Legislative Council: ಅಭ್ಯರ್ಥಿ ಆಯ್ಕೆ ಬಗ್ಗೆ ರಾಜ್ಯ ನಾಯಕರಿಂದ ಅಭಿಪ್ರಾಯ ಸಂಗ್ರಹ: ಕುಂಪಲ
Team Udayavani, Sep 22, 2024, 2:55 AM IST
ಪುತ್ತೂರು: ವಿಧಾನ ಪರಿಷತ್ ಅಭ್ಯರ್ಥಿ ಆಯ್ಕೆಯ ಬಗ್ಗೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಶಾಸಕ ಪ್ರೀತಂ ಗೌಡ ನೇತೃತ್ವದಲ್ಲಿ ಜಿಲ್ಲೆಯ ಪ್ರಮುಖರೊಂದಿಗೆ ಅಭಿಪ್ರಾಯ ಸಂಗ್ರಹ ನಡೆದಿದೆ. ಗೆಲುವಿನ ಬಗ್ಗೆ ಸಂಘಟನಾತ್ಮಕವಾಗಿ ಕೆಲಸ ಮಾಡುವ ನಿಟ್ಟಿನಲ್ಲಿ ಅವರು ಪಕ್ಷದ ಹಿರಿಯರ ಜತೆಗೆ ಚರ್ಚಿಸಿದ್ದಾರೆ ಎಂದು ಬಿಜೆಪಿ ದ.ಕ.ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹೇಳಿದ್ದಾರೆ.
ಪತ್ರಕರ್ತರ ಜತೆ ಮಾತನಾಡಿದ ಅವರು, ಎರಡೂ ಜಿಲ್ಲೆಯವರು ಅಭಿಪ್ರಾಯ ತಿಳಿಸಿದ್ದಾರೆ. ಅಂತಿಮವಾಗಿ ಅಭ್ಯರ್ಥಿಯನ್ನು ಪಕ್ಷದ ಹೈಕಮಾಂಡ್ ನಿರ್ಧರಿಸಲಿದೆ. ಕಾರ್ಯಕರ್ತರಿಗೆ ಗೆಲುವು ಮುಖ್ಯವೇ ಹೊರತು ಅಭ್ಯರ್ಥಿ ಯಾರು ಎಂಬುದಲ್ಲ ಎಂದರು.
ಸ್ಥಾನಮಾನ ವರಿಷ್ಠರ ನಿರ್ಧಾರ
ಅರುಣ್ ಕುಮಾರ್ ಪುತ್ತಿಲ ಅವರಿಗೆ ಜವಾಬ್ದಾರಿ ನೀಡುವ ಬಗ್ಗೆ ವರಿಷ್ಠರು ನಿರ್ಧರಿಸಲಿದ್ದಾರೆ. ಈ ವಿಷಯ ರಾಜ್ಯಮಟ್ಟದಲ್ಲಿ ತೀರ್ಮಾನವಾಗಲಿದೆ. ಅವರು ನೀಡುವ ತೀರ್ಮಾನಕ್ಕೆ ನಾವು ಬದ್ಧರಿದ್ದೇವೆ. ಅರುಣ್ ಪುತ್ತಿಲರಿಗೆ ಜವಾಬ್ದಾರಿ ನೀಡಬೇಕು ಎಂದು ನಾವು ವರಿಷ್ಠರಿಗೆ ಮನವಿ ಮಾಡಿದ್ದೇವೆ ಎಂದು ಸತೀಶ್ ಹೇಳಿದರು.
ಆರೋಪ ಮುಕ್ತರಾಗಿ ಬರುವ ವಿಶ್ವಾಸ ಇದೆ
ಪುತ್ತಿಲ ವಿರುದ್ಧ ದಾಖಲಾಗಿರುವ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ ಸತೀಶ್ ಕುಂಪಲ, ಅರುಣ್ ಪುತ್ತಿಲ ಅವರು ಪುತ್ತೂರು ಭಾಗದ ಪ್ರಬಲ ಜನ ನಾಯಕ. ಆರೋಪಕ್ಕೆ ಧೃತಿಗೆಡದೆ ಅವರು ಕಾನೂನು ಮಾರ್ಗದಲ್ಲಿ ನ್ಯಾಯಕ್ಕಾಗಿ ಹೋರಾಟ ಆರಂಭಿಸಿದ್ದಾರೆ. ಜಾಮೀನು ಸಿಕ್ಕಿದೆ. ಪ್ರಕರಣ ನ್ಯಾಯಾಲಯದಲ್ಲಿರುವ ಕಾರಣ ನಾನೇನೂ ಮಾತನಾಡುವುದಿಲ್ಲ. ಅವರು ಆರೋಪ ಮುಕ್ತರಾಗಿ ಬರುವ ವಿಶ್ವಾಸ ಇದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.