ಕಾಗೆಯ ಗುಣಗಳನ್ನು ಅಳವಡಿಸಿಕೊಳ್ಳೋಣ


Team Udayavani, Jun 19, 2021, 6:30 AM IST

ಕಾಗೆಯ ಗುಣಗಳನ್ನು ಅಳವಡಿಸಿಕೊಳ್ಳೋಣ

ಜಗತ್ತಿನಲ್ಲಿ ಹಲವು ವಿಧದ, ಬಣ್ಣದ, ರೂಪದ, ಗಾತ್ರದ ಪಕ್ಷಿಗಳಿದ್ದು, ಅವೆಲ್ಲದರ ಪೈಕಿ ಅತ್ಯಂತ ಹೆಚ್ಚು ಅನಾದರಕ್ಕೆ ಒಳಗಾದ ಪಕ್ಷಿಯೆಂದರೆ ಕಾಗೆ. ಬಣ್ಣದಲ್ಲಿ ಕಪ್ಪು, ಕೂಗಿನಲ್ಲಿ ಕರ್ಕಶ ಇವೆಲ್ಲ ಕಾರಣಗಳಿಂದ ಮನುಷ್ಯನಿಗೆ ಕಾಗೆಗಳೆಂದರೆ ಅಷ್ಟಕ್ಕಷ್ಟೇ.
ಆದರೆ ಜಗತ್ತಿನ ಜೀವವಿಜ್ಞಾನಿಗಳು ಮತ್ತು ಮಹಾನ್‌ ಆಡಳಿತಗಾರನಾದ ಚಾಣಕ್ಯ ಹೇಳುವಂತೆ ಮನುಷ್ಯನು ಕಾಗೆಯಿಂದ ಕಲಿಯಬೇಕಾಗಿರುವ ಬಹಳಷ್ಟು ವಿಚಾರಗಳಿವೆ. ಅದರಲ್ಲೂ ಮುಖ್ಯವಾಗಿ ಕಾಗೆಯಲ್ಲಿ ಇರುವ ಯಶಸ್ಸಿನ ಗುಣಗಳನ್ನು ಎಲ್ಲರೂ ಕಲಿಯಲೇಬೇಕು.

ಕಾಗೆಯಿಂದ ಕಲಿಯಬೇಕಾದ ಮೊದಲನೆಯ ಗುಣವೆಂದರೆ “ಅನ್ನದ ಅಗುಳೊಂದ ಕಂಡರೆ ಕೂಗಿ ಕರೆಯದೇ ಕಾಗೆಯೊಂದು ತನ್ನ ಬಳಗವನ್ನು’ ಎಂಬ ಮಾತೇ ಇರುವಂತೆ ಕಾಗೆಯು ಒಂದು ತುತ್ತು ಆಹಾರ ಸಿಕ್ಕರೂ ಅದನ್ನು ತನ್ನ ಬಳಗದೊಂದಿಗೆ ಹಂಚಿಕೊಂಡು ತಿನ್ನುತ್ತದೆ. ಒಂದು ಅಗುಳು ಅನ್ನದ ಮೌಲ್ಯ ಹಾಗೂ ಹಸಿವಿನ ಬೆಲೆ ಕಾಗೆಗೆ ಚೆನ್ನಾಗಿ ತಿಳಿದಿದೆ. ಹಾಗಾಗಿ ತನಗೆ ಏನಾದರೂ ತಿನ್ನಲು ಸಿಕ್ಕರೆ ತತ್‌ಕ್ಷಣ ಅದು ತನ್ನ ಬಳಗವನ್ನೆಲ್ಲ ಕೂಗಿ ಕರೆಯುತ್ತದೆ. ಆದರೆ ಮನುಷ್ಯನು ಸ್ವಾರ್ಥ ಜೀವಿ ಯಾಗಿದ್ದು, ತನಗೇನಾದರೂ ಸಿಕ್ಕರೆ ಅದು ತನಗೊಬ್ಬನಿಗೇ ಸೇರಬೇಕು ಎನ್ನುವ ಲಾಲಸೆಯ ಗುಣಕ್ಕೆ ಬದಲಾಗಿ ಎಲ್ಲರಿಗೂ ಹಂಚಿ ತಿನ್ನುವಂತಹ ಗುಣ ವನ್ನು ಹೊಂದಬೇಕಿದೆ. ಇದರಿಂದ ಮನುಷ್ಯನಲ್ಲಿನ ಸ್ವಾರ್ಥ ಮನೋಭಾವ ತನ್ನಿಂತಾನಾಗಿಯೇ ಮಾಯವಾಗಿ ಆತ ವಿಶಾಲಹೃದಯಿಯಾಗುತ್ತಾನೆ.

