ಭೂ ಪರಿವರ್ತನೆ ಮಸೂದೆ ಅಂಗೀಕಾರ
Team Udayavani, Dec 22, 2022, 11:30 PM IST
ಬೆಳಗಾವಿ: ಕೃಷಿ ಜಮೀನನ್ನು ಕೃಷಿಯೇತರ ಉದ್ದೇಶಗಳಿಗೆ ಪರಿವರ್ತಿಸುವ ಪ್ರಕ್ರಿಯೆಯನ್ನು ಸರಳಗೊಳಿಸಿ ವಿಳಂಬ ತಪ್ಪಿಸುವ ಉದ್ದೇಶದ “ಕರ್ನಾಟಕ ಭೂಕಂದಾಯ (2ನೇ ತಿದ್ದುಪಡಿ) ಮಸೂದೆ -2022’ಕ್ಕೆ ವಿಧಾನಸಭೆಯಲ್ಲಿ ಗುರುವಾರ ಅಂಗೀಕಾರ ನೀಡಲಾಯಿತು.
ಕಂದಾಯ ಸಚಿವ ಆರ್.ಆಶೋಕ್ ಮಾತನಾಡಿ, ಕೃಷಿ ಭೂಮಿಯನ್ನು ಕೈಗಾರಿಕೆ, ವಾಣಿಜ್ಯ ಮತ್ತಿತರ ಕೃಷಿಯೇತರ ಉದ್ದೇಶಕ್ಕೆ ಪರಿವರ್ತನೆ ಕೋರಿ ಅರ್ಜಿ ಸಲ್ಲಿಸಿದ 7 ದಿನಗಳ ಒಳಗೆ ಅನುಮೋದನೆ ನೀಡುವುದನ್ನು ಮಸೂದೆಯಲ್ಲಿ ಕಡ್ಡಾಯ ಮಾಡಲಾಗಿದೆ ಎಂದು ಹೇಳಿದರು.
ಆರ್‌ಟಿಸಿ, 11-ಇ ಸ್ಕೆಚ್ ಮತ್ತು ಮ್ಯುಟೇಷನ್ ಈ ಮೂರು ದಾಖಲೆಗಳೊಂದಿಗೆ ಸ್ವಯಂ ಘೋಷಣೆ ಪತ್ರ (ಅಫಿದವಿತ್) ಸಲ್ಲಿಸಿದರೆ 7 ದಿನಗಳೊಳಗೆ ಭೂಪರಿವರ್ತನೆ ಕೋರಿಕೆ ಅರ್ಜಿಯನ್ನು ವಿಲೇವಾರಿ ಮಾಡಬೇಕು. ವಾರದೊಳಗೆ ಸಂಬಂಧಪಟ್ಟ ಜಿಲ್ಲಾಧಿಕಾರಿ ಅನುಮೋದನೆ ನೀಡದಿದ್ದರೆ, ಸ್ವಯಂ ಭೂಪರಿವರ್ತನೆಯಾಗಿದೆ ಎಂದು ಪರಿಗಣಿಸಲಾಗುವುದು ಎಂದರು.
ಗ್ರಾಮೀಣ ಭಾಗದಲ್ಲಿ 30 ದಿನ:
ಭೂಪರಿವರ್ತನೆಗೆ ಯೋಜನಾ ಪ್ರದೇಶಗಳ ವ್ಯಾಪ್ತಿಯಲ್ಲಿ 7 ದಿನಗಳ ಕಾಲಾವಕಾಶ ಹಾಗೂ ಗ್ರಾಮೀಣ ಭಾಗದಲ್ಲಿ 30 ದಿನಗಳ ಕಾಲಾವಕಾಶ ನಿಗದಿ ಮಾಡಲಾಗಿದೆ. ಮಸೂದೆಯನ್ನು ಪಕ್ಷಭೇದವಿಲ್ಲದೆ ಸದಸ್ಯರು ಸ್ವಾಗತಿಸಿದರು. ಜತೆಗೆ ಕೆಲವು ಸಲಹೆಗಳನ್ನೂ ನೀಡಿದರು. ಕಾಯಿದೆಗೆ ನಿಯಮಾವಳಿಗಳ ರಚನೆ ಸಂದರ್ಭದಲ್ಲಿ ಈ ಸಲಹೆಗಳನ್ನು ಪರಿಗಣಿಸುವುದಾಗಿ ಸಚಿವರು ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್; ತನಿಖೆ ಚುರುಕು
Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.