Viral Video: ಚಿರತೆಯನ್ನು ಕೊಂದು ಮರಕ್ಕೆ ನೇತುಹಾಕಿದ ಗ್ರಾಮಸ್ಥರು! ಪ್ರಕರಣ ದಾಖಲು
Team Udayavani, Feb 14, 2024, 11:26 AM IST
ಶಾಮ್ಲಿ(ಉತ್ತರಪ್ರದೇಶ): ಚಿರತೆಯನ್ನು ಕೊಂದು ಹಗ್ಗದಿಂದ ಕಟ್ಟಿ ಮರದಲ್ಲಿ ತಲೆಕೆಳಗೆ ಮಾಡಿ ನೇತುಹಾಕಿರುವ ಆಘಾತಕಾರಿ ಘಟನೆ ಉತ್ತರಪ್ರದೇಶದ ಶಾಮ್ಲಿ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಇದನ್ನೂ ಓದಿ:Bollywood: ಈಗ ಬರುವವನು ಸೈತಾನ್.. ʼಸಿಂಗಂ ಎಗೇನ್ʼನಲ್ಲಿ ವಿಲನ್ ಆದ ಅರ್ಜುನ್ ಕಪೂರ್
ಮಂಗಳವಾರ(ಫೆ.13) ಈ ಘಟನೆ ಉತ್ತರಪ್ರದೇಶದ ಶಾಮ್ಲಿಯ ಕಾಂದ್ಲಾ ಪೊಲೀಸ್ ಠಾಣಾ ವ್ಯಾಪ್ತಿಯ ಕಣಿಯಾನ್ ಗ್ರಾಮದಲ್ಲಿ ನಡೆದಿರುವುದಾಗಿ ವರದಿ ವಿವರಿಸಿದೆ. ಚಿರತೆಯನ್ನು ಕೊಂದು ಗ್ರಾಮದಲ್ಲಿರುವ ಮರವೊಂದಕ್ಕೆ ಹಗ್ಗದಿಂದ ಕಟ್ಟಿ ನೇತುಹಾಕಲಾಗಿದೆ.
ಗ್ರಾಮಸ್ಥರಿಂದ ವಿಷಯ ತಿಳಿದ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಚಿರತೆಯ ಶವವನ್ನು ತಮ್ಮ ವಶಕ್ಕೆ ತೆಗೆದುಕೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಅರಣ್ಯಾಧಿಕಾರಿಗಳು ಅಗತ್ಯವಿರುವ ದಾಖಲೆಗಳನ್ನು ಸಂಗ್ರಹಿಸಿ, ಚಿರತೆ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿರುವುದಾಗಿ ವರದಿ ತಿಳಿಸಿದೆ.
शामली
➡शामली में पेड़ पर लटका मिला तेंदुए का शव
➡शव के पास एक और तेंदुए के होने की चर्चा
➡वन विभाग की टीम ने शव कब्जे में लिया
➡थाना कांधला क्षेत्र कनियान गांव का मामला#Shamli
देखें वीडियो : https://t.co/bJkLif8Qrd pic.twitter.com/q2byL9t2to
— भारत समाचार | Bharat Samachar (@bstvlive) February 13, 2024
ಘಟನೆ ಬಗ್ಗೆ ತನಿಖೆ ಕೈಗೊಂಡಿರುವ ಅರಣ್ಯಾಧಿಕಾರಿಗಳು ಇಂತಹ ಪೈಶಾಚಿಕ ಕೃತ್ಯ ಎಸಗಿರುವ ಆರೋಪಿಗಳನ್ನು ಸೆರೆ ಹಿಡಿಯಲಾಗುವುದು ಎಂದು ತಿಳಿಸಿದ್ದಾರೆ. ಮತ್ತೊಂದು ಘಟನೆಯಲ್ಲಿ ಅರಣ್ಯಾಧಿಕಾರಿಗಳು ಸೋಮವಾರ ಶಾಮ್ಲಿ ಗ್ರಾಮದಲ್ಲಿ ಕಾಣಿಸಿಕೊಂಡಿದ್ದ ಚಿರತೆಯನ್ನು ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ
Speeding Truck : ಟ್ರಕ್ ನಡಿ ಸಿಲುಕಿದ ಬೈಕ್ ಸವಾರರನ್ನು 1ಕಿ.ಮೀ ದೂರ ಎಳೆದೊಯ್ದ ಚಾಲಕ…
Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.