ಲಾಕ್‌ಡೌನ್‌: 2 ಸಾವಿರ ಮೆ.ವ್ಯಾ. ವಿದ್ಯುತ್‌ ಬೇಡಿಕೆ ಇಳಿಕೆ

ಲೋಡ್‌ಶೆಡ್ಡಿಂಗ್‌ ಭೀತಿ ದೂರ ; ಉಷ್ಣ ವಿದ್ಯುತ್‌ ಸ್ಥಾವರದ ಕೆಲವು ಘಟಕ ಸ್ಥಗಿತ

Team Udayavani, Mar 30, 2020, 6:00 AM IST

ಲಾಕ್‌ಡೌನ್‌: 2 ಸಾವಿರ ಮೆ.ವ್ಯಾ. ವಿದ್ಯುತ್‌ ಬೇಡಿಕೆ ಇಳಿಕೆ

ಬೆಂಗಳೂರು: ಕೋವಿಡ್-19 ಸೋಂಕು ತಡೆಗೆ ಲಾಕ್‌ಡೌನ್‌ ವ್ಯವಸ್ಥೆ ಜಾರಿಯಾಗಿದ್ದು, ಕೈಗಾರಿಕೆ ಮತ್ತು ವಾಣಿಜ್ಯ ಬಳಕೆ ವಿದ್ಯುತ್‌ ಪ್ರಮಾಣ ಇಳಿಕೆಯಾಗಿರುವುದರಿಂದ ಸುಮಾರು 2,000 ಮೆಗಾವ್ಯಾಟ್‌ಗಳಷ್ಟು ಬೇಡಿಕೆ ತಗ್ಗಿದೆ.

ರಾಜ್ಯಾದ್ಯಂತ ವಿದ್ಯುತ್‌ ಬಳಕೆ ದಿಢೀರ್‌ ಇಳಿಕೆಯಾಗಿರುವುದರಿಂದ ಇದೇ ಮೊದಲ ಬಾರಿಗೆ ಎಂಬಂತೆ ಬೇಸಗೆಯಲ್ಲಿ ಉಷ್ಣ ವಿದ್ಯುತ್‌ ಸ್ಥಾವರಗಳ ಕೆಲವು ಘಟಕಗಳು ಸ್ಥಗಿತಗೊಂಡು ಇತಿಹಾಸ ಸೃಷ್ಟಿಯಾಗಿದೆ. ಕೇಂದ್ರ ಸರಕಾರದ ಹಂಚಿಕೆಯಡಿ ಪೂರೈಕೆಯಾಗುವ ವಿದ್ಯುತ್‌ ಮತ್ತು ಸೌರಶಕ್ತಿ ಮೂಲದಿಂದ ಸಾಕಷ್ಟು ವಿದ್ಯುತ್‌ ಪೂರೈಕೆಯಾಗುತ್ತಿರುವುದರಿಂದ ಉಷ್ಣ ಮತ್ತು ಜಲ ವಿದ್ಯುತ್‌ ಘಟಕಗಳ ಮೇಲೆ ಒತ್ತಡ ಇಲ್ಲದಂತಾಗಿದ್ದು, ಬೇಸಗೆಯಲ್ಲಿ ಲೋಡ್‌ ಶೆಡ್ಡಿಂಗ್‌ನ ಭೀತಿ ನಿವಾರಣೆಯಾದಂತಾಗಿದೆ.

