BJPಯವರು ಪ್ರಾಯಶ್ಚಿತ್ತ ಯಾತ್ರೆ ಮಾಡಲಿ’: ಎಂಎಲ್‌ಸಿ ಐವನ್ ಡಿ’ಸೋಜಾ
Team Udayavani, Aug 4, 2024, 12:33 AM IST
ಮಂಗಳೂರು: ಬಿಜೆಪಿಯವರು ಕಾಂಗ್ರೆಸ್ ಸರಕಾರದ ವಿರುದ್ಧ ಪಾದಯಾತ್ರೆ ಮಾಡುವ ಬದಲು ತಮ್ಮ ಆಡಳಿತ ಅವಧಿಯಲ್ಲಿ ನಡೆದಿರುವ ಭ್ರಷ್ಟಾಚಾರ, ಹಗರಣಗಳಿಗೆ ಪ್ರಾಯಶ್ಚಿತ್ತ ಯಾತ್ರೆ ಮಾಡಲಿ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜಾ ಹೇಳಿದರು.
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದಿನ ಸರಕಾರದ ಅವಧಿಯಲ್ಲಿ ಬೋವಿ ನಿಗಮದಲ್ಲಿ 87 ಕೋ. ರೂ., ಅಂಬೇಡ್ಕರ್ ನಿಗಮದಲ್ಲಿ 4.95 ಕೋ.ರೂ., ದೇವರಾಜ್ ಟ್ರಕ್ ಟರ್ಮಿನಲ್‌ನಲ್ಲಿ 47 ಕೋ. ರೂ., ಕೆಐಎಡಿಬಿಯಲ್ಲಿ 60 ಕೋ. ರೂ., ಕೊರೊನಾ ಅವಧಿಯಲ್ಲಿ 2,000 ಕೋ.ರೂ.ಗಳಿಗೂ ಅಧಿಕ ಹಗರಣಗಳಾಗಿವೆ.
ಬಿಜೆಪಿಯವರು ಈ ಹಗರಣಗಳಿಗೆ ಸಂಬಂಧಿಸಿ ಆಗ ಮುಖ್ಯಮಂತ್ರಿ, ಸಚಿವರಾಗಿದ್ದ ಬಸವರಾಜ ಬೊಮ್ಮಾಯಿ, ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಡಾ| ಸುಧಾಕರ್, ಕೋಟ ಶ್ರೀನಿವಾಸ ಪೂಜಾರಿ ಮನೆಗೆ ಪಾದಯಾತ್ರೆ ನಡೆಸಲಿ ಎಂದರು.
ಸಿದ್ದರಾಮಯ್ಯ ಹೆಸರಿನಲ್ಲಿ ಪಾದಯಾತ್ರೆ ಮಾಡಿದರೆ, ನಾವು ಸುಮ್ಮನೆ ಬಿಡುವುದಿಲ್ಲ. ಜನರ ಬಳಿ ಹೋಗಿ ಬಿಜೆಪಿಯ ಭ್ರಷ್ಟಾಚಾರವನ್ನು ತೆರೆದಿಡುತ್ತೇವೆ. ರಾಜ್ಯ ಸರಕಾರವನ್ನು ಅಸ್ಥಿರಗೊಳಿಸಲು ಬಿಜೆಪಿಗೆ ಈ ಜನ್ಮ ಮಾತ್ರ ಅಲ್ಲ ಮುಂದಿನ ಜನ್ಮದಲ್ಲೂ ಸಾಧ್ಯ ಇಲ್ಲ ಎಂದರು.
ರಾಜ್ಯಪಾಲರಿಂದ ಸಂವಿಧಾನ ವಿರೋಧಿ ನಡೆ
ಪ್ರಜಾಪ್ರಭುತ್ವ ವ್ಯವಸ್ಥೆಯಡಿ ಆಯ್ಕೆಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ನೊಟೀಸ್ ನೀಡುವ ಮೂಲಕ ರಾಜ್ಯಪಾಲರು ಸಂವಿಧಾನ ವಿರೋಧಿ ನಡೆ ಅನುಸರಿಸಿದ್ದಾರೆ. ಆದ್ದರಿಂದ ರಾಜ್ಯಪಾಲರು ತತ್‌ಕ್ಷಣ ನೋಟಿಸನ್ನು ಹಿಂಪಡೆಯಬೇಕು. ಇಲ್ಲವಾದರೆ ಕಾನೂನು ಹೋರಾಟದ ಜತೆಗೆ ಬೀದಿಗಿಳಿದೂ ಹೋರಾಟ ಮಾಡಲಿದ್ದೇವೆ ಎಂದು ಐವನ್ ಡಿ’ಸೋಜಾ ಹೇಳಿದರು.
ಸೈಟ್ ನೀಡಿರುವುದು ಬಿಜೆಪಿ ಅವಧಿಯಲ್ಲಿ
ಮುಡಾ ಪ್ರಕರಣದಲ್ಲಿ ಜಾಗ ಕಳೆದುಕೊಂಡಿದ್ದ ಸಿದ್ದರಾಮಯ್ಯ ಅವರ ಪತ್ನಿಗೆ ಸೈಟ್ ನೀಡಿರುವುದು ಬಿಜೆಪಿ ಅವಧಿಯಲ್ಲಿ. ಒಂದು ವೇಳೆ ಅಕ್ರಮ ಆಗಿದೆ ಎಂದಾದರೆ ನೋಟಿಸ್ ನೀಡಬೇಕಿರುವುದು ಸಿದ್ಧರಾಮಯ್ಯರ ಪತ್ನಿಗೆ, ಮುಡಾ ಅಧಿಕಾರಿಗಳಿಗೆ ಹಾಗೂ ಆ ಅವಧಿಯಲ್ಲಿ ಅಧಿಕಾರದಲ್ಲಿದ್ದವರಿಗೆ. ಅದು ಬಿಟ್ಟು ಕೇಂದ್ರ ಸರಕಾರದ ಅಣತಿಯಂತೆ ಕಾನೂನು ಪರಿಮಿತಿ ತಿಳಿಯದೆ ರಾಜ್ಯಪಾಲರು ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಮುಖಂಡರಾದ ಎಂ.ಶಶಿಧರ್ ಹೆಗ್ಡೆ, ಅಶ್ರಫ್ ಕೆ., ಪ್ರಕಾಶ್ ಸಾಲಿಯಾನ್, ಅಪ್ಪಿ, ಕಿರಣ್ ಬುಡ್ಲೆಗುತ್ತು, ಸತೀಶ್ ಪೆಂಗಲ್, ಭಾಸ್ಕರ ರಾವ್, ಪ್ರೇಮನಾಥ್, ಮೀನಾ ಟೆಲ್ಲಿಸ್, ವಿಕಾಸ್ ಶೆಟ್ಟಿ, ಇಮ್ರಾನ್, ಅಬ್ದುಲ್ ಸಲೀಂ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.