ಮಲ್ಪೆ; ಬಲೆಗೆ ಬಿದ್ದ ಅಪರೂಪದ ಬೃಹತ್ ಗಾತ್ರದ ಗರಗಸ ಮೀನು!
ವನ್ಯಜೀವಿ ಸಂರಕ್ಷಣಾ ಕಾಯ್ದೆ ನಿಯಮಗಳ ಅನುಸಾರ ಅನುಬಂಧ 1ರಲ್ಲಿ ಗುರುತಿಸಲಾಗಿದೆ
Team Udayavani, Mar 11, 2022, 10:56 AM IST
ಮಲ್ಪೆ: ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ ಸೀ ಕ್ಯಾಪ್ಟನ್ ಹೆಸರಿನ ಲೇಲ್ಯಾಂಡ್ ಬೋಟಿನ ಬಲೆಗೆ ಭಯಾನಕವಾಗಿ ಕಾಣುವ ಬೃಹತ್ ಗಾತ್ರದ
ಗರಗಸ ಮೀನು (ಸಾ ಫಿಶ್) ಬಿದ್ದಿದೆ. ಬಂದರಿಗೆ ತಂದಿರುವ ಈ ಮೀನು ಇದೀಗ ಎಲ್ಲರ ಅಚ್ಚರಿಗೆ ಕಾರಣವಾಗಿದೆ.
ಇದನ್ನೂ ಓದಿ:ಬೆಂಗಳೂರು ಪಿಂಕ್ ಬಾಲ್ ಟೆಸ್ಟ್ ಪಂದ್ಯಕ್ಕೆ ಶೇ.100 ಪ್ರೇಕ್ಷಕರಿಗೆ ಅವಕಾಶ
ಸ್ಥಳೀಯ ಭಾಷೆಯಲ್ಲಿ ಗರಗಸ ಮೀನು ಎಂದು ಕರೆಯಲಾಗುವ ಈ ಮೀನು 10 ಅಡಿಗೂ ಅಧಿಕ ಉದ್ದವಿದೆ. ಬಾಯಿಂದ ಗರಗಸ ಮಾದರಿಯ, ಮೊನಚಾದ ಹಲ್ಲುಗಳು ಹೊರ ಬಂದಿವೆ. ಕ್ರೇನ್ ಮೂಲಕ ಎತ್ತಿ ವಿಲೇವಾರಿ ಮಾಡಲಾಗಿದೆ. ಅಪಾಯದ ಅಂಚಿನಲ್ಲಿರುವ ಈ ಮೀನನ್ನು, ವನ್ಯಜೀವಿ ಸಂರಕ್ಷಣಾ ಕಾಯ್ದೆ ನಿಯಮಗಳ ಅನುಸಾರ ಅನುಬಂಧ 1ರಲ್ಲಿ ಗುರುತಿಸಲಾಗಿದೆ ಎಂದು ತಜ್ಞರು ತಿಳಿಸಿದ್ದಾರೆ.
ಉಡಾ ಅಧ್ಯಕ್ಷ ಮನೋಹರ್ ಕಲ್ಮಾಡಿ
ಉಡುಪಿ: ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ (ಉಡಾ)ದ ಅಧ್ಯಕ್ಷರಾಗಿ ಮನೋಹರ್ ಎಸ್. ಕಲ್ಮಾಡಿ ಅವರನ್ನು ನೇಮಿಸಿ ಸರಕಾರ ಆದೇಶಿಸಿದೆ. ಸದಸ್ಯರನ್ನಾಗಿ ಪ್ರವೀಣ್ ಕುಮಾರ್ ಶೆಟ್ಟಿ, ಕಿಶೋರ್ ಕುಮಾರ್, ಸುಮಾ ನಾಯ್ಕ, ಯೋಗೀಶ್ ಚಂದ್ರ ಅವರನ್ನು ಆಯ್ಕೆ ಮಾಡಿದೆ.
ಮನೋಹರ ಅವರು ಬಿಜೆಪಿಯಲ್ಲಿ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದು ಪ್ರಸ್ತುತ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ. ಈ ಹಿಂದೆ ಅಧ್ಯಕ್ಷರಾಗಿದ್ದ ಕೆ. ರಾಘವೇಂದ್ರ ಕಿಣಿ ಅವರು ರಾಜೀ ನಾಮೆ ನೀಡಿ ತೆರವಾದ ಈ ಸ್ಥಾನಕ್ಕೆ ನೇಮಕ ಆಗಿದೆ. ಶಾಸಕ ಕೆ. ರಘುಪತಿ ಭಟ್ ಅಭಿನಂದನೆ ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.