Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!

 ಮದ್ರಸಾಗಳಲ್ಲಿ ಕನ್ನಡ ಕಲಿಕಾ ಯೋಜನೆಗೂ ಹಿನ್ನಡೆ, ಬರುವ ಬಜೆಟ್‌ನಲ್ಲಿ 30 ಕೋಟಿ ರೂ. ಮೀಸಲಿಡಲು ಕೋರಿಕೆ

Team Udayavani, Jan 9, 2025, 7:50 AM IST

purushotham-bilimale

ಬೆಂಗಳೂರು: ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಮದ್ರಸಾಗಳಲ್ಲಿ ಕನ್ನಡ ಕಲಿಕಾ ಯೋಜನೆ ಸೇರಿದಂತೆ ಕನ್ನಡ ಭಾಷೆ ಬೆಳವಣಿಗೆ ನಿಟ್ಟಿನಲ್ಲಿ ಹಲವು ಹೊಸ ಯೋಜನೆಗಳನ್ನು ರೂಪಿಸಿದೆ. ಆದರೆ, ಸಕಾಲದಲ್ಲಿ ಆ ಯೋಜನೆಗಳ ಅನುಷ್ಠಾನ ಮಾಡುವುದಕ್ಕೆ ಹಣವಿಲ್ಲದೆ ಕೈ ಕಟ್ಟಿಕುಳಿತುಕೊಳ್ಳುವ ಪರಿಸ್ಥಿತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಮುಂಬರುವ ಬಜೆಟ್‌ನಲ್ಲಿ 30 ಕೋಟಿ ರೂ.ಅನುದಾನ ನೀಡುವಂತೆ ಸರಕಾರಕ್ಕೆ ಕೋರಿಕೆ ಸಲ್ಲಿಸಿದೆ.

ಸರಕಾರ ಈಗಾಗಲೇ ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ 2 ಕೋಟಿ ರೂ. ಅನುದಾನ ನೀಡಿದೆ. ಆದರೆ, ಈ ಹಣ ಗಡಿನಾಡ ಕನ್ನಡ ಮಕ್ಕಳ ಫೆಲೋಶಿಪ್‌ ನೀಡಲು, ನೌಕರರ ಸಂಬಳ, ಸಾರಿಗೆ ವೆಚ್ಚಕ್ಕೆ ಮಾತ್ರ ಸಾಕಾಗುತ್ತದೆ. ಹೊಸ ಯೋಜನೆಗಳಿಗೆ ಹಣವಿಲ್ಲದಂತಾಗಿದೆ. ಹೀಗಾಗಿ ಪ್ರಾಧಿಕಾರದ ಅಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಆರ್ಥಿಕ ಇಲಾಖೆ ಹಿರಿಯ ಅಧಿಕಾರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ಆದರೆ, ಹಣ ಬಿಡುಗಡೆಗೆ ಭರಸೆ ಇನ್ನೂ ಸಿಕಿಲ್ಲ.

ಕನ್ನಡ ಕಲಿಕೆಗೆ 2 ಕೋಟಿ ರೂ.ಬೇಕು
ನಾಡಿನಾದ್ಯಂತ ಮದ್ರಸಾಗಳಲ್ಲಿ ಕನ್ನಡ ಕಲಿಕಾ ತರಗತಿ ನಡೆಸುವುದು ಪ್ರಾಧಿಕಾರದ ದೊಡ್ಡ ಯೋಜನೆ ಯಾಗಿದೆ. ಇದನ್ನು ಕರ್ನಾಟಕ ದಾದ್ಯಂತ ಜಾರಿ ಮಾಡುವುದಾದರೆ 400-500 ಶಿಕ್ಷಕರು ಬೇಕಾಗಲಿದ್ದು, ಸುಮಾರು 2 ಕೋಟಿ ರೂ. ವೆಚ್ಚವಾಗಲಿದೆ. ಇದನ್ನು ಈ ಹೊಸವರ್ಷ ದಿಂದಲೇ ಆರಂಭಿಸಬೇಕಿತ್ತು. ಅಷ್ಟು ಹಣ ಈಗ ಪ್ರಾಧಿಕಾರದಲ್ಲಿಲ್ಲ. ಕಲಬುರಗಿ ಸೇರಿ ಇತರೆಡೆ ನಡೆಸಬೇಕೆಂಬ ಒತ್ತಾಯಗಳು ಕೇಳಿಬರುತ್ತಿವೆ ಎಂದು ಹಿರಿಯ ಅಧಿಕಾರಿಗಳು ಅಸಹಾಯಕತೆ ವ್ಯಕ್ತಪಡಿಸುತ್ತಾರೆ. ಬಜೆಟ್‌ನಲ್ಲಿ ಅನುದಾನ ಲಭ್ಯವಾದರೆ ಅನುಷ್ಠಾನ ಮಾಡುವ ಆಲೋಚನೆಯಲ್ಲಿ ಪ್ರಾಧಿಕಾರವಿದೆ ಎಂದಿದ್ದಾರೆ.

