Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!
ಗುಜರಾತ್ ರಿಜಿಸ್ಟ್ರೇಶನ್ ನಂಬರ್ ಹೊಂದಿರುವುದು ದಾಖಲಾಗಿದೆ.
Team Udayavani, Dec 26, 2024, 11:45 AM IST
ಮುಂಬೈ: ಐಶಾರಾಮಿ ಲ್ಯಾಂಬೋರ್ಘಿನಿ (Lamborghini Supercar) ಕಾರು ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಘಟನೆ ಮುಂಬೈಯಲ್ಲಿ ಬುಧವಾರ (ಡಿ.25) ರಾತ್ರಿ ಸಂಭವಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆಯಲ್ಲಿ ಗಾಯಗೊಂಡ ಬಗ್ಗೆ ವರದಿಯಾಗಿಲ್ಲ. ಘಟನಾ ಸ್ಥಳಕ್ಕೆ ತಕ್ಷಣವೇ ಅಗ್ನಿಶಾಮಕ ವಾಹನ ದೌಡಾಯಿಸಿದ್ದು, ಅಂದಾಜು 45 ನಿಮಿಷಗಳಲ್ಲಿ ಬೆಂಕಿಯನ್ನು ನಂದಿಸಲಾಗಿತ್ತು ಎಂದು ಅಗ್ನಿಶಾಮಕದಳದ ಅಧಿಕಾರಿಗಳು ತಿಳಿಸಿರುವುದಾಗಿ ವರದಿಯಾಗಿದೆ.
ಲ್ಯಾಂಬೋರ್ಘಿನಿ ಕಾರಿನಲ್ಲಿಎಷ್ಟು ಮಂದಿ ಪ್ರಯಾಣಿಸುತ್ತಿದ್ದರು ಹಾಗೂ ಕಾರಿಗೆ ಬೆಂಕಿ ಹಿಡಿಯಲು ಕಾರಣ ಏನೆಂಬ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ ಎಂದು ವರದಿ ಹೇಳಿದೆ.
Spotted by me: A Lamborghini engulfed in flames on Coastal Road, Mumbai. Incidents like this raise serious concerns about the reliability and safety standards of Lamborghini. For the price and reputation, one expects uncompromising quality—not potential hazards.@MumbaiPolice… pic.twitter.com/lIC7mYtoCB
— Gautam Singhania (@SinghaniaGautam) December 25, 2024
ಖ್ಯಾತ ಉದ್ಯಮಿ ಗೌತಮ್ ಸಿಂಘಾನಿಯಾ ಅವರು ಬೆಂಕಿ ಹೊತ್ತುಕೊಂಡು ಉರಿಯುತ್ತಿರುವ ಲ್ಯಾಂಬೋರ್ಘಿನಿ ಕಾರಿನ ವಿಡಿಯೋವನ್ನು ತಮ್ಮ ಸಾಮಾಜಿಕ ಜಾಲತಾಣದ ಖಾತೆಯಲ್ಲಿ ಹಂಚಿಕೊಂಡಿದ್ದರು.
ಮತ್ತೊಂದು ವಿಡಿಯೋದಲ್ಲಿ, ಕಿತ್ತಳೆ ಬಣ್ಣದ ಲ್ಯಾಂಬೋರ್ಘಿನಿ ಕಾರಿಗೆ ಬೆಂಕಿ ಹೊತ್ತಿಕೊಂಡಿರುವುದು ಸೆರೆಯಾಗಿದ್ದು, ಗುಜರಾತ್ ರಿಜಿಸ್ಟ್ರೇಶನ್ ನಂಬರ್ ಹೊಂದಿರುವುದು ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airtel Outage:ದೇಶದ ಹಲವೆಡೆ ಏರ್ ಟೆಲ್ Network ಸಮಸ್ಯೆ; ಏರ್ ಟೆಲ್ ಗ್ರಾಹಕರಿಂದ ದೂರು
YearEnd Offers:ಭಾರತದಲ್ಲಿ Skoda Superb ಖರೀದಿಸುವವರಿಗೆ 18 ಲಕ್ಷ ರೂ.ವರೆಗೆ ಡಿಸ್ಕೌಂಟ್!
ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ
ಶೀಘ್ರವೇ ದೇಶದ ಬುಲೆಟ್; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್ ಬುಲೆಟ್ ರೈಲು ಯೋಜನೆ
Japan rivals: ನಿಸ್ಸಾನ್-ಹೋಂಡಾ ವಿಲೀನ: ಇನ್ನು ವಿಶ್ವದ ನಂ.3 ಕಂಪೆನಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.