Mahayuti: ಈ ಬಾರಿ ನಾನು ದೇವೇಂದ್ರ ಫಡ್ನವೀಸ್ ಹೆಸರು ಸೂಚಿಸಿ ಋಣ ತೀರಿಸಿದೆ: ಶಿಂಧೆ
ಸುದ್ದಿಗೋಷ್ಠಿಯಲ್ಲಿ ಅಜಿತ್ ಪವಾರ್ ಕಾಲೆಳೆದ ಏಕನಾಥ್ ಶಿಂಧೆ, ಆಹ್ವಾನ ಪತ್ರಿಕೆಯಲ್ಲಿ ಹೆಸರು ಬದಲಿಸಿಕೊಂಡ ನಿಯೋಜಿತ ಸಿಎಂ
Team Udayavani, Dec 5, 2024, 7:50 AM IST
ಮುಂಬಯಿ: ಮಹಾರಾಷ್ಟ್ರ ರಾಜ್ಯಪಾಲ ಸಿ.ಪಿ.ರಾಧಾಕೃಷ್ಣನ್ ಅವರಲ್ಲಿ ಸರಕಾರ ರಚನೆಗೆ ಹಕ್ಕು ಮಂಡಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡುವಾಗ ಕಳೆದ ಬಾರಿ ಮುಖ್ಯಮಂತ್ರಿ ಸ್ಥಾನಕ್ಕೆ ದೇವೇಂದ್ರ ಫಡ್ನವೀಸ್ ನನ್ನ ಹೆಸರು ಸೂಚಿಸಿದ್ದರು. ಹಾಗಾಗಿ ಈ ಬಾರಿ ನಾನು ಅವರ ಹೆಸರು ಸೂಚಿಸಿದ್ದೇನೆ ಎಂದು ಏಕನಾಥ ಶಿಂಧೆ ಹೇಳಿದ್ದಾರೆ.
ಅಲ್ಲದೇ ನಾನು ಬಿಜೆಪಿ ತೆಗೆದುಕೊಂಡಿರುವ ಯಾವ ನಿರ್ಧಾರಕ್ಕೂ ಅಡ್ಡಿ ಮಾಡುವುದಿಲ್ಲ ಎಂದರು. ಚುನಾವಣಾ ಫಲಿತಾಂಶ ಪ್ರಕಟವಾದ ಹೊಸತರಲ್ಲಿ ಶಿಂಧೆ ಸಹ ಮುಖ್ಯಮಂತ್ರಿ ಸ್ಥಾನದ ಮೇಲೆ ಹಕ್ಕು ಮಂಡಿಸಿದ್ದರು. ಆದರೆ ದೆಹಲಿಯಲ್ಲಿ ಬಿಜೆಪಿ ವರಿಷ್ಠರ ಜತೆ ಸಭೆ ನಡೆಸಿದ ಬಳಿಕ ಶಿಂಧೆ ಸಿಎಂ ಸ್ಥಾನ ಬಿಟ್ಟುಕೊಡಲು ಒಪ್ಪಿಕೊಂಡಿದ್ದರು.
ಅಜಿತ್ ಕಾಲೆಳೆದ ಏಕನಾಥ್ ಶಿಂಧೆ
ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಬಳಿಕ ಮಾಧ್ಯಮಗಳ ಎದುರು ಮಾತನಾಡಿದ ಏಕನಾಥ ಶಿಂಧೆ, ಅಜಿತ್ ಪವಾರ್ ಅವರ ಕಾಲೆಳೆದಿದ್ದಾರೆ. ಅಜಿತ್ ಅವರಿಗೆ ಸಾಕಷ್ಟು ಅನುಭವವಿದ್ದು, ಹಗಲು, ರಾತ್ರಿ ಯಾವಾಗಾದರೂ ಪ್ರಮಾಣ ವಚನ ಸ್ವೀಕರಿಸಲು ಅವರು ಸಿದ್ಧರಾಗಿದ್ದಾರೆ ಎಂದು ಹೇಳಿದ್ದಾರೆ. ಮಹಾಯುತಿ ಸರ್ಕಾರದಲ್ಲಿ ಒಂದು ಡಿಸಿಎಂ ಹುದ್ದೆ ನನಗೆ ಸೇರಿದ್ದು, ಇದನ್ನು ತಪ್ಪಿಸಲು ಯಾರಿಗೂ ಸಾಧ್ಯವಿಲ್ಲ ಎಂದು ಅಜಿತ್ ಪವಾರ್ ಹೇಳಿದ್ದರು.
