CM Siddaramaiah ರಾಜೀನಾಮೆ ನೀಡಲಿ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ
ಮುಡಾದಲ್ಲಿ ಸಿಎಂ ಪತ್ನಿಗೆ 15 ನಿವೇಶನ, ಸಿಬಿಐ ತನಿಖೆ ಆಗಲೇಬೇಕೆಂದು ಒತ್ತಾಯ
Team Udayavani, Jul 4, 2024, 12:14 AM IST
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ತವರಿನಲ್ಲೇ ಇರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮೂಡಾ) 4 ಸಾವಿರ ಕೋಟಿ ರೂ.ಗೂ ಅಧಿಕ ಮೊತ್ತದ ಹಗರಣ ಬಯಲಾಗಿದ್ದು, ಸಿಎಂ ಕುಟುಂಬದವರ ಮೇಲೆಯೇ ಆರೋಪಗಳಿರುವುದರಿಂದ ಸಿಬಿಐ ತನಿಖೆ ಆಗಲೇಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಗ್ರಹಿಸಿದರು.
ಸಿಎಂ ಮನೆ ಮುತ್ತಿಗೆ ವೇಳೆ ಅವರು ಮಾತನಾಡಿ, ಇದು ಸಿಎಂ, ಸಚಿವರ ಬುಡಕ್ಕೆ ಬರಲಿದೆ. ಮುಖ್ಯಮಂತ್ರಿಗಳ ಮುಖವಾಡವೂ ಕಳಚಿಬಿದ್ದಿದ್ದು, ಮುಖ್ಯಮಂತ್ರಿಗಳೂ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು. ವಿಧಾನಸಭಾ ಚುನಾವಣೆ ವೇಳೆ ಭ್ರಷ್ಟಾಚಾರರಹಿತ ಆಡಳಿತ ಕೊಡುವುದಾಗಿ ಭಾಷಣ ಮಾಡಿದ್ದರು. ಮತ್ತೂಂದೆಡೆ ವಿನಯ್ ಕುಲಕರ್ಣಿ ಅವರೂ ಸಚಿವರ ಮೇಲೆ ಆರೋಪ ಮಾಡಿದ್ದಾರೆ. ಈಗ ಹಲವಾರು ಹಗರಣಗಳು ನಡೆದಿವೆ. ಒಂದೆಡೆ ಬೆಲೆ ಏರಿಕೆ, ಇನ್ನೊಂದೆಡೆ ಹಗಲು ದರೋಡೆಯಲ್ಲಿ ರಾಜ್ಯ ಸರಕಾರ ನಿರತವಾಗಿದೆ ಎಂದು ಟೀಕಿಸಿದರು.
ರಾತ್ರೋ ರಾತ್ರಿ ಕಡತ ತಂದ ಸಚಿವ
ಶೇ. 50:50ರ ಅನುಪಾತದಲ್ಲಿ ಮುಖ್ಯಮಂತ್ರಿಗಳ ಪತ್ನಿಗೆ 15 ನಿವೇಶನಗಳನ್ನು ಕೊಟ್ಟಿ¨ªಾರೆ. ಸಚಿವ ಬೈರತಿ ಸುರೇಶ್ ಅವರು ಮೈಸೂರಿಗೆ ಹೋಗಿ ಅಧಿಕಾರಿಗಳ ವರ್ಗಾವಣೆ ಮಾಡಿ, ಹಗರಣಕ್ಕೆ ಸಂಬಂಧಿಸಿದ ಕಡತಗಳನ್ನು ಬೆಂಗಳೂರಿಗೆ ತೆಗೆದುಕೊಂಡು ಬಂದಿದ್ದಾರೆ. ಈ ಹಗರಣ ಮುಚ್ಚಿ ಹಾಕುವ ಸಂಪೂರ್ಣ ಪ್ರಯತ್ನ ನಡೆದಿದೆ. ಸುರೇಶ್ ಅವರು ಕಡತಗಳ ಜತೆ ಬಂದಿದ್ದು, ಅವುಗಳನ್ನು ತಿದ್ದುವ ಕೆಲಸ ಆಗಲಿದೆ ಎಂದು ಆರೋಪಿಸಿದರು. ತನಿಖೆ ಆಗುವವರೆಗೆ ಮುಖ್ಯಮಂತ್ರಿಗಳು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು.
ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿಲ್ಲವೇಕೆ?
ಮೈಸೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ 4 ಸಾವಿರ ಕೋಟಿಗೂ ಹೆಚ್ಚು ಮೊತ್ತದ ಹಗರಣ ಬಯಲಿಗೆ ಬಂದಿದೆ. ಸಚಿವ ಬೈರತಿ ಸುರೇಶ್ ಅವರು ಅಧಿಕಾರಿಗಳನ್ನು ಅಮಾನತು ಮಾಡದೆ, ವರ್ಗಾವಣೆ ಮಾಡಿ, ಕಡತಗಳನ್ನು ಒಯ್ದಿದ್ದಾರೆ. ಸಾವಿರಾರು ಕೋಟಿ ಹಗರಣದ ಕುರಿತು ಜಿಲ್ಲಾಧಿಕಾರಿಗಳು ಆರೇಳು ತಿಂಗಳ ಹಿಂದೆ ವರದಿ ನೀಡಿದ್ದರು. ಹಗರಣದ ವಿಚಾರ ಗೊತ್ತಿದ್ದರೂ ಇದನ್ನು ಮುಚ್ಚಿಟ್ಟಿದ್ದರು ಎಂದ ವಿಜಯೇಂದ್ರ, ನಿಮಗೆ ತಾಕತ್ತಿದ್ದರೆ ಅಧಿಕಾರಿಗಳನ್ನು ಅಮಾನತು ಮಾಡಬೇಕಿತ್ತು ಎಂದು ಸವಾಲು ಹಾಕಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Suspension: ಸಿ.ಟಿ. ರವಿ ಪ್ರಕರಣ; ಖಾನಾಪುರ ಸಿಪಿಐ ಅಮಾನತು
CT Ravi:ಪ್ರಕರಣ ಮುಗಿದ ಬಳಿಕ ಧರ್ಮಸ್ಥಳಕ್ಕೂ,ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೂ ಹೋಗುತ್ತೇನೆ
Jammu and Kashmir: ಕಂದಕಕ್ಕೆ ಉರುಳಿದ ಸೇನಾ ವಾಹನ; ಕುಂದಾಪುರದ ಯೋಧ ಅನೂಪ್ ಹುತಾತ್ಮ
Shivaraj Kumar: ಶಿವರಾಜ್ ಕುಮಾರ್ ಅವರ ಆಪರೇಷನ್ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ
Financial Status: 42,000 ಕೋಟಿ ರೂ. ಸಾಲದ ಸುಳಿಯಲ್ಲಿ ಎಸ್ಕಾಂಗಳು!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi: ನಕಲಿ ಕೇಸ್ ನಲ್ಲಿ ಸಿಎಂ ಅತಿಶಿ ಬಂಧನಕ್ಕೆ ಇ.ಡಿ, ಸಿಬಿಐಗೆ ಬಿಜೆಪಿ ಆದೇಶ: ಕೇಜ್ರಿ!
Suspension: ಸಿ.ಟಿ. ರವಿ ಪ್ರಕರಣ; ಖಾನಾಪುರ ಸಿಪಿಐ ಅಮಾನತು
Amit Shah ರಾಜೀನಾಮೆಗೆ ಒತ್ತಾಯಿಸಿ ಡಿ.28ಕ್ಕೆ ವಿಜಯಪುರ ಬಂದ್
CT Ravi:ಪ್ರಕರಣ ಮುಗಿದ ಬಳಿಕ ಧರ್ಮಸ್ಥಳಕ್ಕೂ,ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೂ ಹೋಗುತ್ತೇನೆ
Mudhol: ಮರಕ್ಕೆ ಡಿಕ್ಕಿ ಹೊಡೆದು ಕಾರು ಪಲ್ಟಿ; ಓರ್ವ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.