ದಂಡ ಇಳಿಕೆಗೆ ಕಾನೂನು ಅಡ್ಡಿ?
5 ಉಲ್ಲಂಘನೆಗಳ ದಂಡ ತಗ್ಗಿಸಲು ಮಾತ್ರ ಅವಕಾಶ
Team Udayavani, Sep 18, 2019, 5:55 AM IST
ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆಗೆ ವಿಧಿಸಿರುವ ಭಾರೀ ದಂಡ ಪ್ರಮಾಣವನ್ನು ತಗ್ಗಿಸಲು ರಾಜ್ಯ ಸರಕಾರ ಮುಂದಾಗಿದ್ದರೂ ಕಾಯ್ದೆಯಲ್ಲಿ ನಾಲ್ಕೆ „ದು ಪ್ರಕರಣಗಳನ್ನು ಹೊರತುಪಡಿಸಿ ಉಳಿದ ಯಾವುದಕ್ಕೂ ಅವಕಾಶ ಇಲ್ಲ. ಹಾಗಾಗಿ ದಂಡ ಇಳಿಸುವ ಚಿಂತನೆ ನಡೆಸಿದ್ದ ಸರಕಾರ ಈಗ ಇಕ್ಕಟ್ಟಿಗೆ ಸಿಲುಕಿದೆ.
ಕೇಂದ್ರ ಸರಕಾರದ ಮೋಟಾರು ವಾಹನ ಕಾಯ್ದೆಗೆ ಸೆಕ್ಷನ್ 200ರಡಿ ತಿದ್ದುಪಡಿ ತಂದಿದೆ. ಇದರಲ್ಲಿ ಒಟ್ಟಾರೆ 24 ನಿಯಮ ಉಲ್ಲಂಘನೆ ಪ್ರಕರಣಗಳಿಗೆ ದಂಡದ ಮೊತ್ತವನ್ನು ಭಾರೀ ಪ್ರಮಾಣದಲ್ಲಿ ಹೆಚ್ಚಳ ಮಾಡಲಾಗಿತ್ತು. ಇದನ್ನು ಯಥಾವತ್ತಾಗಿ ಜಾರಿಗೊಳಿಸಿದ ರಾಜ್ಯ ಸರಕಾರ, ಸೆ. 3ರಂದು ಅಧಿಸೂಚನೆ ಹೊರಡಿಸಿತ್ತು. ಅನಂತರದಲ್ಲಿ ವಾಹನ ಸವಾರರಿಂದ ತೀವ್ರ ಆಕ್ಷೇಪ ವ್ಯಕ್ತವಾದ ಹಿನ್ನೆಲೆಯಲ್ಲಿ ದಂಡದ ಪ್ರಮಾಣ ಇಳಿಸಲು ಮುಂದಾಗಿತ್ತು. ಆದರೆ ತಿದ್ದುಪಡಿ ನಿಯಮದಲ್ಲಿ ಐದು ಪ್ರಕರಣಗಳಿಗೆ ಮಾತ್ರ ದಂಡದ ಮೊತ್ತ ಪರಿಷ್ಕರಿಸುವ ಅಧಿಕಾರ ಇದೆ ಎಂದು ಕಾನೂನು ಇಲಾಖೆ ಅಭಿಪ್ರಾಯಪಟ್ಟಿದೆ.
ಗುಜರಾತ್ನಲ್ಲಿ 11 ಪ್ರಕರಣಗಳ ದಂಡ ಕಡಿಮೆ ಮಾಡಿದ್ದು, ಆ ಮಾದರಿ ಅನುಸರಿಸಬೇಕಾದರೆ ಕರ್ನಾಟಕ ಇನ್ನೂ ಕನಿಷ್ಠ 6 ಪ್ರಕರಣಗಳಲ್ಲಿ ಕೇಂದ್ರದಿಂದ ಅನುಮತಿ ಪಡೆಯಬೇಕಾಗುತ್ತದೆ ಎಂದು ಕಾನೂನು ಇಲಾಖೆಯು ಸಾರಿಗೆ ಇಲಾಖೆಗೆ ತಿಳಿಸಿದೆ.
ಐದಕ್ಕೆ ಮಾತ್ರ ಪರಿಷ್ಕರಣೆ ?
ಕಾನೂನು ಇಲಾಖೆ ಪ್ರಕಾರ ಸದ್ಯಕ್ಕೆ ಅವಕಾಶ ಇರುವ ಐದು ನಿಯಮಗಳ ಉಲ್ಲಂಘನೆಯ ದಂಡದ ಪ್ರಮಾಣವನ್ನು ಕಡಿಮೆ ಮಾಡಲಾಗುವುದು. ಉಳಿದ ಉಲ್ಲಂಘನೆಗಳಿಗೆ ಇರುವ ದಂಡದ ಪ್ರಮಾಣ ತಾತ್ಕಾಲಿಕವಾಗಿ ಮುಂದುವರಿಸಲಾಗುವುದು ಎಂದು ಹೆಸರು ಹೇಳಲಿಚ್ಛಿಸದ ಸಾರಿಗೆ ಇಲಾಖೆ ಉನ್ನತ ಅಧಿಕಾರಿಯೊಬ್ಬರು ತಿಳಿಸಿದರು.
ಯಾವುದರ ಬದಲಾವಣೆಗೆ ಅವಕಾಶ ?
– ವಾಹನ ಚಾಲನೆ ವೇಳೆ ಮೊಬೈಲ್ ಬಳಕೆ
– ಅತೀ ವೇಗವಾಗಿ ವಾಹನ ಚಾಲನೆ
– ಸಂಚಾರ ಪೊಲೀಸ್ ಅಥವಾ ಸಾರಿಗೆ ಅಧಿಕಾರಿಗಳ ಸೂಚನೆಯನ್ನು ಪಾಲಿಸದಿರುವುದು
– ಅಪಾಯಕಾರಿ ಚಾಲನೆ
– ನೋಂದಣಿ ಇಲ್ಲದ ವಾಹನ ಚಾಲನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Cricket: ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.