ಕೃಷಿ ಭೂಮಿ ಬರಡುಬಿಟ್ಟರೆ ರಾಷ್ಟ್ರಕ್ಕೆ ನಷ್ಟ: ಸಚಿವ ಮಾಧುಸ್ವಾಮಿ
Team Udayavani, Jul 4, 2021, 6:38 PM IST
ಉಡುಪಿ: ಕೃಷಿ ಭೂಮಿ ಇದ್ದು ಚಟುವಟಿಕೆ ಮಾಡದಿದ್ದರೆ ರಾಷ್ಟ್ರಕ್ಕೆ ನಷ್ಟ. ರೈತರ ಸಮಸ್ಯೆಗಳನ್ನು ಅರ್ಥೈಸಿಕೊಂಡು ಕೃಷಿಕರಿಗೆ ಉತ್ತೇಜನ ನೀಡುವುದು ಸರಕಾರದ ಜವಾಬ್ದಾರಿ ಎಂದು ಸಣ್ಣ ನೀರಾವರಿ ಇಲಾಖೆಯ ಸಚಿವ ಮಾಧು ಸ್ವಾಮಿ ಹೇಳಿದರು.
ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗ ಕೃಷಿ ಚಟುವಟಿಕೆಗಳು ದುಬಾರಿಯಾಗಿದೆ. ಸರಕಾರ ನೆರವು ನೀಡಿದರೆ ಲಾಭದಾಯಕವಾಗಲಿದೆ. ಜನರು ಕೃಷಿ ಚಟುವಟಿಕೆಯಲ್ಲಿ ತೊಡಗಿದರೆ ವಲಸೆ ಬದುಕು ನಿವಾರಣೆಯಾಗಲಿದೆ. ಈ ಬಗ್ಗೆ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರು ಅರಿವು ಮೂಡಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಈ ಕೆಲಸ ಮತ್ತಷ್ಟು ಸಮರ್ಪಕವಾಗಿ ಅನುಷ್ಠಾನವಾಗಬೇಕು ಎಂದರು.
ಕರಾವಳಿಗೆ ಬೃಹತ್ ನೀರಾವರಿಗೆ ಪ್ರೋತ್ಸಾಹ ಇಲ್ಲ. ವಾರಾಹಿ ಅನಂತರ ಯಾವುದೇ ಯೋಜನೆಗಳಿಲ್ಲ. ಸಣ್ಣ ನೀರಾವರಿಗೆ ಮತ್ತಷ್ಟು ಪ್ರೋತ್ಸಾಹ ನೀಡಲಾಗುವುದು ಎಂದರು.
ಇದನ್ನೂ ಓದಿ : ಮಾಜಿ ಸಂಸದ ಹಿರಿಯ ರಾಜಕೀಯ ಮುತ್ಸದ್ಧಿ ಜಿ.ಮಾದೇಗೌಡ ಆಸ್ಪತ್ರೆಗೆ ದಾಖಲು
ಎತ್ತಿನಹೊಳೆ ಯೋಜನೆ ಪೂರ್ಣವಾಗಲು ಇನ್ನೂ ಎರಡು ವರ್ಷ ಬೇಕಾಗುತ್ತದೆ. ತುಮಕೂರು, ಚಿಕ್ಕಬಳ್ಳಾಪುರದಲ್ಲಿ ಜಮೀನು ಒತ್ತುವರಿ ಕೆಲಸವಾಗಿಲ್ಲ. ಕೆಲವು ತೊಡಕುಗಳನ್ನು ಇತ್ಯರ್ಥಪಡಿಸಿಕೊಂಡು ಕೆಲಸ ಮುಗಿಸಲಾಗುವುದು ಎಂದರು.
ಬಿಜೆಪಿ ಪಕ್ಷಕ್ಕೆ ಬರುವವರಿಗೆ ಸ್ವಾಗತ
ಎಲ್ಲ ಪಕ್ಷಗಳಿಗೂ ತಮ್ಮ ಪಕ್ಷವನ್ನು ವಿಸ್ತರಿಸುವ ಉದ್ದೇಶವಿರುತ್ತದೆ.ಬಿಜೆಪಿ ಪಕ್ಷಕ್ಕೂ ಯಾರು ಬೇಕಾದರೂ ಬರಬಹುದು. ಅಲ್ಲಿಯವರು ನಮ್ಮ ಪಕ್ಷಕ್ಕೆ ಬಂದರೂ ನಾವು ಸ್ವಾಗತ ಮಾಡುತ್ತೇವೆ ಎಂದು ಡಿಕೆಶಿ ಹೇಳಿಕೆಗೆ ತಿರುಗೇಟು ನೀಡಿದರು.
ಬೆಲೆ ಕಟ್ಟಲಾಗದ ನಿರ್ಧಾರ
ಕೊರೊನಾ ಲಸಿಕೆ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸಿದರೆ ಒಳ್ಳೆಯದಾಗುವುದಿಲ್ಲ ಎಂದು ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಎಚ್ಚರಿಕೆ ನೀಡಿದರು. ದೇಶದಲ್ಲಿ 80 ಕೋಟಿ ಮಂದಿಗೆ ಉಚಿತ ಲಸಿಕೆ ನೀಡಲಾಗುತ್ತಿದೆ. ಕೇಂದ್ರ ಸರಕಾರದ ಈ ನಿರ್ಧಾರಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಇದಕ್ಕಾಗಿ ರಾಜ್ಯ ಸರಕಾರ 2 ಸಾವಿರ ಕೋ.ರೂ.ತೆಗೆದಿಟ್ಟಿದೆ. ಇದರ ಜತೆಗೆ ಹೆಚ್ಚುವರಿ ಆಹಾರಗಳನ್ನೂ ಒದಗಿಸಲಾಗಿದೆ. ವಿಪಕ್ಷದಲ್ಲಿ ನನಗಿಂತ ಚೆನ್ನಾಗಿ ಕೆಲಸ ಮಾಡಿದವರು ಯಾರೂ ಇಲ್ಲ. ಆದರೆ ನೈಸರ್ಗಿಕ ಆಪತ್ತಿನ ಕಾಲದಲ್ಲಿ ಟೀಕೆ ಮಾಡುವುದು ತರವಲ್ಲ. ಲಸಿಕೆ ಉತ್ಪಾದಿಸಲು ಕಂಪೆನಿಯವರಿಗೆ ಕಾಲಾವಕಾಶ ನೀಡಬೇಕು ಎಂದರು.
ಜಾರಕಿಹೊಳೆ ಅವರಿಗೆ ಪಕ್ಷದ ಕಡೆಯಿಂದ ಯಾವುದೇ ತೊಂದರೆಯಿಲ್ಲ. ಆಕಸ್ಮಿಕ ಘಟನೆಯಿಂದಾಗಿ ಅವರು ಬಲಿಪಶುವಾಗಿದ್ದಾರೆ. ಅವರು ರಾಜೀನಾಮೆ ನೀಡುವುದು ಉತ್ತಮವಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
RSS: ಮೋಹನ್ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್ ಪತ್ರಿಕೆ ಆಕ್ಷೇಪ
Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್ ಮಾತು
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.