ದೇಶದಾದ್ಯಂತ ಮೊಳಗಿದ ಶಿವನ ನಾಮಸ್ಮರಣೆ: ಇಂದು ಅದ್ದೂರಿಯ ಮಹಾಶಿವರಾತ್ರಿ ಆಚರಣೆ
Team Udayavani, Feb 21, 2020, 9:23 AM IST
ಬೆಂಗಳೂರು: ದೇಶದಾದ್ಯಂತ ಮಹಾಶಿವರಾತ್ರಿ ಹಬ್ಬವನ್ನು ಸಡಗರ ಮತ್ತು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಶಿವನ ದೇಗುಲಗಳಲ್ಲಿ ವಿಶೇಷ ಪೂಜೆ, ವಿಭೂತಿ ಹಾಗೂ ರುದ್ರಾಕ್ಷಿ ಮಾಲೆ ಅರ್ಪಣೆ , ಶಿವನಿಗೆ ಪ್ರಿಯವಾದ ಬಿಲ್ವ ಪತ್ರೆ ಅರ್ಪಣೆ, ಮಂಗಳಾರತಿ ನೆರವೇರಿಸಲಾಗುತ್ತಿದ್ದು ಭಕ್ತರಲ್ಲಿ ಸಂತಸ ಮನೆಮಾಡಿದೆ.
ದುಷ್ಟಸಂಹಾರ ಶಿವ ಈ ದಿನ ತನ್ನನ್ನು ಪೂಜಿಸುವ ಭಕ್ತರಿಗೆ ವಿಶೇಷ ಅನುಗ್ರಹ ನೀಡುತ್ತಾನೆ ಎಂಬ ನಂಬಿಕೆ ಚಾಲ್ತಿಯಲ್ಲಿದೆ. ಈ ರಾತ್ರಿ ಜಾಗರಣೆ ಮಾಡಿ, ಶಿವನನ್ನು ಭಕ್ತಿಯಿಮದ ಪೂಜಿಸಿದರೆ ಇಷ್ಟಾರ್ಥಗಳು ನೆರವೇರುತ್ತವೆ ಎಂದು ಹೇಳಲಾಗುತ್ತದೆ.
ಕರ್ನಾಟಕದ ಕಾಡು ಮಲ್ಲೆಶ್ವರ ಮಲ್ಲಿಕಾರ್ಜುನ ಸ್ವಾಮಿ ದೇವಾಲಯ, ಗವಿಪುರದ ಗವಿ ಗಂಗಾಧರೇಶ್ವರ ದೇವಾಲಯ, ಗುಟ್ಟಹಳ್ಳಿಯ ಪಂಚಲಿಂಗೆಶ್ವರ ಸ್ವಾಮಿ ದೇವಾಲಯ, ಹಲಸೂರಿನ ಸೋಮೇಶ್ವರ , ಸೇರಿದಂತೆ ವಿವಿಧ ದೇವಾಲಯಗಳಲ್ಲಿ ಶಿವನ ಸ್ಮರಣೆ ನಡೆಯುತ್ತಿದೆ. ದಕ್ಷಿಣ ಕನ್ನಡದ ಧರ್ಮಸ್ಥಳದಲ್ಲಿ ಪ್ರತಿವರ್ಷದಂತೆ ವಿಶೇಷ ಆಚರಣೆ ಇದ್ದು =, ಮಂಜುನಾಥ ಸ್ವಾಮಿಯ ದರ್ಶನಕ್ಕಾಗಿ ರಾಜ್ಯ ಮತ್ತು ಹೊರ ರಾಜ್ಯಗಳಿಂದ ಭಕ್ತರು ಕಾಲ್ನಡಿಗೆಯಲ್ಲಿ ಧರ್ಮಸ್ಥಳಕ್ಕೆ ಆಗಮಿಸಿ ಅಹೋರಾತ್ರಿ ಭಜನೆ ಮಾಡುತ್ತಾ ಜಾಗರಣೆ ಮಾಡುತ್ತಾರೆ.
ಮಾತ್ರವಲ್ಲದೆ ಶಿವನ ಸಹಸ್ರ ನಾಮ ಪಠಣ, ವೇದಾಂತ ಉಪನ್ಯಾಸ, ಸಂಗೀತೋತ್ಸವ, ಅಹೋರಾತ್ರಿ ಶಿವನಾಮ ಜಪ ನಡೆಯುತ್ತಿದೆ. ದೇವಾಲಯಗಳಲ್ಲಿ ಹೆಚ್ಚು ಭಕ್ತರು ಆಗಮಿಸುವ ಹಿನ್ನಲೆಯಲ್ಲಿ ಎಲ್ಲಾ ದೇವಾಲಯಗಳ್ಲಿ ವಿಶೇಷ ವ್ಯವಸ್ಥೆಗಳನ್ನು ಕಲ್ಪಿಸಲಾಗುತ್ತಿದೆ.
ಸಮಸ್ತ ಜನತೆಗೆ ಮಹಾ ಶಿವರಾತ್ರಿಯ ಹಾರ್ದಿಕ ಶುಭಾಶಯಗಳು. pic.twitter.com/BoRTOXhYpe
— B.S. Yediyurappa (@BSYBJP) February 21, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.