Madikeri: ಹಣ ನೀಡದೆ ವಂಚನೆ: ಖಾಸಗಿ ಸಂಸ್ಥೆ ವಿರುದ್ಧ ದೂರು
Team Udayavani, Oct 23, 2024, 1:50 AM IST
ಮಡಿಕೇರಿ: ಕೊಡಗು ಜಿಲ್ಲೆಯ ಗೋಣಿಕೊಪ್ಪ, ವಿರಾಜಪೇಟೆ, ಕುಶಾಲನಗರದಲ್ಲಿ ಮಲಬಾರ್ ಮಲ್ಟಿಸ್ಪೇಟ್ ಆಗ್ರೋ ಕೋ ಆಪರೇಟಿವ್ ಸೊಸೈಟಿ ಲಿಮಿಟೆಡ್ ಹೆಸರಿನಲ್ಲಿ ಕಚೇರಿ ತೆರೆದು ಸುತ್ತಮುತ್ತಲಿನ ಹಲವು ಗ್ರಾಹಕರಿಂದ ಪಿಗ್ಮಿ ಕಲೆಕ್ಷನ್, ಆರ್.ಡಿ. ಹಾಗೂ ಬಾಂಡ್ ಮೂಲಕ ಹಣ ಹೂಡಿಕೆ ಮಾಡಿಸಿಕೊಂಡು ಈಗ ಕಚೇರಿಯನ್ನು ಮುಚ್ಚಿ ಸಾರ್ವಜನಿಕರಿಗೆ ವಂಚನೆ ಮಾಡಿ ತಲೆಮರೆಸಿಕೊಂಡಿರುವ ಆರೋಪದಡಿ ಗೋಣಿಕೊಪ್ಪ, ವಿರಾಜಪೇಟೆ ನಗರ ಮತ್ತು ಕುಶಾಲನಗರ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ.
ಕುಶಾಲನಗರ ಪೊಲೀಸ್ ಠಾಣೆ ವ್ಯಾಪ್ತಿಯ ದಂಡಿನಪೇಟೆಯಲ್ಲಿರುವ ಮಲಬಾರ್ ಮಲ್ಟಿಸ್ಟೇಟ್ ಆಗ್ರೋ ಕೋ ಆಪರೇಟಿವ್ ಸೊಸೈಟಿಯಲ್ಲಿ ಬೈಲುಕುಪ್ಪೆ ನಿವಾಸಿ ಚಂದ್ರಹಾಸ ಕೆ.ಟಿ.(52) ಅವರು 2023ರ ಜೂ. 1ರಿಂದ ಪಿಗ್ಮಿ ಕಟ್ಟಲು ಪ್ರಾರಂಭಿಸಿದ್ದರು. 2024ನೇ ಸಾಲಿನ ಫೆಬ್ರವರಿ ತಿಂಗಳವರೆಗೆ ಪಿಗ್ಮಿ ಹಣದ ಮೊತ್ತ ಒಟ್ಟು 99,500 ರೂ. ಗಳಾಗಿತ್ತು. ಹಣವನ್ನು ಹಿಂದಿರುಗಿಸದೆ ಕಚೇರಿಯನ್ನು ಮುಚ್ಚಿರುವ ಹಿನ್ನೆಲೆಯಲ್ಲಿ ಚಂದ್ರಹಾಸ ಅವರು ಕುಶಾಲನಗರ ನಗರ ಪೊಲೀಸ್ ಠಾಣೆಯಲ್ಲಿ ವಂಚನೆಯ ದೂರು ನೀಡಿದ್ದರು.
ಮಲಬಾರ್ ಸೊಸೈಟಿಯ ಪ್ರಮುಖರು ವಂಚನೆ ಮಾಡಿರುವ ಆರೋಪದಡಿ ಪ್ರಕರಣ ದಾಖಲಾಗಿದೆ. ಸಾರ್ವಜನಿಕರು ಸೊಸೈಟಿಯಿಂದ ವಂಚನೆಗೆ ಒಳಗಾಗಿದ್ದಲ್ಲಿ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸುವಂತೆ ಕೊಡಗು ಜಿಲ್ಲಾ ಪೊಲೀಸ್ ಇಲಾಖೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.