Local Body Reservation: ಮೀಸಲು ಸಿಕ್ಕರೂ ಪೂರ್ಣಾವಧಿ ಅಧಿಕಾರವಿಲ್ಲ!
180ಕ್ಕೂ ಅಧಿಕ ನಗರ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳಿಗೆ ಅಧಿಕಾರ "ಖೋತಾ', ಈಗ ಅಧ್ಯಕ್ಷ-ಉಪಾಧ್ಯಕ್ಷರಾಗುವವರಿಗೆ 15-16 ತಿಂಗಳಷ್ಟೇ ಅಧಿಕಾರ!
Team Udayavani, Aug 7, 2024, 7:14 AM IST
ಬೆಂಗಳೂರು: ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ 2ನೇ ಅವಧಿಗೆ ಮೀಸಲಾತಿಯನ್ನು ರಾಜ್ಯ ಸರಕಾರ ನಿಗದಿಪಡಿಸಿದೆ. ಆದರೆ 1 ವರ್ಷಕ್ಕೂ ಅಧಿಕ ಕಾಲದಿಂದ ಅಧಿಕಾರಕ್ಕಾಗಿ ಕಾದು ಕುಳಿತಿದ್ದ ರಾಜ್ಯದ 301 ನಗರ ಸ್ಥಳೀಯ ಸಂಸ್ಥೆಗಳ ಪೈಕಿ 186ಕ್ಕೂ ಹೆಚ್ಚು ನಗರ ಸ್ಥಳೀಯ ಸಂಸ್ಥೆಗಳ ಚುನಾಯಿತ ಜನಪ್ರತಿಧಿಗಳಿಗೆ ಅಧಿಕಾರ “ಖೋತಾ’ ಆಗಲಿದೆ.
ಅಧ್ಯಕ್ಷ-ಉಪಾಧ್ಯಕ್ಷರ ಅಧಿಕಾರವಧಿ ಮುಗಿದು 14ರಿಂದ 15 ತಿಂಗಳು ಆಗಿದೆ. ಈಗ ಮೀಸಲಾತಿ ನಿಗದಿಪಡಿಸಲಾಗಿದೆ. ಅದರಂತೆ 2ನೇ ಅವಧಿಗೆ ಆಯ್ಕೆಯಾದ ಅಧ್ಯಕ್ಷ-ಉಪಾಧ್ಯಕ್ಷರಿಗೆ 30 ತಿಂಗಳ ಬದಲು ಕೇವಲ 15ರಿಂದ 16 ತಿಂಗಳು ಮಾತ್ರ ಅಧಿಕಾರ ಭಾಗ್ಯ ಸಿಗಲಿದೆ. ಏಕೆಂದರೆ 2019ರಲ್ಲಿ ಚುನಾವಣೆ ನಡೆದು 2020ರಲ್ಲಿ ಮೊದಲ ಅವಧಿಗೆ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆ ನಡೆದ 180ಕ್ಕೂ ಹೆಚ್ಚು ನಗರ ಸ್ಥಳೀಯ ಸಂಸ್ಥೆಗಳ ಅವಧಿ 2025ರ ಅಕ್ಟೋಬರ್ ಮತ್ತು ನವೆಂಬರ್‌ನಲ್ಲಿ ಮುಕ್ತಾಯಗೊಳ್ಳಲಿದೆ.
ಹಾಗಾಗಿ ತಮ್ಮದಲ್ಲದ ತಪ್ಪಿಗೆ 1 ಮಹಾನಗರ ಪಾಲಿಕೆ, 45ಕ್ಕೂ ಹೆಚ್ಚು ನಗರಸಭೆ, 90ಕ್ಕೂ ಅಧಿಕ ಪುರಸಭೆ ಹಾಗೂ 46ಕ್ಕೂ ಹೆಚ್ಚು ಪಟ್ಟಣ ಪಂಚಾಯತ್‌ಗಳು ಸೇರಿ ರಾಜ್ಯದ ಒಟ್ಟು 186ಕ್ಕೂ ಅಧಿಕ ನಗರ ಸ್ಥಳೀಯ ಸಂಸ್ಥೆಗಳ ಚುನಾಯಿತ ಸದಸ್ಯರು, ಅಧ್ಯಕ್ಷ-ಉಪಾಧ್ಯಕ್ಷರು 2ನೇ ಅವಧಿಯ 30 ತಿಂಗಳ ಅಧಿಕಾರದಿಂದ ಅವಕಾಶ ವಂಚಿತರಾಗಲಿದ್ದಾರೆ.
1 ವರ್ಷಕ್ಕೂ ಅಧಿಕ ಕಾಲದಿಂದ ನನೆಗುದಿಗೆ ಬಿದ್ದಿದ್ದ ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳ 2ನೇ ಅವಧಿಗೆ ಮೀಸಲಾತಿಯನ್ನು ರಾಜ್ಯ ಸರಕಾರ ಆಗಸ್ಟ್ 5ರಂದು ಪ್ರಕಟಿಸಿದೆ. ಚುನಾವಣೆಗೆ ದಿನಾಂಕ ನಿಗದಿಪಡಿಸಿಲ್ಲ. ಚುನಾವಣೆ ಯಾವಾಗ ಎಂಬ ಬಗ್ಗೆ ಮಾಹಿತಿ ನೀಡುವಂತೆ ಸರಕಾರಕ್ಕೆ ಹೈಕೋರ್ಟ್ ಹೇಳಿದೆ.
ವಿಳಂಬಕ್ಕೆ ಕಾರಣ?