ಮಹಾಯುತಿ ಸರ್ಕಾರದಲ್ಲಿ ಯಾವು ಯಾವ ಹುದ್ದೆಯನ್ನು ನಿಭಾಯಿಸುತ್ತೀರಿ ಎಂಬ ಪ್ರಶ್ನೆಗಳಿಗೆ ಶಿಂಧೆ ಉತ್ತರಿಸುತ್ತಿದ್ದಾಗಲೇ ಮಧ್ಯಪ್ರವೇಶಿಸಿದ ಅಜಿತ್ ಪವಾರ್, “ನಾನು ಖಂಡಿತವಾಗಿಯೂ ಡಿಸಿಎಂ ಆಗಿ ಪದಗ್ರಹಣ ಮಾಡುತ್ತೇನೆ ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಹಾಸ್ಯ ಚಟಾಕಿ ಹಾರಿಸಿದರು, ಇದಕ್ಕೆ ಅಷ್ಟೇ ಹಾಸ್ಯಭರಿತವಾಗಿ ಪ್ರತಿಕ್ರಿಯೆ ನೀಡಿದ ಏಕನಾಥ್ ಶಿಂಧೆ, ಅಜಿತ್ ದಾದಾ ಪವಾರ್ ಗೆ ಡಿಸಿಎಂ ಆಗಿ ಬೆಳಿಗ್ಗೆ ಹಾಗೂ ಸಂಜೆ ಪದಗ್ರಹಣ ಮಾಡಿದ ಅನುಭವವಿದೆ ಎಂದು ಕಾಲೆಳೆದಿದ್ದಾರೆ.
ಇದಕ್ಕೆ ನಗುತ್ತಲೇ ಉತ್ತರಿಸಿದ ಅಜಿತ್ ಪವಾರ್, ಕಳೆದ ಬಾರಿ ದೇವೇಂದ್ರ ಫಡ್ನವಿಸ್ ಜೊತೆ ಬೆಳ್ಳಂಬೆಳಿಗ್ಗೆ ಡಿಸಿಎಂ ಆಗಿ ಪದಗ್ರಹಣ ಮಾಡಿದ್ದನ್ನು ನೆನಪಿಸಿಕೊಂಡಿದ್ದಾರೆ. “ಕಳೆದ ಬಾರಿ ಫಡ್ನವಿಸ್ ಜೊತೆ ಡಿಸಿಎಂ ಆಗಿ ಪದಗ್ರಹಣ ಮಾಡಿದಾಗ ಆ ಸರ್ಕಾರ ಹೆಚ್ಚು ಸಮಯ ಅಸ್ತಿತ್ವದಲ್ಲಿರಲಿಲ್ಲ. ಈ ಬಾರಿ ಫಡ್ನವಿಸ್ ಜೊತೆ ಡಿಸಿಎಂ ಆಗಿ 5 ವರ್ಷ ಪೂರೈಸುತ್ತೇವೆ” ಎಂಬ ವಿಶ್ವಾಸ ವ್ಯಕ್ತಪಡಿಸಿದರು
ಗೃಹ ಖಾತೆ ಬಿಜೆಪಿಗೆ?
ಮುಖ್ಯಮಂತ್ರಿ ಸ್ಥಾನ ಅಂತಿಮವಾಗುತ್ತಿದ್ದಂತೆ ಮಹಾಯುತಿಯಲ್ಲಿ ಸಚಿವ ಸ್ಥಾನದ ಲಾಬಿ ಶುರುವಾಗಿದೆ ಎನ್ನಲಾಗಿದೆ. ಸೋಮವಾರ ಹಾಗೂ ಮಂಗಳವಾರ ಇದರ ಬಗ್ಗೆಯೇ ದೆಹಲಿಯಲ್ಲಿ ಚರ್ಚೆ ನಡೆಸಲಾಗಿದ್ದು, ಗೃಹ ಖಾತೆಯನ್ನು ಬಿಜೆಪಿಗೆ ಬಿಟ್ಟುಕೊಡಲಾಗಿದೆ ಎನ್ನಲಾಗಿದ್ದು, ಇದರೊಂದಿಗೆ ಬಿಜೆಪಿಗೆ 22 ಸಚಿವ ಸ್ಥಾನ ನೀಡಲಾಗಿದೆ ಎನ್ನಲಾಗಿದೆ. ನಗರಾಭಿವೃದ್ಧಿ ಖಾತೆ ಜತೆಗೆ ಶಿವಸೇನೆಗೆ 12 ಸಚಿವ ಸ್ಥಾನ, ಹಣಕಾಸು ಮತ್ತು ಡೆಪ್ಯೂಟಿ ಸ್ಪೀಕರ್ ಹುದ್ದೆ ಜತೆಗೆ ಎನ್‌ಸಿಪಿಗೆ 10 ಸಚಿವ ಸ್ಥಾನ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.
