ಲೋಕಸಮರ; ಈ ಬಾರಿ ಮಲ್ಲಿಕಾರ್ಜುನ ಖರ್ಗೆ ಗೆಲ್ಲಲಿ ನೋಡೋಣ; ಜಾಧವ್ ಸವಾಲು
Team Udayavani, May 15, 2019, 2:38 PM IST
ಕಲಬುರಗಿ: ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋಲಿಲ್ಲದ ಸರದಾರ ಎಂದು ಹೇಳುತ್ತಾರೆ. ಆದರೆ ಖರ್ಗೆ ಅವರು ಏನು ಅಭಿವೃದ್ಧಿ ಮಾಡಿದ್ದಾರೆ. ಮ್ಯಾಚ್ ಫಿಕ್ಸಿಂಗ್ ಮಾಡಿಕೊಂಡು ಈ ಹಿಂದಿನ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರು. ಆದರೆ ಈ ಬಾರಿ ಮಲ್ಲಿಕಾರ್ಜುನ ಖರ್ಗೆ ಗೆಲ್ಲಲಿ ನೋಡೋಣ ಎಂದು ಡಾ.ಉಮೇಶ್ ಜಾಧವ್ ಸವಾಲು ಹಾಕಿದ್ದಾರೆ.
ಕಲಬುರಗಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಜಾಧವ್ ಅವರು ಸುದ್ದಿಗಾರರ ಜೊತೆ ಮಾತನಾಡುತ್ತ, ಖರ್ಗೆ ಅವರು ಕ್ಷೇತ್ರದ ಅಭಿವೃದ್ಧಿಗೆ ಏನೂ ಮಾಡಿಲ್ಲ. ನಾನು ಕಲಬುರಗಿ ಅಭಿವೃದ್ಧಿಗಾಗಿ ರಾಜೀನಾಮೆ ನೀಡಿದ್ದೇನೆ ಎಂದರು.
ಪ್ರಿಯಾಂಕಾ ಖರ್ಗೆ ಒಮ್ಮೆಯೂ ಕಲಬುರಗಿಯ ಕೊಂಚಾವರಂ ಊರನ್ನು ನೋಡಿಲ್ಲ. ಅಪ್ಪ, ಮಗ ಇಬ್ಬರೂ ತಮ್ಮ ಕ್ಷೇತ್ರವನ್ನು ಕಡೆಗಣಿಸಿ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಮಾಜಿ ಅಲ್ಲ, ಅವರು ಯಾವಾಗಲೂ ಮುಖ್ಯಮಂತ್ರಿಯೇ ಎಂದು ಹೇಳಿದರು.
ಕಲಬುರಗಿ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಖರ್ಗೆ ಸ್ಪರ್ಧಿಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿದ್ದ ಶಾಸಕ ಜಾಧವ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು. ಸತತ ಹತ್ತು ಬಾರಿ ಗೆಲುವು ಸಾಧಿಸಿದ್ದ ಖರ್ಗೆ ಅವರ ವಿರುದ್ಧ 2019ರ ಲೋಕಸಭಾ ಚುನಾವಣೆಯಲ್ಲಿ ಡಾ.ಉಮೇಶ್ ಜಾಧವ್ ಅವರು ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧೆಗಿಳಿದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.