Lokasabha Election; ಕಾಂಗ್ರೆಸ್ ಪಕ್ಷದಿಂದ ಸೋಲಿನ ವಿಮರ್ಶೆ: ವಿ.ಎಸ್.ಉಗ್ರಪ್ಪ
ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆ ಗೆಲ್ಲಲು ಸಿದ್ಧತೆ ನಡೆಯುತ್ತಿದೆ
Team Udayavani, Jul 30, 2024, 6:10 AM IST
ಮಂಗಳೂರು: ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ನಿರೀಕ್ಷಿತ ಸ್ಥಾನಗಳನ್ನು ಗೆಲ್ಲಲು ಕಾಂಗ್ರೆಸ್ ವಿಫಲವಾಗಿದ್ದು, ಸೋಲಿನ ಪರಾಮರ್ಶೆ ಮಾಡಲಾಗಿದೆ. ತಳ ಮಟ್ಟದಿಂದಲೇ ಪಕ್ಷ ಸಂಘಟನೆ ಮಾಡಿ ಜಿ. ಪಂ., ತಾ.ಪಂ. ಚುನಾವಣೆ ಗೆಲ್ಲಲು ಸಿದ್ಧತೆ ನಡೆಸಲಾಗುತ್ತಿದೆ ಎಂದು ಮಾಜಿ ಸಂಸದ ಹಾಗೂ ಮಂಗಳೂರು ವಿಭಾಗದ ಸತ್ಯ ಶೋಧನಾ ಸಮಿತಿ ಅಧ್ಯಕ್ಷ ವಿ.ಎಸ್. ಉಗ್ರಪ್ಪ ಹೇಳಿದರು.
ಮಂಗಳೂರಿನ ಕಾಂಗ್ರೆಸ್ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರವು ಬಜೆಟ್‌ನಲ್ಲಿ ಅನುದಾನ ಬಿಡುಗಡೆ ಮಾಡಲು ತಾರತಮ್ಯ ಮಾಡಿದ್ದಾರೆ. ನೀತಿ ಆಯೋಗದಲ್ಲಿ ಭಾಷಣ ಮಾಡುವ ವೇಳೆ ಮಮತಾ ಬ್ಯಾನರ್ಜಿಯವರ ಮೈಕ್ ಆಫ್ ಮಾಡುತ್ತಾರೆ. ಆರೆಸ್ಸೆಸ್‌ನವರಿಗೆ ಅಧಿಕಾರಿಗಳಾಗುವ ಅವಕಾಶ ಕಲ್ಪಿಸುತ್ತಾರೆ. ಆ ಮೂಲಕ ಕೇಂದ್ರ ಸಂವಿಧಾನ ವಿರೋಧಿಯಾಗಿ ನಡೆದುಕೊಳ್ಳುತ್ತಿದೆ ಎಂದರು.
40 ಶೇ. ಕಮಿಷನ್: ನ್ಯಾ| ನಾಗಮೋಹನ್ ನೇತೃತ್ವದಲ್ಲಿ ತನಿಖೆ
ಶೇ. 40 ಕಮಿಷನ್ ಆರೋಪ ವಿಚಾರಕ್ಕೆ ಸಂಬಂಧಿಸಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಕಾಂಗ್ರೆಸ್ ಎಂದೆಂದಿಗೂ ಭ್ರಷ್ಟಾಚಾರವನ್ನು ಸಹಿಸುವುದಿಲ್ಲ. ನಾವು ಮಾಡಿದ ಆರೋಪಕ್ಕೆ ಸಂಬಂಧಿಸಿ ನ್ಯಾ| ನಾಗಮೋಹನ್ ಅವರ ಸಮಿತಿ ರಚಿಸಿ ತನಿಖೆ ನಡೆಸುತ್ತಿದ್ದೇವೆ. ಲಕ್ಷಾಂತರ ಕೆಲಸಗಳಲ್ಲಿ ಅವ್ಯವಹಾರ ನಡೆದಿದೆ ಎಂದು ದೂರುಗಳು ಬರುತ್ತಿದ್ದು, ವರದಿ ಬಂದ ಬಳಿಕ ಕ್ರಮ ಕೈಗೊಳ್ಳುತ್ತೇವೆ ಎಂದರು.
ಮಾಜಿ ಸಂಸದ ಅಜಯ್ ಕುಮಾರ್ ನಾಯಕ್, ವಿ.ಪ. ಸದಸ್ಯ ಐವನ್ ಡಿ’ ಸೋಜಾ, ಮಾಜಿ ಸಚಿವ ಬಿ ರಮಾನಾಥ ರೈ, ಕೆಪಿಸಿಸಿ ಉಪಾಧ್ಯಕ್ಷ ಸಯ್ಯದ್ ಅಹಮದ್, ಪ್ರಮುಖರಾದ ಕೆ. ಹರೀಶ್ ಕುಮಾರ್, ಪದ್ಮರಾಜ್ ಪೂಜಾರಿ, ರಕ್ಷಿತ್ ಶಿವರಾಮ್, ಜಿ. ಕೃಷ್ಣಪ್ಪ, ಎಂ. ಎಸ್. ಮಹಮ್ಮದ್, ಯು.ಟಿ. ಫರ್ಜಾನ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.