ಹೊರ ರಾಜ್ಯದ 1200 ಜನರಿಗೆ ಕನ್ನಡ ಕಲಿಕೆ
ಬೆಂಗಳೂರಿನಲ್ಲಿ ನೆಲೆಸಿರುವ ಮಲಯಾಳಿ ಗರು ಸೇರಿ ಬ್ಯಾಂಕ್‌ ಉದ್ಯೋಗಿಗಳಿಗೆ ಕನ್ನಡ ಕಲಿಕೆ ತರಗತಿ ನಡೆಸಲಾಗಿದೆ. ವಿವಿಧ ಭಾಷೆಗಳ ಸುಮಾರು 1200 ಜನ ಕನ್ನಡ ಕಲಿಯುತ್ತಿದ್ದಾರೆ. ಎಂದು ಪ್ರಾಧಿಕಾರದ ಅಧಿಕಾರಿಗಳು ತಿಳಿಸಿದ್ದಾರೆ.

ಮಾರ್ಚ್‌ ಒಳಗೆ 5 ಕೋ. ರೂ. ನೀಡಿ
ಮಾರ್ಚ್‌ ಬಜೆಟ್‌ ಮಂಡನೆ ಒಳಗೆ 5 ಕೋಟಿ ರೂ. ನೀಡಿ ಎಂದು ಸರಕಾರಕ್ಕೆ ಪ್ರಾಧಿಕಾರ ಬೇಡಿಕೆಯಿಟ್ಟಿದೆ. ಸಿಎಂ ಸಿದ್ದರಾಮಯ್ಯ ಗಮನಕ್ಕೂ ಹಣಕಾಸಿನ ಪರಿಸ್ಥಿತಿ ತರಲಾಗಿದೆ. ಹಣಕಾಸು ಇಲಾಖೆಯ ಹಿರಿಯ ಅಧಿಕಾರಿಗಳನ್ನು ಕೂಡ ಭೇಟಿ ಮಾಡಲಾಗಿದೆ. ಆದರೆ, ಏನು ಮಾಡುತ್ತಾರೋ ಗೊತ್ತಿಲ್ಲ. ಕಾರ್ಯಕ್ರಮ ರೂಪಿಸಲು ನಮಗೆ ತೊಂದರೆ ಇಲ್ಲ. ಹೊಸ ಯೋಜನೆ ರೂಪಿಸಲು ಜನರೂ ಇದ್ದಾರೆ. ಆದರೆ, ಅದರ ಜಾರಿಗೆ ಬೇಕಾದ ಆರ್ಥಿಕತೆ ಇಲ್ಲದೆ ಹೋದರೆ ಏನೂ ಮಾಡಲಾಗದು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮೂಲಗಳು ಹೇಳಿವೆ.

ಮದ್ರಸಾಗಳಲ್ಲಿ ಕನ್ನಡ ಕಲಿಕೆ ಸೇರಿದಂತೆ ಹಲವು ಹೊಸ ಕಾರ್ಯಕ್ರಮ ರೂಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮುಂಬರುವ ಬಜೆಟ್‌ನಲ್ಲಿ 30 ಕೋಟಿ ರೂ. ನೀಡುವಂತೆ ಸರಕಾರಕ್ಕೆ ಮನವಿ ಸಲ್ಲಿಸ ಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಈಗಾಗಲೇ ಪ್ರಾಧಿಕಾರವನ್ನು ಬೆನ್ನುತಟ್ಟಿ ಪ್ರೋತ್ಸಾಹಿಸುತ್ತಿದ್ದಾರೆ. ಪ್ರಾಧಿಕಾರದ ಬೇಡಿಕೆಗೆಗಳಿಗೆ ಸೂಕ್ತವಾಗಿ ಸ್ಪಂದಿಸುತ್ತಾರೆ ಎಂಬ ವಿಶ್ವಾಸ ನನಗೆ ಇದೆ. – ಪುರೋಷೋತ್ತಮ ಬಿಳಿಮಲೆ, ಅಧ್ಯಕ್ಷರು ಕನ್ನಡ ಅಭಿವೃದ್ಧಿ ಪ್ರಾಧಿಕಾರ

