Magadi: ವಾಸವಿ ದೇವಾಲಯದ ಖಜಾಂಚಿ ಮನೆಗೆ ಕನ್ನ… 4 ಕೆಜಿ ಚಿನ್ನಾಭರಣ ದೋಚಿ ಪರಾರಿ
Team Udayavani, Sep 23, 2024, 11:45 AM IST
ಮಾಗಡಿ: ಪಟ್ಟಣದ ಸರಸ್ವತಿ ವಿದ್ಯಾಮಂದಿರದ ಹಳೆ ಶಾಲೆಯ ಪಕ್ಕದ ಮನೆಯಲ್ಲಿ ವಾಸವಿ ದೇವಾಲಯದ ಖಜಾಂಚಿಯೂ ಆಗಿರುವ ವೇಣುಗೋಪಾಲ್ ಅವರ ಮನೆಗೆ ಕಳ್ಳರು ಕನ್ನ ಹಾಕಿದ್ದು ದೇವಸ್ಥಾನಕ್ಕೆ ಸಂಬಂಧಪಟ್ಟ ಚಿನ್ನಾಭರಣ ಸೇರಿದಂತೆ ಒಟ್ಟು ನಾಲ್ಕು ಕೆಜಿ ಚಿನ್ನ ಕಳ್ಳತನವಾಗಿರುವ ಕುರಿತು ವರದಿಯಾಗಿದೆ.
ವೇಣುಗೋಪಲ್ ಅವರು ಭಾನುವಾರ (ಸೆ. 22) ಸಂಜೆ 6:30ರ ಹೊತ್ತಿಗೆ ಆರ್ಯವೈಶ್ಯ ಸಮಾಜದ ಕಾರ್ಯಕ್ರಮಕ್ಕಾಗಿ ಕುಟುಂಬ ಸಮೇತರಾಗಿ ಚನ್ನಪಟ್ಟಣಕ್ಕೆ ತೆರಳಿದ್ದರು ನಂತರ ರಾತ್ರಿ 11 ಗಂಟೆ ಸುಮಾರಿಗೆ ಮನೆಗೆ ಬಂದು ನೋಡಿದಾಗ ಕಳ್ಳತವಾಗಿರುವುದು ಬೆಳಕಿಗೆ ಬಂದಿದೆ.
ಸ್ಥಳೀಯರು ನೀಡುವ ಮಾಹಿತಿಯಂತೆ ಭಾನುವಾರ ರಾತ್ರಿ 9:30ರ ಸಮಯದಲ್ಲಿ ಕಳ್ಳತನ ನಡೆದಿದೆ ಎನ್ನಲಾಗಿದೆ. ವೇಣುಗೋಪಾಲ್ ಅವರ ಮನೆಯಲ್ಲಿ ವಾಸವಿ ದೇವಾಲಯದ ಚಿನ್ನಾಭರಣ ಸೇರಿದಂತೆ ಸುಮಾರು 4 ಕೆಜಿ ಚಿನ್ನಾಭರಣ ದೋಚಲಾಗಿದ್ದು, ಬೆಳ್ಳಿ ಒಡವೆಗಳನ್ನು ಕಳ್ಳರು ಮುಟ್ಟಿಲ್ಲ ಎನ್ನಲಾಗಿದೆ.
ಘಟನೆ ಕುರಿತು ವೇಣುಗೋಪಾಲ್ ಅವರು ಮಾಗಡಿ ಪೊಲೀಸರಿಗೆ ದೂರು ನೀಡಿದ್ದು ಬೆರಳಚ್ಚು ತಜ್ಞರು ನುರಿತ ಶ್ವಾನದಳ ತಂಡ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದು ಡಿವೈಎಸ್ಪಿ ಪ್ರವೀಣ್ ನೇತೃತ್ವದಲ್ಲಿ ತನಿಖೆ ಆರಂಭಿಸಿದ್ದಾರೆ.
ಇದನ್ನೂ ಓದಿ: Viral Video: ಟಿಕೆಟ್ ಇಲ್ಲದೆ ರೈಲಿನ ಎಸಿ ಕೋಚ್ ನಲ್ಲಿ ಪ್ರಯಾಣಿಸಿದ ಹಾವು…
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.