ಕಾಗೆಯ ಇನ್ನೊಂದು ವಿಶೇಷ ಗುಣ ವೆಂದರೆ ತನ್ನ ಶತ್ರುಗಳು ಯಾರಾದರೂ ತನ್ನ ಮೇಲೆ, ತನ್ನ ಗೂಡಿನ ಮೇಲೆ ಅಥವಾ ತನ್ನ ಕುಟುಂಬದ ಮೇಲೆ ದಾಳಿಯನ್ನು ಮಾಡಿದರೆ ಅಥವಾ ದಾಳಿ ಮಾಡುವ ಮುನ್ಸೂಚನೆ ದೊರೆತರೆ ಶತ್ರುಗಳ ಮೇಲೆ ಏಕಾಂಗಿಯಾಗಿಯೂ ಪ್ರತಿಯಾಗಿ ದಾಳಿ ನಡೆಸಿ ಶತ್ರುವನ್ನು ಬಿಟ್ಟೂಬಿಡದೆ ಕಾಡಿ ಹೈರಾಣಾಗಿಸುತ್ತದೆ. ತನ್ನ ಹಾಗೂ ತನ್ನ ಕುಟುಂಬದ ರಕ್ಷಣೆಗೆ ತನಗೆ ಅಪಾಯವಿದ್ದರೂ ಕಾಗೆಯು ಭೀತಿಗೊಳ್ಳದೇ ಧೈರ್ಯದಿಂದ ಎದುರಾಳಿಯನ್ನು ಹಿಮ್ಮೆಟ್ಟಿ ಸುತ್ತದೆ.

ಮನುಷ್ಯನೂ ಬದುಕಲ್ಲಿ ಎಂಥ ಪರಿಸ್ಥಿತಿ ಬಂದರೂ ಧೈರ್ಯದಿಂದ ಅದನ್ನು ಎದುರಿಸುವಂತಹ ಮನೋಧೈರ್ಯವನ್ನು ಹೊಂದಬೇಕು. “ಧೈರ್ಯಂ ಸರ್ವತ್ರ ಸಾಧನಂ’ ಎಂಬ ಮಾತಿನಂತೆ ಜೀವನದಲ್ಲಿ ಯಾವುದೇ ಎಡರುತೊಡರುಗಳು ಎದುರಾದರೂ ಧೈರ್ಯವೊಂದಿದ್ದರೆ ಅವನ್ನು ಸಮರ್ಥ ವಾಗಿ ಎದುರಿಸಬಹುದಾಗಿದೆ.

ಅದೇ ರೀತಿ ಕಾಗೆಯಲ್ಲಿರುವ ಮತ್ತೂಂದು ಗುಣವೆಂದರೆ ತನ್ನ ಬಳಿ ಇರುವ ಯಾವುದೇ ವಸ್ತುಗಳನ್ನು ಅದು ಬಹಳ ಜಾಗರೂಕತೆಯಿಂದ ಕಾಪಾಡಿ ಕೊಳ್ಳುತ್ತದೆ. ಕಾಗೆಯು ಯಾವುದೇ ವಸ್ತುವೂ ವ್ಯರ್ಥವಾಗಿ ಹಾಳಾಗ ಬಾರದು ಎಂದು ಅದನ್ನು ಅತ್ಯಂತ ಜತನದಿಂದ ಕಾಪಾಡಿಕೊಳ್ಳುತ್ತದೆ. ಅದೇ ರೀತಿ ಮನುಷ್ಯನೂ ಯಾವುದೇ ವಸ್ತುವನ್ನು ನಿರುಪಯುಕ್ತವೆಂದು ಕಸದ ಬುಟ್ಟಿಗೆ ಎಸೆಯುವ ಮೊದಲು ಹಲವು ಬಾರಿ ಯೋಚಿಸಬೇಕು ಮತ್ತು ಅದರ ಮರುಬಳಕೆಯ ಕುರಿತು ಕಾಳಜಿ ವಹಿಸಬೇಕು.

