LPG Cylinders: ಪ್ರಧಾನಮಂತ್ರಿ ಉಜ್ವಲ ಸ್ಕೀಮ್ ಸಬ್ಸಿಡಿ ಏರಿಕೆ, 600 ರೂ.ಗೆ LPG ಸಿಲಿಂಡರ್
ಗ್ಯಾಸ್ ಸಿಲಿಂಡರ್ ಗೆ ಒಟ್ಟು 500 ರೂಪಾಯಿ ಇಳಿಕೆಯಾದಂತಾಗಿದೆ.
Team Udayavani, Oct 4, 2023, 4:13 PM IST
ನವದೆಹಲಿ: ಬಡತನ ರೇಖೆಯಲ್ಲಿರುವ ನಿವಾಸಿಗಳಿಗೆ ಆರ್ಥಿಕ ಬೆಂಬಲ ನೀಡುವ ನಿಟ್ಟಿನಲ್ಲಿ ಪ್ರಧಾನಮಂತ್ರಿ ಉಜ್ವಲಾ ಯೋಜನೆಯ ಎಲ್ ಪಿಜಿ ಸಿಲಿಂಡರ್ ಗೆ ಹೆಚ್ಚುವರಿಯಾಗಿ ಮತ್ತೆ 100 ರೂಪಾಯಿ ಸಬ್ಸಿಡಿ ನೀಡಲು ಕೇಂದ್ರ ಸಚಿವ ಸಂಪುಟ ಬುಧವಾರ (ಅಕ್ಟೋಬರ್ 04) ಅನುಮೋದನೆ ನೀಡಿದೆ. ಇದರೊಂದಿಗೆ ಉಜ್ವಲ ಯೋಜನೆಯ ಫಲಾನುಭವಿಗಳ ಸಬ್ಸಿಡಿ 300 ರೂಪಾಯಿಗೆ ಏರಿಕೆಯಾಗಿದೆ.
ಇದನ್ನೂ ಓದಿ:Rajouri;ಮೂರನೇ ದಿನಕ್ಕೆ ಕಾಲಿಟ್ಟ ಅಡಗಿರುವ ಉಗ್ರರ ವಿರುದ್ಧದ ಕಾರ್ಯಾಚರಣೆ
ಕೇಂದ್ರ ಸರ್ಕಾರದ ಈ ನಿರ್ಧಾರದಿಂದಾಗಿ ಉಜ್ವಲ ಯೋಜನೆ ಫಲಾನುಭವಿಗಳು ಇದೀಗ ಎಲ್ ಪಿಜಿ ಸಿಲಿಂಡರ್ ಗೆ 300 ರೂಪಾಯಿ ಸಬ್ಸಿಡಿ ಪಡೆಯಲಿದ್ದಾರೆ. ಈ ಮೊದಲು 200 ರೂಪಾಯಿ ಸಬ್ಸಿಡಿ ನೀಡಲಾಗಿತ್ತು. ಇದರೊಂದಿಗೆ ಉಜ್ವಲಾ ಫಲಾನುಭವಿಗಳ ಗ್ಯಾಸ್ ಸಿಲಿಂಡರ್ ಗೆ ಒಟ್ಟು 500 ರೂಪಾಯಿ ಇಳಿಕೆಯಾದಂತಾಗಿದೆ.
The government has raised subsidy amount for Pradhan Mantri Ujjwala Yojana beneficiaries from Rs 200 to Rs 300 per LPG cylinder: Union minister Anurag Thakur during a briefing on Cabinet decisions pic.twitter.com/Dvf7wXtXQT
— ANI (@ANI) October 4, 2023
ಇನ್ಮುಂದೆ ಉಜ್ವಲಾ ಫಲಾನುಭವಿಗಳು ಎಲ್ ಪಿಜಿ ಸಿಲಿಂಡರ್ ಅನ್ನು 603 ರೂಪಾಯಿಗೆ ಖರೀದಿಸಬಹುದಾಗಿದೆ. 2024ರ ಲೋಕಸಭಾ ಚುನಾವಣೆ ಹಾಗೂ ಕೆಲವು ರಾಜ್ಯಗಳ ವಿಧಾನಸಭೆ ಚುನಾವಣೆಗೂ ಮುನ್ನ ಸಬ್ಸಿಡಿ ಏರಿಸುವ ಮೂಲಕ ಕಡಿಮೆ ಆದಾಯ ಇರುವ ಲಕ್ಷಾಂತರ ಕುಟುಂಬಗಳಿಗೆ ನೆರವು ನೀಡಿದಂತಾಗಿದೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್’ ಹೊಸ ವೆಬ್‌ಸೈಟ್ ಪ್ರತ್ಯಕ್ಷ!
Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್ ವ್ಯಾಲ್ಯು ಫಂಡ್
Gold Rates:ಡಾಲರ್ ಬೆಲೆ ಏರಿಕೆ-18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?
Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….
Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.