Maharashtra Election: ಇವಿಎಂ ವಿರುದ್ಧ ದೇಶಾದ್ಯಂತ ಪ್ರತಿಭಟನೆಗೆ ಅಘಾಡಿ ಪ್ಲಾನ್!
ಮಹಾರಾಷ್ಟ್ರದಲ್ಲಿ ನಮ್ಮ ಸೋಲಿಗೆ ಇವಿಎಂ ಕಾರಣ: ಕಾಂಗ್ರೆಸ್ ಆರೋಪ
Team Udayavani, Nov 28, 2024, 6:11 AM IST
ಮುಂಬಯಿ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಮಹಾವಿಕಾಸ ಅಘಾಡಿ ಸೋಲಿಗೆ ವಿದ್ಯುನ್ಮಾನ ಮತಯಂತ್ರಗಳೇ ಪ್ರಮುಖ ಕಾರಣ ಎಂದು ಅಘಾಡಿ ಆರೋಪಿಸಿದೆ. ಹೀಗಾಗಿ ಇದರ ವಿರುದ್ಧ ದೇಶಾದ್ಯಂತ ಪ್ರತಿಭಟನೆ ನಡೆಸಲು ಸಿದ್ಧತೆ ನಡೆಸಲಾಗಿದೆ ಎಂದು ಕಾಂಗ್ರೆಸ್ ಹೇಳಿದೆ.
ಅಲ್ಲದೆ ಎಲ್ಲ ವಿವಿ ಪ್ಯಾಟ್‌ಗಳನ್ನು ಮರುಪರಿಶೀಲನೆ ನಡೆಸಬೇಕು ಎಂದು ಸೋತಿರುವ ಅಘಾಡಿ ಅಭ್ಯರ್ಥಿಗಳು ಚುನಾವಣ ಆಯೋಗಕ್ಕೆ ಮನವಿ ಮಾಡಲಿದ್ದಾರೆ. ಮಂಗಳವಾರ ಉದ್ಧವ್ ಠಾಕ್ರೆ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸೋತ ಎಲ್ಲ ಅಭ್ಯರ್ಥಿಗಳು ಇವಿಎಂ ತಿರುಚಿದ್ದೇ ಸೋಲಿಗೆ ಕಾರಣ ಎಂದು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ದೇಶಾದ್ಯಂತ ಪ್ರತಿಭಟನೆಗೆ ಚಿಂತಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಇವಿಎಂ ವಿರುದ್ಧ ಕಾನೂನು ಹೋರಾಟ ನಡೆಸಲು ಬೇಕಾಗಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಲು ಸಿದ್ಧತೆ ಕೈಗೊಳ್ಳಲಾಗಿದೆ. ಇದರ ಜತೆಗೆ ಶಿವಸೇನೆ(ಯುಬಿಟಿ)ಯ ಮುಖವಾಣಿಯಾದ ಸಾಮ್ನಾ, ಮಹಾ ರಾಷ್ಟ್ರದಲ್ಲಿ ಮಹಾಯುತಿಗೆ ಸಿಕ್ಕ ಗೆಲುವು ಒಂದು ರೀತಿಯಲ್ಲಿ ಬಂಪರ್ ಲಾಟರಿ ಇದ್ದಂತೆ. ಇದು ಇವಿಎಂ ಬಗ್ಗೆ ಅನುಮಾನ ಮೂಡಿಸಿದೆ. ಇವಿಎಂ ಇದ್ದರೆ ಈ ದೇಶದಲ್ಲಿ ಎಲ್ಲವೂ ಸಾಧ್ಯ ಎಂದು ಹೇಳಿದೆ. ಈ ಮೂಲಕ ಇವಿಎಂ ತಿರುಚುವಿಕೆ ಬಗ್ಗೆ ಅನುಮಾನ ವ್ಯಕ್ತಪಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Supreme Court: ಮೀಸಲಿಗಾಗಿ ಆಗುವ ಮತಾಂತರ ಸಂವಿಧಾನಕ್ಕೆ ಮೋಸ
Lokasabha: ಕರ್ನಾಟಕದ 869 ಸೇರಿ 58,929 ವಕ್ಫ್ ಆಸ್ತಿಗಳ ಅತಿಕ್ರಮ: ಕಿರಣ್ ರಿಜಿಜು
Jaipur: ಬರೋಬ್ಬರಿ 3,676 ಕಿ.ಮೀ. ಹಾರಿದ ಕೊಕ್ಕರೆ: ದಾಖಲೆ
EVM Issue: ಇವಿಎಂಗೂ ಮುನ್ನ ರಾಹುಲ್‌ರನ್ನು ಬದಲಿಸಿ ಕಾಂಗ್ರೆಸ್‌ಗೆ ಬಿಜೆಪಿ ಟಾಂಗ್
Parliment Session: ಅದಾನಿ ಲಂಚ ಆರೋಪ ಗದ್ದಲ: ಕಲಾಪ ಮುಂದಕ್ಕೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್ ಅಮಾನತು
Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ
ICC World Rankings: ಟೆಸ್ಟ್ ಬೌಲಿಂಗ್ ರ್‍ಯಾಂಕಿಂಗ್ ಬುಮ್ರಾ ಮರಳಿ ನಂ.1
Daily Horoscope: ವೆಚ್ಚಗಳು ಎಣಿಸದೆ ಬಂದರೂ ಅಪವ್ಯಯ ಇಲ್ಲ, ಎಲ್ಲದರಲ್ಲೂ ಎಚ್ಚರವಿರಲಿ
Udupi: ಪೊಲೀಸ್ ಅಧಿಕಾರಿಯೆಂದು ನಂಬಿಸಿ ಮಹಿಳೆಗೆ ಲಕ್ಷಾಂತರ ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.