 - ದೇವೇಶ ಸೂರಗುಪ್ಪ

ಟಾಪ್ ನ್ಯೂಸ್

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

1-frrr

L&T; ನೌಕರರು ರವಿವಾರವೂ ಕೆಲಸ ಮಾಡಬೇಕು, ವಾರಕ್ಕೆ 90 ಗಂಟೆ ಕೆಲಸ!!

1-naxal

NIA ವಿಶೇಷ ನ್ಯಾಯಾಲಯ; ಶರಣಾದ ಆರು ನಕ್ಸಲರಿಗೆ ಜ.31ರವರೆಗೆ ನ್ಯಾಯಾಂಗ ಬಂಧನ

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!

parameshwara

Naxal; ರಾಜ್ಯದಲ್ಲಿ 99 % ನಕ್ಸಲಿಸಂ ಅಂತ್ಯಗೊಂಡಿದೆ: ಡಾ.ಜಿ.ಪರಮೇಶ್ವರ್

SS Rajamouli: ʼಮಹಾಭಾರತʼ ಕಥೆಗೆ ರಾಜಮೌಳಿ ಆ್ಯಕ್ಷನ್ ಕಟ್; ಯಾವಾಗ ಪ್ರಾಜೆಕ್ಟ್‌ ಶುರು?

SS Rajamouli: ʼಮಹಾಭಾರತʼ ಕಥೆಗೆ ರಾಜಮೌಳಿ ಆ್ಯಕ್ಷನ್ ಕಟ್; ಯಾವಾಗ ಪ್ರಾಜೆಕ್ಟ್‌ ಶುರು?

MOsale

Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-naxal

NIA ವಿಶೇಷ ನ್ಯಾಯಾಲಯ; ಶರಣಾದ ಆರು ನಕ್ಸಲರಿಗೆ ಜ.31ರವರೆಗೆ ನ್ಯಾಯಾಂಗ ಬಂಧನ

parameshwara

Naxal; ರಾಜ್ಯದಲ್ಲಿ 99 % ನಕ್ಸಲಿಸಂ ಅಂತ್ಯಗೊಂಡಿದೆ: ಡಾ.ಜಿ.ಪರಮೇಶ್ವರ್

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

Anjani, the female tiger, passed away at Tyavarekoppa sanctuary

Shimoga: ತ್ಯಾವರೆಕೊಪ್ಪ ಧಾಮದಲ್ಲಿ ಮೃತಪಟ್ಟ ಹೆಣ್ಣು ಹುಲಿ ಅಂಜನಿ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

Mulki: Biker seriously injured after being hit by bus

Mulki: ಬಸ್‌ ಢಿಕ್ಕಿ ಹೊಡೆದು ಬೈಕ್‌ ಸವಾರ ಗಂಭೀರ

Sullia: Airavata bus stopped

Sullia: ಕೆಟ್ಟು ನಿಂತ ಐರಾವತ ಬಸ್‌

1-frrr

L&T; ನೌಕರರು ರವಿವಾರವೂ ಕೆಲಸ ಮಾಡಬೇಕು, ವಾರಕ್ಕೆ 90 ಗಂಟೆ ಕೆಲಸ!!

ಬೈಕ್‌-ಬಸ್‌ ಢಿಕ್ಕಿ:ವಿದ್ಯಾರ್ಥಿಗಳಿಗೆ ಗಾಯ

Puttur: ಬೈಕ್‌-ಬಸ್‌ ಢಿಕ್ಕಿ:ವಿದ್ಯಾರ್ಥಿಗಳಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.