರ ವಿಮಾನ; ಇಲ್ಲಿದೆ ವಿವರ
ಚುನಾವಣಾ ಪೂರ್ವ ಸಮೀಕ್ಷೆಗಳು ಲೇಬರ್ ಪಕ್ಷ ಅಧಿಕಾರದ ಗದ್ದುಗೆ ಏರುವ ಸುಳಿವು ನೀಡಿವೆ. ಹೌಸ್ ಆಫ್ ಕಾಮನ್ಸ್ (ಸಂಸತ್ ಕೆಳಮನೆ) ಒಟ್ಟು 650 ಸ್ಥಾನಗಳನ್ನು ಹೊಂದಿದ್ದು, ಬಹುಮತ ಪಡೆದು ಸರಕಾರ ರಚಿಸಲು 326 ಸ್ಥಾನಗಳು ಆವಶ್ಯಕವಾಗಿದೆ. ಈ ನಿಟ್ಟಿನಲ್ಲಿ ರಿಷಿ ಸುನಕ್ ಗೆ ಅಗ್ನಿ ಪರೀಕ್ಷೆ ಎದುರಾಗಿದೆ.
ಶುಕ್ರವಾರ ಫಲಿತಾಂಶ ಪ್ರಕಟವಾಗಲಿದೆ. ಕಳೆದ ಚುನಾವಣೆಯಲ್ಲಿ ರಿಷಿ ಸುನಕ್ ನೇತೃತ್ವದ ಕನ್ಸರ್ವೆಟಿವ್ ಪಕ್ಷ 344 ಕ್ಷೇತ್ರಗಳಲ್ಲಿ ಗೆದ್ದು ಸರಕಾರ ರಚಿಸಿತ್ತು. ಮುಂದಿನ ವರ್ಷದ ಜನವರಿಯಲ್ಲಿ ನಿಗದಿಯಂತೆ ಸಂಸತ್ ಚುನಾವಣೆ ನಡೆಯಬೇಕಾಗಿತ್ತು. ಆದರೆ 6 ತಿಂಗಳು ಮೊದಲೇ ಸಂಸತ್ ವಿಸರ್ಜಿಸಿ ಚುನಾವಣೆಗೆ ಹೋಗುವ ನಿರ್ಧಾರ ವನ್ನು ರಿಷಿ ಸುನಕ್ ಕೈಗೊಂಡಿದ್ದಾರೆ.
ಕಳೆದ ಚುನಾವಣೆಯಲ್ಲಿ ಭಾರತೀಯ ಮೂಲದ 15 ಜನರು ಬ್ರಿಟನ್ ಸಂಸತ್ ಗೆ ಆಯ್ಕೆಯಾಗಿದ್ದರು. ಈ ಬಾರಿ ಭಾರತೀಯ ಸದಸ್ಯರ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.