ಕೃಷಿ ಚಟುವಟಿಕೆಗಳಿಗೆ ಸಾಲ ಉತ್ತೇಜನ
ಹಳೆ ಪಹಣಿ ಪತ್ರ ಆಧಾರದಲ್ಲಿ ಸಾಲ; ನಾಲ್ಕು ಲಕ್ಷ ಹೊಸ ರೈತರಿಗೆ ಪ್ರಯೋಜನ
Team Udayavani, May 3, 2020, 6:10 AM IST
ಸಾಂದರ್ಭಿಕ ಚಿತ್ರ.
ಬೆಂಗಳೂರು: ಕೋವಿಡ್-19 ಮಹಾಮಾರಿ ಯಿಂದಾಗಿ ಬಹುತೇಕ ಚಟುವಟಿಕೆಗಳು ಸ್ತಬ್ಧಗೊಂಡಿದ್ದರೆ ಗ್ರಾಮೀಣ ಭಾಗದಲ್ಲಿ ಕೃಷಿ ಚಟುವಟಿಕೆಗಳು ಗರಿಗೆದರಿವೆ. ನಾಲ್ಕು ಲಕ್ಷ ಹೊಸ ರೈತರಿಗೆ ಸಾಲ ಒದಗಿಸುವ ಮೂಲಕ ಇದಕ್ಕೆ ಉತ್ತೇಜನ ನೀಡಲು ಸಹಕಾರ ಇಲಾಖೆ ನಿರ್ಧರಿಸಿದೆ.
ಹಳ್ಳಿಗಳಿಗೆ ಮರಳಿದ ಯುವಕರು ಮತ್ತು ಕಾರ್ಮಿಕರು ಕೃಷಿ ಚಟುವಟಿಕೆಗಳನ್ನು ನಡೆಸಲಿರುವು ದರಿಂದ ಈ ವರ್ಷ ಕೃಷಿ ಸಾಗುವಳಿ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಸಹಕಾರ ಇಲಾಖೆ ಅಂದಾಜಿಸಿದೆ. ಸಾಮಾನ್ಯವಾಗಿ ಪ್ರತೀ ವರ್ಷ ಎಪ್ರಿಲ್ ವೇಳೆಗೆ 7 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಆಗುತ್ತಿದ್ದರೆ ಈ ವರ್ಷ ಇದು 16 ಸಾವಿರ ಹೆಕ್ಟೇರ್‌ಗೆ ಹೆಚ್ಚಿರುವುದು ಇದಕ್ಕೆ ಸಾಕ್ಷಿ.
ಈಗಾಗಲೇ ಸ್ವಂತ ಊರು ಸೇರಿಕೊಂಡಿರುವ ಕನಿಷ್ಠ ಶೇ.25 ಮಂದಿ ಕೋವಿಡ್-19 ಅಬ್ಬರ ನಿಂತ ಮೇಲೆ ಮತ್ತೆ ಮಹಾನಗರಗಳಿಗೆ ತೆರಳುವುದು ಅನುಮಾನ ಎಂದು ಸಹಕಾರ ಇಲಾಖೆ ಅಂದಾಜಿಸಿದೆ.
ಕೃಷಿ ಚಟುವಟಿಕೆಗಳಿಗೆ ಸಹಾಯ
ಹಳ್ಳಿಗೆ ಮರಳಿರುವವರು ಕೃಷಿ ಜತೆಗೆ ಉಪ ಕಸುಬುಗಳನ್ನು ಕೈಗೊಳ್ಳಬಹುದು. ಈ ಉಪ ವ್ಯವಹಾರ ಮಾಡುವ ವಾಹನ ಖರೀದಿಸಲು ಅವಕಾಶ ಕಲ್ಪಿಸಲು ಇಲಾಖೆ ನಿರ್ಧರಿಸಿದೆ. ಈ ವರ್ಷ ಕನಿಷ್ಟ ನಾಲ್ಕು ಲಕ್ಷ ಹೊಸ ರೈತರಿಗೆ ನೀಡಲು ತೀರ್ಮಾನಿಸಲಾಗಿದ್ದು, ಇದಕ್ಕಾಗಿ ನಬಾರ್ಡ್‌ನಿಂದ ಸರಕಾರ ಹೆಚ್ಚುವರಿಯಾಗಿ 1,500 ಕೋ.ರೂ. ಸಾಲ ಪಡೆದಿದೆ.
ಸಭೆ ನಡೆಸದೆ ತೀರ್ಮಾನ
ಗ್ರಾಮೀಣ ಪ್ರದೇಶದ ಪ್ರಾಥಮಿಕ
ಕೃಷಿ ಪತ್ತಿನ ಸಹಕಾರ ಸಂಘಗಳು, ಡಿಸಿಸಿ, ಪಿಕಾರ್ಡ್, ಲ್ಯಾಂಪ್ಸ್ ಮುಂತಾದ ಸಹಕಾರಿ ಬ್ಯಾಂಕ್‌ಗಳಿಂದ ಹಳೆಯ ಪಹಣಿ ಪತ್ರವನ್ನೇ ಆಧರಿಸಿ ಸಾಲ ನೀಡುವಂತೆ ಸೂಚಿಸಲಾಗಿದೆ. ಆಡಳಿತ ಮಂಡಳಿ ಸಭೆ ಸೇರಲು ಅವಕಾಶ ಇಲ್ಲದ್ದ ರಿಂದ ಸಭೆ ಸೇರದೆ ತೀರ್ಮಾನ ತೆಗೆದುಕೊಂಡು ನಿಗದಿತ ಸಮಯದಲ್ಲಿ ಸಾಲ ದೊರೆಯುವಂತೆ ನೋಡಿಕೊಳ್ಳಲು ಸೂಚಿಸಲಾಗಿದೆ.
ನಗರದಿಂದ ಜನರು ಹಳ್ಳಿಗಳಿಗೆ ತೆರಳಿರುವುದರಿಂದ ಕೃಷಿ ಮತ್ತು ಕೃಷಿಪೂರಕ ಚಟುವಟಿಕೆ ಹೆಚ್ಚುವ ಅಂದಾಜು ಮಾಡಲಾಗಿದೆ. ಹೀಗಾಗಿ ಹೆಚ್ಚಿನ ಕೃಷಿ ಸಾಲ ನೀಡಲು ತೀರ್ಮಾನಿಸಲಾಗಿದೆ.
-ಆರ್.ಶಿವಪ್ರಕಾಶ್,
ಸಹಕಾರ ಸಂಘಗಳ ಅಪರ ನಿಬಂಧಕರು
- ಶಂಕರ ಪಾಗೋಜಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Parliament: ಸಂಸದರ ತಳ್ಳಾಟ: ಇಂದು ಸಂಸತ್ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?
Former Supreme Court Judge ವಿ.ಸುಬ್ರಹ್ಮಣಿಯನ್ ಎನ್‌ಎಚ್‌ಆರ್‌ಸಿ ಮುಖ್ಯಸ್ಥ
Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್ ವಿವಾದಾಸ್ಪದ ಹೇಳಿಕೆ
Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್ ರೈಲು!
Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.