2,000 ಮೆ.ವ್ಯಾ.ಬೇಡಿಕೆ ಇಳಿಕೆ
ಕೋವಿಡ್-19 ಸೋಂಕು ತಡೆಗೆ ಕೇಂದ್ರ ಮತ್ತು ರಾಜ್ಯ ಸರಕಾರ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುವ ಜತೆಗೆ ಜನತಾ ಕರ್ಫ್ಯೂ, ಲಾಕ್‌ಡೌನ್‌ ವ್ಯವಸ್ಥೆ ಜಾರಿಗೊಳಿಸುತ್ತಿದ್ದಂತೆ ವಿದ್ಯುತ್‌ ಬೇಡಿಕೆಯಲ್ಲಿ ದಿಢೀರ್‌ ಇಳಿಕೆಯಾಗಲಾರಂಭಿಸಿತು. ದಿನ ಕಳೆದಂತೆ ಬೇಡಿಕೆ ಕುಗ್ಗುತ್ತಿದ್ದು, ಸದ್ಯ ಸುಮಾರು 1,600ರಿಂದ 2,000 ಮೆ.ವ್ಯಾ. ಗಳಷ್ಟು ಇಳಿಕೆಯಾಗಿದೆ. ಸರಾಸರಿ ಬೇಡಿಕೆ 8,500ರಿಂದ 9,000 ಮೆ. ವ್ಯಾ. ಗಳಷ್ಟಿದೆ.

ಕೈಗಾರಿಕೆ, ವಾಣಿಜ್ಯ ಬಳಕೆ ವಿದ್ಯುತ್‌ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿದೆ. ಹವಾನಿಯಂತ್ರಣ ವ್ಯವಸ್ಥೆಯಿಂದಲೂ ಸೋಂಕು ಹರಡುತ್ತದೆ ಎಂಬ ಮಾತುಗಳ ಹಿನ್ನೆಲೆಯಲ್ಲಿ ಹವಾನಿಯಂತ್ರಣ ಉಪಕರಣಗಳ ಬಳಕೆಯೂ ಕಡಿಮೆಯಾಗಿದೆ. ಜತೆಗೆ ಕೃಷಿ ಪಂಪ್‌ಸೆಟ್‌ ಬಳಕೆಯೂ ಕಡಿಮೆಯಾಗಿರುವುದರಿಂದ ಬೇಡಿಕೆ ದಿಢೀರ್‌ ಕಡಿಮೆಯಾಗಿದೆ ಎಂದು ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮದ (ಕೆಪಿಟಿಸಿಎಲ್‌) ಅಧಿಕಾರಿ ತಿಳಿಸಿದರು.

ಕೇಂದ್ರದ ಪಾಲು- ಸೌರ ವಿದ್ಯುತ್‌ ಸಹಕಾರಿ
ಸದ್ಯ ರಾಜ್ಯಾದ್ಯಂತ ವಿದ್ಯುತ್‌ ಬೇಡಿಕೆ 9,000 ಮೆ.ವ್ಯಾ.ಗಳಷ್ಟಿದೆ. ಈ ಪೈಕಿ ಕೇಂದ್ರದ ಪಾಲಿನಡಿ ಸುಮಾರು 2,000ದಿಂದ 3,000 ಮೆ.ವ್ಯಾ. ವಿದ್ಯುತ್‌ ಪೂರೈಕೆಯಾಗುತ್ತಿದ್ದು, ಇದನ್ನು ಬಳಸಲೇ ಬೇಕಿದೆ. ಜತೆಗೆ ಸೌರ ಶಕ್ತಿ ಮೂಲದಿಂದ ನಿತ್ಯ 4,500 ಮೆ.ವ್ಯಾ.ವಿದ್ಯುತ್‌ ಪೂರೈಕೆಯಾಗುತ್ತಿದೆ. ಹಾಗಾಗಿ ಉಳಿಕೆ ಬೇಡಿಕೆಯನ್ನು ಜಲ ವಿದ್ಯುತ್‌ ಮತ್ತು ಉಷ್ಣ ವಿದ್ಯುತ್‌ ಮೂಲಕ ನಿಭಾಯಿಸಲಾಗುತ್ತಿದೆ. ಜಲ ವಿದ್ಯುತ್‌ ಘಟಕಗಳಿರುವ ಜಲಾಶಯಗಳಲ್ಲೂ ನೀರಿನ ಉತ್ತಮ ಸಂಗ್ರಹವಿದ್ದು, ಉಷ್ಣ ಸ್ಥಾವರಗಳಲ್ಲೂ ಅಗತ್ಯ ಪ್ರಮಾಣದಲ್ಲಿ ಕಲ್ಲಿದ್ದಲು ದಾಸ್ತಾನು ಇದೆ. ಹಾಗಾಗಿ ಬೇಸಗೆಯಲ್ಲಿ ವಿದ್ಯುತ್‌ ಕೊರತೆ ತಲೆದೋರುವ ಸಾಧ್ಯತೆ ಕಡಿಮೆ ಎಂದು ವಿದ್ಯುತ್‌ ನಿಗಮದ ಮೂಲಗಳು ತಿಳಿಸಿವೆ.