ಹೆಸರು ಬದಲಿಸಿಕೊಂಡ ಫಡ್ನವೀಸ್
ಪ್ರಮಾಣ ವಚನ ಸ್ವೀಕಾರದ ಆಹ್ವಾನ ಪತ್ರಿಕೆಯಲ್ಲಿ ನಿಯೋಜಿತ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ತಮ್ಮ ಹೆಸರಲ್ಲಿ ಕೊಂಚ ಬದಲಾವಣೆ ಮಾಡಿಕೊಂಡಿದ್ದಾರೆ. ತಾಯಿ-ತಂದೆಯ ಹೆಸರನ್ನು ತಮ್ಮ ಹೆಸರಲ್ಲಿ ಸೇರಿಸಿಕೊಂಡಿದ್ದು, ದೇವೇಂದ್ರ ಸರಿತಾ ಗಂಗಾಧರರಾವ್ ಫಡ್ನವೀಸ್ ಎಂದು ಬದಲಿಸಿಕೊಂಡಿದ್ದಾರೆ. ಇದು ಸಾಕಷ್ಟು ಅಚ್ಚರಿಗೆ ಕಾರಣವಾಗಿದೆ. ಕಳೆದ ಬಾರಿ ತಂದೆಯ ಹೆಸರನ್ನು ಮಾತ್ರ ಸೇರಿಸಿಕೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಪ್ಪನನ್ನೇ ಬದಲಿಸಿದ ಅತಿಶಿ: ಪ್ರಿಯಾಂಕಾ ಬೆನ್ನಲ್ಲೇ ವಿವಾದಾತ್ಮಕ ಹೇಳಿಕೆ ನೀಡಿದ ಬಿಧುರಿ
Prashant Kishor: ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪ್ರಶಾಂತ್ ಕಿಶೋರ್ ಬಂಧನ
Protect: ಹೆತ್ತವರನ್ನು ಸಾಕದಿದ್ದರೆ ಗಿಫ್ಟ್ ಡೀಡ್ ರದ್ದು: ಸುಪ್ರೀಂ ಕೋರ್ಟ್
ವಲಸೆ ನಿಯಮ ಸಡಿಲಿಸಿದ ನ್ಯೂಜಿಲ್ಯಾಂಡ್ ಸರಕಾರ; ಭಾರತೀಯರಿಗೆ ಹೆಚ್ಚಿನ ಅವಕಾಶ ಸಾಧ್ಯತೆ
Kalpeni Island: ಲಕ್ಷದ್ವೀಪದಲ್ಲಿ ಯುರೋಪ್‌ನ ಯುದ್ಧ ನೌಕೆ ಅವಶೇಷ ಪತ್ತೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಅಪ್ಪನನ್ನೇ ಬದಲಿಸಿದ ಅತಿಶಿ: ಪ್ರಿಯಾಂಕಾ ಬೆನ್ನಲ್ಲೇ ವಿವಾದಾತ್ಮಕ ಹೇಳಿಕೆ ನೀಡಿದ ಬಿಧುರಿ
India Cricket: ಸೀಮಿತ ಓವರ್ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಸ್ಟಾರ್ ಆಲ್ ರೌಂಡರ್
Make America Great Again: ಅಮೆರಿಕದಲ್ಲಿ ಸ್ವದೇಶಿ vs ವಲಸಿಗರು ಜಟಾಪಟಿ
Prashant Kishor: ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪ್ರಶಾಂತ್ ಕಿಶೋರ್ ಬಂಧನ
Udupi: ಇನ್‌ಸ್ಟಾಗ್ರಾಂ ಲಿಂಕ್ ಬಳಸಿ 12.46 ಲಕ್ಷ ರೂ. ಕಳೆದುಕೊಂಡ ಯುವತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.