ಸ್ಥಿರತೆ ಕಾಯ್ದುಕೊಳ್ಳಬೇಕಿದೆ ಅಡಿಕೆ ಧಾರಣೆ

Team Udayavani, Feb 26, 2021, 6:50 AM IST

ಸ್ಥಿರತೆ ಕಾಯ್ದುಕೊಳ್ಳಬೇಕಿದೆ ಅಡಿಕೆ ಧಾರಣೆ

ಸದ್ಯ ಅಡಿಕೆ ಧಾರಣೆ ಏರುಗತಿಯಲ್ಲಿದೆ. ಅತಿವೃಷ್ಟಿ, ಕೊಳೆರೋಗ, ಬೆಲೆ ಕುಸಿತ, ಕಾರ್ಮಿಕರ ವೇತನದಲ್ಲಿನ ಹೆಚ್ಚಳ ಮತ್ತಿತರ ಕಾರಣಗಳಿಂದಾಗಿ ತೀವ್ರ ಸಂಕಷ್ಟಕ್ಕೀಡಾಗಿದ್ದ ಕರಾವಳಿ ಮತ್ತು ಮಲೆನಾಡಿನ ಅಡಿಕೆ ಬೆಳೆಗಾರರು ಈಗ ಒಂದಿಷ್ಟು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ.

ಯಾವುದೇ ಕೃಷಿ ಬೆಳೆಗಳ ಧಾರಣೆ ಏರಿಕೆಯಾಗುತ್ತಿದ್ದಂತೆ ಉತ್ಪಾದನ ವೆಚ್ಚ, ಅದರಲ್ಲೂ ಮುಖ್ಯವಾಗಿ ಕಾರ್ಮಿಕರ ವೇತನವೂ ಸಮಾನಾಂತರವಾಗಿ ಏರಿಕೆ ಯಾಗುವುದು ಸರ್ವೇ ಸಾಮಾನ್ಯ. ಮಾರುಕಟ್ಟೆ ಸ್ವಲ್ಪ ಕುಸಿತ ಕಂಡರೂ ಏರಿಕೆಯಾದ ಉತ್ಪಾದನ ವೆಚ್ಚವಾಗಲೀ ಕಾರ್ಮಿಕರ ವೇತನವಾಗಲೀ ಕಡಿಮೆಯಾಗುವುದಿಲ್ಲ. ಆಗ ಬೆಳೆಗಾರರು ಮತ್ತೆ ಸಂಕಷ್ಟಕ್ಕೀಡಾಗುತ್ತಾರೆ.
ಹವಾಮಾನ ವೈಪರೀತ್ಯ, ಕೀಟ, ರೋಗಭಾದೆ ಮುಂತಾದವುಗಳಿಂದಾಗಿ ಅಡಿಕೆ ಉತ್ಪಾದನೆಯಲ್ಲಿ ಕುಸಿತ, ವಿದೇಶಗಳಿಂದ ಅನಧಿಕೃತವಾಗಿ ಆಮ ದಾಗುತ್ತಿರುವ ಅಡಿಕೆಗೆ ನಿಯಂತ್ರಣ ಮತ್ತು ಆಮದು ಆಡಿಕೆಯ ಮೇಲಣ ಸುಂಕ ಹೆಚ್ಚಳ ಮತ್ತಿತರ ಕಾರಣಗಳಿಂದಾಗಿ ಇದೀಗ ದೇಶೀಯ ಮಾರುಕಟ್ಟೆಯಲ್ಲಿ ಅಡಿಕೆಗೆ ಬೇಡಿಕೆ ಹೆಚ್ಚಾಗಿದೆ. ಸಹಜವಾಗಿ ಅಡಿಕೆ ಧಾರಣೆಯಲ್ಲಿ ಏರಿಕೆಯಾಗಿದೆ.

