ಪೌರತ್ವ ಕಾಯ್ದೆ ತಿದ್ದುಪಡಿ ವಿರುದ್ದ ಕಾನೂನು ಹೋರಾಟ :ರಾಯರೆಡ್ಡಿ
Team Udayavani, Dec 11, 2019, 9:53 PM IST
ಬೆಂಗಳೂರು: ಕೇಂದ್ರ ಸರ್ಕಾರ ಪೌರತ್ವ ಕಾಯ್ದೆ ತಿದ್ದುಪಡಿ ಮಾಡಿರುವುದಕ್ಕೆ ರಾಷ್ಟ್ರಪತಿಗಳು ಅಂಕಿತ ಹಾಕಬಾರದು. ಈ ತಿದ್ದುಪಡಿ ವಿರುದ್ಧ ಕಾಂಗ್ರೆಸ್ ಕಾನೂನು ಹೋರಾಟ ಮಾಡಲಿದೆ ಎಂದು ಮಾಜಿ ಸಚಿವ ಬಸವರಾಜ್ ರಾಯರೆಡ್ಡಿ ಹೇಳಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಪ್ರತಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ದೇಶದಲ್ಲಿ ಪೌರತ್ವ ಹಕ್ಕು ತಿದ್ದುಪಡಿ 1955 ರಿಂದ ಜಾರಿಯಲ್ಲಿದೆ. ಈಗಾಗಲೆ ನಾಲ್ಕು ಬಾರಿ ತಿದ್ದುಪಡಿಯಾಗಿದೆ. ಹಿಂದು ಸಿಖ್, ಕ್ರಿಶ್ಚಿಯನ್, ಬೌದ್ಧ, ಜೈನ ಹಾಗೂ ಪಾರ್ಸಿ ಸಮುದಾಯದವರು ವಿದೇಶದಿಂದ ಬಂದು ಭಾರತದಲ್ಲಿ ವಾಸವಾದವರಿಗೆ ಭಾರತೀಯ ಪೌರತ್ವ ನೀಡಲು ಸರ್ಕಾರ ಮುಂದಾಗಿದೆ.
ಕೇಂದ್ರ ಸರ್ಕಾರ ದೇಶದಲ್ಲಿ ಪ್ರಥಮ ಬಾರಿಗೆ ಧರ್ಮಾಧಾರಿತ ಆಧಾರದಲ್ಲಿ ಕಾಯ್ದೆ ಜಾರಿಗೆ ತರಲು ಮುಂದಾಗಿದೆ. ಇದು ಸಂವಿಧಾನದ ಕಲಂ 14-15ರ ಉಲ್ಲಂಘನೆಯಾಗುತ್ತದೆ. ರಾಷ್ಟ್ರ ಪತಿಗಳು ಈ ತಿದ್ದುಪಡಿ ಮಸೂದೆಗೆ ಒಪ್ಪಿಗೆ ನೀಡಬಾರದು ಎಂದು ಆಗ್ರಹಿಸಿದರು.
ಎರಡನೇ ಮಹಾಯುದ್ಧ ನಂತರ ಭಾರತದ ಅಕ್ಕ ಪಕ್ಕದ ರಾಷ್ಟ್ರಗಳಿಂದ ನಮ್ಮ ದೇಶಕ್ಕೆ ಅಕ್ರಮವಾಗಿ ಲಕ್ಷಾಂತರ ಜನರು ವಲಸೆ ಬಂದಿದ್ದಾರೆ. ಜಮ್ಮು ಕಾಶ್ಮೀರದ ಪಿಒಕೆ ಭಾಗದಲ್ಲಿ ವಲಸೆ ಬಂದಿ¨ªಾರೆ. ಭರ್ಮಾದಲ್ಲಿ ರೊಹಿಂಗ್ಯಾ.ದಾಳಿಯಿಂದ ಅಕ್ರಮವಾಗಿ ವಲಸೆ ಬಂದಿ¨ªಾರೆ. ಕೇಂದ್ರ ಸರ್ಕಾರ ಆರು ವರ್ಷ ಯಾರು ಭಾರತದಲ್ಲಿ ಇರುತ್ತಾರೊ ಅವರಿಗೆ ಭಾರತಿಯ ಪೌರತ್ವ ನೀಡಲು ಉದ್ದೇಶಿಸಿದೆ. ಭಾರತಕ್ಕೆ ವಲಸೆ ಬಂದಿರುವ ಮುಸ್ಲಿಂರನ್ನು ಏನು ಮಾಡುತ್ತಾರೆ ಎಂದು ಪ್ರಶ್ನಿಸಿದರು. ಮುಂದಿನ ವರ್ಷ ಪಶ್ಚಿಮ ಬಂಗಾಳದಲ್ಲಿ ಚುನಾವಣೆ ಇರುವುದರಿಂದ ಲಾಭ ಮಾಡಿಕೊಳ್ಳಲು ಬಿಜೆಪಿ ಈ ಕೆಲಸ.ಮಾಡುತ್ತಿದೆ ಎಂದು ಆರೋಪಿಸಿದರು.
ನಾಝಿ ನಾಯಕ ಹಿಟ್ಲರ್ ಕೂಡ ಜರ್ಮನರನ್ನು ಹೊರತು ಪಡೆಸಿ ಬೆರೆ ಯಾರೂ ದೇಶದಲ್ಲಿ ಇರದಂತೆ ಮಾಡಿದ್ದ ಈಗ ಕೇಂದ್ರ ಸರ್ಕಾರ ಅದನ್ನೆ ಮಾಡಲು ಹೊರಟಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.