ಒಟ್ಟು 5 ವರ್ಷದ ಅವಧಿಯಲ್ಲಿ ಮೊದಲ 30 ತಿಂಗಳ ಅಧ್ಯಕ್ಷ-ಉಪಾಧ್ಯಕ್ಷ ಕಾರ್ಯಾವಧಿ ಮುಗಿದ ಬಳಿಕ ಎರಡನೇ ಅವಧಿಯ 30 ತಿಂಗಳಿಗೆ ಅಧ್ಯಕ್ಷ-ಉಪಾಧ್ಯಕ್ಷ ಮೀಸಲಾತಿ ನಿಗದಿಪಡಿಸಬೇಕಿತ್ತು. ಮೀಸಲಾತಿ ವಿಚಾರ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್‌ನಲ್ಲಿ ಇದ್ದ ಕಾರಣ ಮೀಸಲಾತಿ ನಿಗದಿ ಸಾಧ್ಯವಾಗಿರಲಿಲ್ಲ. ಈ ಮಧ್ಯೆ ಸ್ಥಳೀಯ ಸಂಸ್ಥೆಗಳಲ್ಲಿ ಒಬಿಸಿ ವರ್ಗಗಳಿಗೆ ರಾಜಕೀಯ ಮೀಸಲಾತಿ ನೀಡುವ ಬಗ್ಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ನ್ಯಾ| ಭಕ್ತವತ್ಸಲ ಆಯೋಗ ರಚಿಸಿತ್ತು. ಅದರ ವರದಿ ಸಲ್ಲಿಕೆಯಾಗಬೇಕಾದ ಹಿನ್ನೆಲೆಯಲ್ಲಿ ಮೀಸಲಾತಿ ಮತ್ತೆ ನನೆಗುದಿಗೆ ಬಿದ್ದಿತ್ತು.
ಅಧಿಕಾರ ಖೋತಾ ಹೇಗೆ?
ಒಟ್ಟು 5 ವರ್ಷದ ಅವಧಿಯಲ್ಲಿ ಅಧಿಕಾರ ಹಂಚಿಕೆ ಸೂತ್ರದಡಿ ತಲಾ 30 ತಿಂಗಳುಗಳಿಗೆ 2 ಅವಧಿಗೆ ಮೀಸಲಾತಿ ನಿಗದಿಪಡಿಸಲಾಗುತ್ತದೆ. ಅದರಂತೆ 2ನೇ ಅವಧಿಗೆ ಕರ್ನಾಟಕ ಪೌರನಿಗಮಗಳ ಕಾಯ್ದೆ-1964ರ ಸೆಕ್ಷನ್ 42 ಹಾಗೂ ಕರ್ನಾಟಕ ಪೌರನಿಗಮಗಳ (ಅಧ್ಯಕ್ಷ-ಉಪಾಧ್ಯಕ್ಷ) ಚುನಾವಣೆ (ತಿದ್ದುಪಡಿ) ನಿಯಮಗಳು-2024ರ ನಿಯಮ 13-ಎ ಮತ್ತು 13ರಡಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ನಿಗದಿಪಡಿಸಲಾಗಿದೆ.
ಪೌರ ನಿಗಮಗಳ ಕಾಯ್ದೆ-1964ರ ಸೆಕ್ಷನ್ 42ರ ಪ್ರಕಾರ ನಗರ ಸ್ಥಳೀಯ ಸಂಸ್ಥೆಗಳ ಚುನಾಯಿತ ಸದಸ್ಯರ ಅವಧಿಯು ಚುನಾವಣೆ ನಡೆದ ಅನಂತರ ಪ್ರಥಮ ಸಭೆ ನಡೆದ ದಿನಾಂಕದಿಂದ 5 ವರ್ಷಗಳಾಗಿರುತ್ತದೆ. ಅದರಂತೆ ಚುನಾಯಿತ ಸದಸ್ಯರ ಮೊದಲ ಅವಧಿಯ ಅಧ್ಯಕ್ಷ-ಉಪಾಧ್ಯಕ್ಷರ 30 ತಿಂಗಳ ಅಧಿಕಾರವಧಿ ಕಳೆದ ವರ್ಷ ಎಪ್ರಿಲ್-ಮೇಯಲ್ಲಿ ಮುಗಿದಿದ್ದರೂ ಮೀಸಲಾತಿ ಗೊಂದಲದ ಕಾರಣಕ್ಕೆ 2ನೇ ಅವಧಿಗೆ 30 ತಿಂಗಳಗಳಿಗೆ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ನಿಗದಿಪಡಿಸಲಾಗಿರಲಿಲ್ಲ.
ಈಗಾಗಲೇ ಮೊದಲ ಅವಧಿ ವಿಸ್ತರಿಸಲು ಅವಕಾಶವಿರುವುದಿಲ್ಲ. ಹಾಗಾಗಿ 2020ರ ಅಕ್ಟೋಬರ್-ನವೆಂಬರ್‌ನಲ್ಲಿ ಚುನಾವಣೆ ನಡೆದ ನಗರ ಸ್ಥಳೀಯ ಸಂಸ್ಥೆಗಳ ಅವಧಿ 2025ರ ಅಕ್ಟೋಬರ್- ನವೆಂಬರ್‌ನಲ್ಲಿ 5 ವರ್ಷ ಪೂರ್ಣಗೊಳ್ಳುತ್ತದೆ. 2ನೇ ಅವಧಿಗೆ ಅಧ್ಯಕ್ಷ- ಉಪಾಧ್ಯಕ್ಷ ರಾದವರು ಅಲ್ಲಿವರೆಗೆ ಮಾತ್ರ ಅಧಿಕಾರ ಹೊಂದಿರುತ್ತಾರೆ.
– ರಫೀಕ್ ಅಹ್ಮದ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.