Laos: ವಿಶ್ವದ ಮೊದಲ ದೇಶ- ಅಯೋಧ್ಯೆ ರಾಮಲಲ್ಲಾನ ಅಂಚೆ ಚೀಟಿ ಬಿಡುಗಡೆಗೊಳಿಸಿದ ಲಾವೋಸ್…
ಅಂಚೆ ಚೀಟಿಯನ್ನು ಜಂಟಿಯಾಗಿ ಬಿಡುಗಡೆಗೊಳಿಸಿದೆ..
Team Udayavani, Jul 27, 2024, 4:39 PM IST
ಲಾವೋ: ಅಯೋಧ್ಯೆಯ ಶ್ರೀರಾಮ ಲಲ್ಲಾ ಮೂರ್ತಿಯ ಚಿತ್ರ ಹೊಂದಿರುವ ಅಂಚೆ ಚೀಟಿಯನ್ನು ಲಾವೋ ಪೀಪಲ್ಸ್ ಡೆಮೋಕ್ರಟಿಕ್ ರಿಪಬ್ಲಿಕ್ ಬಿಡುಗಡೆ ಮಾಡುವ ಮೂಲಕ ಹಿಂದೂ ದೇವರ ಅಂಚೆ ಚೀಟಿಯನ್ನು ಬಿಡುಗಡೆ ಮಾಡಿದ ಜಗತ್ತಿನ ಮೊದಲ ದೇಶವಾಗಿದೆ ಎಂದು ವರದಿ ತಿಳಿಸಿದೆ.
ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಡಾ.ಎಸ್.ಜೈಶಂಕರ್ ಅವರು ಲಾವೋಸ್ ಗೆ ಭೇಟಿ ನೀಡಿದ್ದು, ಈ ಸಂದರ್ಭದಲ್ಲಿ ಉಭಯ ದೇಶಗಳ ಸಾಂಸ್ಕೃತಿಕ ಮತ್ತು ನಾಗರಿಕ ಸಂಬಂಧದ ಹಿನ್ನೆಲೆಯಲ್ಲಿ ಭಾರತ ಮತ್ತು ಲಾವೋಸ್ ಜಂಟಿಯಾಗಿ ರಾಮಲಲ್ಲಾ ಚಿತ್ರವನ್ನೊಳಗೊಂಡ ಅಂಚೆ ಚೀಟಿಯನ್ನು ಜಂಟಿಯಾಗಿ ಬಿಡುಗಡೆಗೊಳಿಸಿರುವುದಾಗಿ ವರದಿ ವಿವರಿಸಿದೆ.
ಜೈಶಂಕರ್ ಭೇಟಿ ವೇಳೆ ಒಂದು ಭಗವಾನ್ ಬುದ್ಧ ಹಾಗೂ ರಾಮಲಲ್ಲಾನ ಚಿತ್ರವನ್ನೊಳಗೊಂಡ ಅಂಚೆ ಚೀಟಿಯನ್ನು ಲಾವೋಸ್ ಬಿಡುಗಡೆಗೊಳಿಸಿದೆ. ಉಭಯ ದೇಶಗಳ ನಡುವಿನ ರಾಮಾಯಣ ಮತ್ತು ಬೌದ್ಧಿಸಂನ ಸಾಂಸ್ಕೃತಿಕ ಪರಂಪರೆಯ ದ್ಯೋತಕವಾಗಿ ಅಂಚೆ ಚೀಟಿಯನ್ನು ಬಿಡುಗಡೆಗೊಳಿಸಿರುವುದಾಗಿ ತಿಳಿಸಿದೆ.
ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಮತ್ತು ಲಾವೋ ಪಿಡಿಆರ್ ನ ಉಪ ಪ್ರಧಾನ ಮಂತ್ರಿ, ವಿದೇಶಾಂಗ ಸಚಿವ ಸಲ್ಯುಮ್ ಕ್ಸೈ ಕೊಮ್ಮಸಿತ್ ಜಂಟಿಯಾಗಿ ಅಂಚೆ ಚೀಟಿಯನ್ನು ಬಿಡುಗಡೆಗೊಳಿಸಿದ್ದರು.
2024ರ ಜನವರಿ 22ರಂದು ಅಯೋಧ್ಯೆಯ ರಾಮಮಂದಿರದಲ್ಲಿ 51 ಇಂಚು ಎತ್ತರದ ಬಾಲರಾಮನ (ರಾಮಲಲ್ಲಾ) ಮೂರ್ತಿಯನ್ನು ಪ್ರತಿಸ್ಠಾಪಿಸಿ ಉದ್ಘಾಟಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
‘New Phase’ of War: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುತಿನ್ ಅಣ್ವಸ್ತ್ರ ದಾಳಿ ಎಚ್ಚರಿಕೆ!
Copper: ಕಾಂಗೋದಲ್ಲಿ ಕುಸಿದ ಪರ್ವತ: ಸಾವಿರಾರು ಟನ್ ತಾಮ್ರ ಪ್ರತ್ಯಕ್ಷ!
bomb cyclone: ಶೀಘ್ರ ಅಮೆರಿಕ ಕರಾವಳೀಲಿ “ಬಾಂಬ್ ಸೈಕ್ಲೋನ್’ ಸ್ಫೋಟ!
ಯುದ್ಧ ಸನ್ನದ್ಧರಾಗಿ: ನಾಗರಿಕರಿಗೆ ಸ್ವೀಡನ್, ಫಿನ್ ಲ್ಯಾಂಡ್ ಎಚ್ಚರಿಕೆ!
Viral Video: ಟಿಕ್‌ಟಾಕ್ ಸ್ಟಾರ್ ಬಳಿಕ ಮತ್ತೊಬ್ಬ ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್
MUST WATCH
ಹೊಸ ಸೇರ್ಪಡೆ
Delhi ಮಿತಿ ಮೀರಿದ ವಾಯು ಮಾಲಿನ್ಯ: ಸರಕಾರಿ ಕಚೇರಿಗಳ 50% ಸಿಬಂದಿಗಳಿಗೆ ಮನೆಯಿಂದಲೇ ಕೆಲಸ
Thirthahalli: ಪಾದರಕ್ಷೆ, ಮೊಬೈಲ್ ನದಿ ದಡದಲ್ಲಿಟ್ಟು ವ್ಯಕ್ತಿ ನಾಪತ್ತೆ ಪ್ರಕರಣ; ಶವ ಪತ್ತೆ
Vertex Workspace ಸಂಸ್ಥೆಗೆ ಬೆಸ್ಟ್ ಇನ್ನೋವೇಟಿವ್ ಎಂಟರ್‌ಪೈಸ್ ಅವಾರ್ಡ್
Kulgeri: ಟ್ರ್ಯಾಕ್ಟರ್ ಹಿಂಬದಿಗೆ ಬೈಕ್ ಡಿಕ್ಕಿ; ಸವಾರ ಮೃತ್ಯು
BBK11: ದೊಡ್ಮನೆಯಲ್ಲಿ ಸೆಡೆ ಜಗಳ.. ಬಿಗ್ ಬಾಸ್ ನಿಂದ ಅಚೆ ಬರಲು ರೆಡಿಯಾದ ಸುರೇಶ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.