ನೆಗಡಿ – ಕೆಮ್ಮು, ಜ್ವರಕ್ಕೆ ತಪಾಸಣೆ ಕಡ್ಡಾಯ: ತಪಾಸಣೆ ಮಾಡಿಸಿಕೊಳ್ಳದಿದ್ದರೆ ಕಾನೂನು ಕ್ರಮ
Team Udayavani, Mar 15, 2020, 9:21 PM IST
ಕಲಬುರಗಿ: ಕೊರೊನಾ ಸೋಂಕಿನ ಕುರಿತ ವದಂತಿಗಳಿಗೆ ಜನತೆ ಕಿವಿಗೊಡಬಾರದು. ಮುನ್ನೆಚ್ಚರಿಕೆ ಕ್ರಮವಾಗಿ ನೆಗಡಿ, ಕೆಮ್ಮು ಮತ್ತು ಜ್ವರದಿಂದ ಬಳಲುತ್ತಿರುವವರು ಕಡ್ಡಾಯವಾಗಿ ತಪಾಸಣೆ ಮಾಡಿಸಿಕೊಳ್ಳಲೇಬೇಕು. ಯಾರು ತಪಾಸಣೆಗೆ ಒಳಗಾಗುವುದಿಲ್ಲವೋ ಅಂತವರ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಆರೋಗ್ಯ ಸಚಿವ ಶ್ರೀರಾಮುಲು ಎಚ್ಚರಿಕೆ ನೀಡಿದ್ದಾರೆ.
ನಗರದ ಜಿಮ್ಸ್ ಆಸ್ಪತ್ರೆ ಹಾಗೂ ಇಎಸ್‌ಐ ಆಸ್ಪತ್ರೆಯಲ್ಲಿ ಭಾನುವಾರ ಕೊರೊನಾ ಸೋಂಕಿತರು ಮತ್ತು ಶಂಕಿತರ ಚಿಕಿತ್ಸೆಗೆ ಕೈಗೊಂಡ ಕ್ರಮ ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಕೊರೊನಾ ಸೋಂಕು ಬಂದ ತಕ್ಷಣ ಅನಾಹುತವಾಗುವುದಿಲ್ಲ. ಯಾರೂ ಹೆದರಬಾರದು. ಚಿಕಿತ್ಸೆಗೆ ಬೇಕಾದಂತಹ ಎಲ್ಲಾ ವ್ಯವಸ್ಥೆಯನ್ನು ಆರೋಗ್ಯ ಇಲಾಖೆ ಮಾಡಿಕೊಂಡಿದೆ ಎಂದರು.
ಕೊರೊನಾ ಸೋಂಕಿಗೆ ಕಲಬುರಗಿ ವ್ಯಕ್ತಿಯೊಬ್ಬರು ಮೃತಪಟ್ಟ ಬಳಿಕ ಅವರ ಮನೆ ಸುತ್ತ-ಮುತ್ತ ಐದು ಕಿ.ಮೀ. ಪ್ರದೇಶವನ್ನು ಬಫರ್ ಝೋನ್ ಎಂದು ಗುರುತಿಸಲಾಗಿದೆ. ಆ ಪ್ರದೇಶದಿಂದ ಜನರು ಹೊರಬಾರದಂತೆ ನೋಡಿಕೊಳ್ಳಲಾಗುತ್ತಿದೆ. ಅವರ ಮನೆಗಳಿಗೆ ಆಹಾರದ ಕಿಟ್ ಸೇರಿದಂತೆ ಬೇಕಾದ ವ್ಯವಸ್ಥೆ ಮಾಡಿಕೊಡಲಾಗಿದೆ. ವಿವಿಧ ದೇಶಗಳಿಂದ ಕಲಬುರಗಿಗೆ 16 ಜನ ಬಂದಿದ್ದಾರೆ. ಅವರನ್ನೂ ಮನೆಯಲ್ಲೇ ಇಟ್ಟು ನಿಗಾ ವಹಿಸಲಾಗುತ್ತಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ
ಆಪರೇಷನ್ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ
ಆಪರೇಷನ್ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.