ಚಳಿಗಾಲ ಮುಗಿಯುವ ಹೊತ್ತಿಗೆ ವಿದ್ಯುತ್‌ ಬೇಡಿಕೆ ಏರುಮುಖವಾಗಲಾರಂಭಿಸುತ್ತದೆ. ಹಾಗಾಗಿ ಮಳೆಗಾಲದಲ್ಲೇ ಉಷ್ಣ ಸ್ಥಾವರದ ಘಟಕಗಳ ನಿರ್ವಹಣೆಗೆ ಒತ್ತು ನೀಡಿ ಸನ್ನದ್ಧ ಸ್ಥಿತಿಯಲ್ಲಿಡಲಾಗಿರುತ್ತದೆ. ಜನವರಿ ಆರಂಭವಾಗುತ್ತಿದ್ದಂತೆ ಉಷ್ಣ ಸ್ಥಾವರಗಳ ಎಲ್ಲ ಘಟಕಗಳು ಕಾರ್ಯಾರಂಭವಾಗುತ್ತವೆ. ಹೀಗೆ ಆರಂಭವಾದ ಘಟಕಗಳು ಜೂನ್‌ವರೆಗೂ ಅವಿರತವಾಗಿ ಕಾರ್ಯ ನಿರ್ವಹಿಸುವುದು ವಾಡಿಕೆ. ಆದರೆ ಈ ಬಾರಿ ದಿಢೀರ್‌ ಬೇಡಿಕೆ ಕುಸಿತದ ಹಿನ್ನೆಲೆಯಲ್ಲಿ ರಾಯಚೂರಿನ ಆರ್‌ಟಿಪಿಎಸ್‌ನ ಎಂಟು ಘಟಕಗಳ ಪೈಕಿ ಮೂರು, ಬಳ್ಳಾರಿಯ ಬಿಟಿಪಿಎಸ್‌ನ ಮೂರು ಘಟಕಗಳ ಪೈಕಿ ಎರಡು ಸ್ಥಗಿತಗೊಂಡಿದ್ದು, 1,830 ಮೆ.ವ್ಯಾ. ಉತ್ಪಾದನೆ ಸ್ಥಗಿತವಾಗಿದೆ. ಬೇಸಗೆಯಲ್ಲಿ ಉಷ್ಣ ಸ್ಥಾವರದ ಘಟಕ ಗಳನ್ನು ಸ್ಥಗಿತಗೊಳಿಸಿರುವುದು ಇದೇ ಮೊದಲು ಎನ್ನಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ವಿದ್ಯುತ್‌ ಬೇಡಿಕೆ ಇಳಿಕೆ ಹಿನ್ನೆಲೆಯಲ್ಲಿ ಒಟ್ಟು ಉತ್ಪಾದನ ಘಟಕಗಳ ಪೈಕಿ ಅರ್ಧದಷ್ಟು ಘಟಕಗಳಷ್ಟೇ ಕಾರ್ಯ ನಿರ್ವಹಿಸುತ್ತಿವೆ. ಆ ಘಟಕಗಳಲ್ಲೂ ಶೇ. 50ರಷ್ಟು ವಿದ್ಯುತ್‌ ಮಾತ್ರ ಉತ್ಪಾದಿಸಲಾಗುತ್ತಿದೆ. ಒಂದು ತಿಂಗಳಿಗೆ ಸಾಕಾಗುವಷ್ಟು ಕಲ್ಲಿದ್ದಲು ದಾಸ್ತಾನು ಕೂಡ ಇದೆ. ನಿತ್ಯ 140ರಿಂದ 150 ದಶಲಕ್ಷ ಯೂನಿಟ್‌ ವಿದ್ಯುತ್‌ ಉತ್ಪಾದಿಸಲು ಅವಕಾಶವಿದ್ದು, ಸದ್ಯ 70 ದಶಲಕ್ಷ ಯೂನಿಟ್‌ ವಿದ್ಯುತ್‌ ಮಾತ್ರ ಉತ್ಪಾದಿಸಲಾಗುತ್ತಿದೆ.
– ವಿ. ಪೊನ್ನುರಾಜ್‌,
ಕೆಪಿಸಿಎಲ್‌ ವ್ಯವಸ್ಥಾಪಕ ನಿರ್ದೇಶಕ