ಕಾಗೆಯ ಮತ್ತೂಂದು ಅದ್ಭುತವಾದ ಗುಣವೆಂದರೆ ಅದು ಯಾವತ್ತೂ ಮೈಮರೆತು ಇರದೇ ಸದಾ ಜಾಗೃತ ಸ್ಥಿತಿಯಲ್ಲಿ ಇರುತ್ತದೆ. ತನ್ನ ಮೇಲೆ ಯಾವ ದಿಕ್ಕಿನಿಂದ ಆಕ್ರಮಣ ನಡೆ ದರೂ ಅದನ್ನು ಎದುರಿಸಲು ಸದಾ ಜಾಗೃತ ಸ್ಥಿತಿಯಲ್ಲೇ ಇರುತ್ತದೆ ಮತ್ತು ತನ್ನ ಶತ್ರುಗಳ ಬಗ್ಗೆ ಬಹಳ ಎಚ್ಚರಿಕೆ ಯಿಂದ ಇರುತ್ತದೆ. ಅದೇ ರೀತಿ ಮನುಷ್ಯನು ತನ್ನ ಸುತ್ತಮುತ್ತ ಇರುವ ಶತ್ರುಗಳು ಮತ್ತು ಸ್ನೇಹಿತರ ಕುರಿತು ಎಚ್ಚರಿಕೆಯಿಂದ ಇರಬೇಕು.

ಕಾಗೆಯು ಯಾರನ್ನೂ ಅತಿಯಾಗಿ ನಂಬದೇ ತನಗೆ ತಾನೆ ಸಾಟಿ ಎನ್ನುವಂತೆ ಸ್ವಸಾಮರ್ಥ್ಯವನ್ನು ನಂಬಿಕೊಂಡು ಜೀವಿಸುತ್ತದೆ.
ಮನುಷ್ಯನೂ ಇದೇ ರೀತಿ ಎಲ್ಲ ವಿಚಾರಗಳಲ್ಲೂ ತನ್ನ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಬೇಕು ಮತ್ತು ಈ ವಿಶಿಷ್ಟ ಗುಣಗಳನ್ನು ಜೀವನದಲ್ಲಿ ಅಳವಡಿಸಿ ಕೊಂಡರೆ ಯಶಸ್ಸಿನೆಡೆಗೆ ಸಾಗಬಹುದು.

– ಸಂತೋಷ್ ರಾವ್ ಪೆರ್ಮುಡ

ಟಾಪ್ ನ್ಯೂಸ್

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನನ್ನೊಳಗಿನ “ನಾನು’ ಹೋದರೆ ಹೋದೇನು

ನನ್ನೊಳಗಿನ “ನಾನು’ ಹೋದರೆ ಹೋದೇನು

ಮಾನವ ಜನ್ಮವನ್ನು ವ್ಯರ್ಥಗೊಳಿಸದಿರೋಣ

ಮಾನವ ಜನ್ಮವನ್ನು ವ್ಯರ್ಥಗೊಳಿಸದಿರೋಣ

achivement

ಗೆಲುವಿನ ದಾರಿ ದೂರ… ಪ್ರಯತ್ನ ನಿರಂತರವಾಗಿರಲಿ

ಆತ್ಮತೃಪ್ತಿ, ಹೃದಯ ಶ್ರೀಮಂತಿಕೆಯೇ ಶ್ರೇಷ್ಠ

ಆತ್ಮತೃಪ್ತಿ, ಹೃದಯ ಶ್ರೀಮಂತಿಕೆಯೇ ಶ್ರೇಷ್ಠ

ನಾವೆಲ್ಲರೂ ಸ್ನೇಹಜೀವಿಗಳಾಗೋಣ

ನಾವೆಲ್ಲರೂ ಸ್ನೇಹಜೀವಿಗಳಾಗೋಣ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

4

Karkala: ಅಸ್ವಸ್ಥಗೊಂಡು ವ್ಯಕ್ತಿ ಸಾವು

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

1-vasu

Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.