Maha Election: ಡಿಕೆಶಿ ಸೇರಿ ಕಾಂಗ್ರೆಸ್ ಜತೆ ಇವಿಎಂ ಬಗ್ಗೆ ಚರ್ಚೆ: ಸಂಸದೆ ಸುಪ್ರಿಯಾ
ಮಹಾರಾಷ್ಟ್ರ ಚುನಾವಣೆಯಲ್ಲಿ ಇವಿಎಂ ತಿರುಚುವಿಕೆ ಆರೋಪ
Team Udayavani, Nov 26, 2024, 6:45 AM IST
ಹೊಸದಿಲ್ಲಿ: ಮಹಾರಾಷ್ಟ್ರ ಚುನಾವಣೆಯಲ್ಲಿ ಇವಿಎಂ ತಿರುಚುವಿಕೆ ಆರೋಪಗಳ ಸರಣಿ ಮುಂದುವರಿದಿದೆ. ಈ ಬಗ್ಗೆ ಕಾಂಗ್ರೆಸ್ ಜತೆ ಚರ್ಚಿಸುತ್ತೇನೆ. ಇದನ್ನು ಸಾಬೀತು ಮಾಡಲು ನಮಗೆ ಸಾಕ್ಷ್ಯಗಳ ಆವಶ್ಯಕತೆ ಇದೆ ಎಂದು ಎನ್‌ಸಿಪಿ (ಎಸ್‌ಪಿ) ಸಂಸದೆ ಸುಪ್ರಿಯಾ ಸುಳೆ ಹೇಳಿದ್ದಾರೆ.
ಸೋಮವಾರ ಮಾಧ್ಯಮಗಳ ಜತೆ ಮಾತನಾಡಿದ ಸುಳೆ, ಇವಿಎಂ ಅಕ್ರಮದ ಬಗ್ಗೆ ಕರ್ನಾಟಕ ಡಿಸಿಎಂ ಡಿ.ಕೆ.ಶಿವಕುಮಾರ್ ಮತ್ತಿತರ ಕಾಂಗ್ರೆಸ್ ನಾಯಕರ ಜತೆ ನಾನು ಚರ್ಚಿಸುತ್ತೇನೆ. ಸಾಕ್ಷ್ಯಗಳನ್ನು ಕಲೆ ಹಾಕಿ, ನಾವು ಇದನ್ನು ಸಾಬೀತು ಮಾಡುತ್ತೇವೆ’ ಎಂದು ಹೇಳಿದರು. ಇವಿಎಂ ಅಕ್ರಮದ ಬಗ್ಗೆ ಮಾತನಾಡಲು ಕೆಲವೇ ದಿನಗಳಲ್ಲೇ ದಿಲ್ಲಿಗೆ ಪ್ರಯಾಣಿಸುತ್ತೇನೆ ಎಂದು ಡಿ.ಕೆ.ಶಿವಕುಮಾರ್ ಸಹ ಇತ್ತೀಚೆಗೆ ಹೇಳಿದ್ದರು.
ಮತಪತ್ರ ಮೂಲಕ ಮರು ಚುನಾವಣೆಗೆ ರಾವತ್ ಆಗ್ರಹ
ಮಹಾರಾಷ್ಟ್ರದಲ್ಲಿ ಮರು ಚುನಾವಣೆ ನಡೆಸಬೇಕು. ಇದಕ್ಕೆ ಮತಪತ್ರ ಬಳಸಬೇಕು ಎಂದು ಶಿವಸೇನೆ ಉದ್ಧವ್ ಬಣ ಆಗ್ರಹಿಸಿದೆ. ಜತೆಗೆ ಇವಿಎಂಗಳ ದುರುಪಯೋಗಪಡಿಸಿಕೊಳ್ಳಲಾಗಿದೆ ಎಂದು ಆಪಾದಿಸಿದೆ. ನಾವು ಇವಿಎಂಗಳ ಬಗ್ಗೆ ಸುಮಾರು 450 ದೂರು ಗಳನ್ನು ಸ್ವೀಕರಿಸಿದ್ದೇವೆ. ಈಗಿನ ಫಲಿತಾಂಶ ತಡೆಹಿಡಿದು ಮತ ಪತ್ರ ಬಳಸಿ ಮತ್ತೆ ಚುನಾವಣೆ ನಡೆಸಬೇಕು ಎಂದು ಸಂಸದ ಸಂಜಯ್ ರಾವತ್ ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ತನ್ನ ಮನೆಯ ಮುಂದೆಯೇ ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…
Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Video: ತನ್ನ ಮನೆಯ ಮುಂದೆಯೇ ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…
Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ
Ex PM:ಪ್ರಚಾರದಿಂದ ದೂರ- ದೇಶ ಕಂಡ ಸರಳ, ಸಜ್ಜನಿಕೆಯ ಮೊದಲ ಆರ್ಥಿಕ ತಜ್ಞ ಪ್ರಧಾನಿ
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
ಕೋಳಿ ಅಂಕಕ್ಕೆ ಪೊಲೀಸ್ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.