ಟಾಪ್ ನ್ಯೂಸ್

CM-Sidda-BGV

Belagavi: ಖಾನಾಪುರ ಪೊಲೀಸ್‌ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ

u1

Udupi: ಮನೆಯೊಳಗೆ ಧರ್ಮಗ್ರಂಥ, ಹೊರಗೆ ಸಂವಿಧಾನ ಮುನ್ನೆಡೆಸಬೇಕು: ನ್ಯಾ| ಶ್ರೀಶಾನಂದ

ಧ್ಯಾನ್‌ಚಂದ್‌ ಖೇಲ್‌ರತ್ನ ನನಗೇಕಿಲ್ಲ: ಹರ್ವಿಂದರ್‌ ಸಿಂಗ್‌ ಪ್ರಶ್ನೆ

ಧ್ಯಾನ್‌ಚಂದ್‌ ಖೇಲ್‌ರತ್ನ ನನಗೇಕಿಲ್ಲ: ಹರ್ವಿಂದರ್‌ ಸಿಂಗ್‌ ಪ್ರಶ್ನೆ

ICC ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌: ದಕ್ಷಿಣ ಆಫ್ರಿಕಾಕ್ಕೆ ಉತ್ತಮ ಅವಕಾಶ

ICC ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌: ದಕ್ಷಿಣ ಆಫ್ರಿಕಾಕ್ಕೆ ಉತ್ತಮ ಅವಕಾಶ

Mudhola

Mudhola: ಸಿಲಿಂಡರ್ ಸ್ಫೋಟ: ಹೊತ್ತಿ ಉರಿದ ಮನೆ

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Laxmi-Heebalakar1

ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್‌ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM-Sidda-BGV

Belagavi: ಖಾನಾಪುರ ಪೊಲೀಸ್‌ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ

Laxmi-Heebalakar1

ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್‌ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ

Kalaburagi-Acci

Kalaburagi: ಟಿಟಿ ಟಯರ್‌ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!

Munirtahana–Egg

Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

POlice

Sullia: ಬೆಳ್ಳಾರೆ ಸೊಸೈಟಿ ಚುನಾವಣೆ; ಎರಡು ಪಕ್ಷಗಳ ನಡುವೆ ಮಾತಿನ ಚಕಮಕಿ

CM-Sidda-BGV

Belagavi: ಖಾನಾಪುರ ಪೊಲೀಸ್‌ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ

u1

Udupi: ಮನೆಯೊಳಗೆ ಧರ್ಮಗ್ರಂಥ, ಹೊರಗೆ ಸಂವಿಧಾನ ಮುನ್ನೆಡೆಸಬೇಕು: ನ್ಯಾ| ಶ್ರೀಶಾನಂದ

3

Udupi: ಕೂಲಿ ಕಾರ್ಮಿಕನ ಮೇಲೆ ಹಲ್ಲೆ; ಗಾಯ

ಧ್ಯಾನ್‌ಚಂದ್‌ ಖೇಲ್‌ರತ್ನ ನನಗೇಕಿಲ್ಲ: ಹರ್ವಿಂದರ್‌ ಸಿಂಗ್‌ ಪ್ರಶ್ನೆ

ಧ್ಯಾನ್‌ಚಂದ್‌ ಖೇಲ್‌ರತ್ನ ನನಗೇಕಿಲ್ಲ: ಹರ್ವಿಂದರ್‌ ಸಿಂಗ್‌ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.