ರಾಜ್ಯದ ಮಲೆನಾಡು ಮತ್ತು ಕರಾವಳಿಯಲ್ಲಿ ಸಾವಿರಾರು ಕೃಷಿ ಕುಟುಂಬಗಳಿಗೆ ವಾಣಿಜ್ಯ ಬೆಳೆಯಾದ ಅಡಿಕೆ ಜೀವನಾಧಾರವಾಗಿದೆ. ಇಡೀ ದೇಶದ ಒಟ್ಟು ಅಡಿಕೆ ಉತ್ಪಾದನೆಯಲ್ಲಿ ರಾಜ್ಯದ ಪಾಲು ಶೇ.75ರಷ್ಟಿದೆ. ಕಳೆದ ಐದು ವರ್ಷಗಳಲ್ಲಿ ಅಡಿಕೆ ಉತ್ಪಾದನ ಪ್ರಮಾಣ ಶೇ. 95ರಷ್ಟು ಏರಿಕೆಯಾಗಿದ್ದು , 2015-16ರಲ್ಲಿ 4.30 ಲಕ್ಷ ಟನ್‌ಗಳಷ್ಟು ಇದ್ದ ಅಡಿಕೆ 8.54ಲಕ್ಷ ಟನ್‌ಗಳಿಗೆ ಹೆಚ್ಚಿದೆ.

ದೇಶದಲ್ಲಿ 2015-16ರಲ್ಲಿ 7.13 ಲಕ್ಷ ಟನ್‌ಗಳಷ್ಟು ಅಡಿಕೆ ಉತ್ಪಾದನೆಯಾಗಿದ್ದರೆ ಕಳೆದ ಅರ್ಧ ದಶಕದಲ್ಲಿ ಅಡಿಕೆ ಉತ್ಪಾದನೆಯ ಪ್ರಮಾಣ ಶೇ. 55 ಏರಿಕೆಯಾಗಿ 11.07 ಲಕ್ಷ ಟನ್‌ಗಳಿಗೆ ತಲುಪಿದೆ. ಇದರಲ್ಲಿ ಕರ್ನಾಟಕದ್ದೇ ಸಿಂಹಪಾಲು. ಅಸ್ಸಾಂ, ಕೇರಳ, ಮೇಘಾಲಯಗಳ ಕೊಡುಗೆಯೂ ಸೇರಿವೆ. ವಿಶ್ವದ ಅಡಿಕೆ ರಫ್ತು ಮಾರುಕಟ್ಟೆಯಲ್ಲಿ ನಮ್ಮ ದೇಶದ ಪಾಲು ಕೇವಲ ಶೇ. 5ರಷ್ಟಾಗಿದೆ. ಕೇರಳ ಮತ್ತು ಅಸ್ಸಾಂ ರಾಜ್ಯಗಳಲ್ಲಿ ಅಡಿಕೆ ಬೆಳೆಯ ಪ್ರಮಾಣ ಇಳಿಮುಖವಾಗುತ್ತಿದ್ದು 2015-16ರಲ್ಲಿ 1.02 ಲಕ್ಷ ಟನ್‌ಗಳಷ್ಟಿದ್ದ ಅಡಿಕೆ ಉತ್ಪಾದನೆ ಈಗ 63,000 ಟನ್‌ಗಳಿಗೆ ಇಳಿಕೆಯಾಗಿದೆ.

ಈ ಮಧ್ಯೆ ರಾಜ್ಯದ ಅಡಿಕೆ ಬೆಳೆಗಾರರ ನೆರವಿಗೆ ಬಂದಿರುವ ರಾಜ್ಯ ಸರಕಾರ, ತಜ್ಞರ ಸಮಿತಿಯೊಂದನ್ನು ರಚಿಸಿ ಅಡಿಕೆ ಆರೋಗ್ಯಕ್ಕೆ ಹಾನಿಕಾರಕ ಎಂಬ ಗೊಂದಲವನ್ನು ಹೋಗಲಾಡಿಸುವ ಬಗ್ಗೆ ವೈಜ್ಞಾನಿಕ ಸಂಶೋಧನೆ ನಡೆಸಿ ಸುಪ್ರೀಂ ಕೋರ್ಟ್‌ಗೆ ವರದಿ ಸಲ್ಲಿಸುವಂತೆ ನಿರ್ದೇಶಿಸಿದೆ. ಈ ಮೂಲಕ ಅಡಿಕೆ ಮಾರುಕಟ್ಟೆಯಲ್ಲಿನ ಅನಿಶ್ಚಿತತೆಗೆ ತೆರೆ ಎಳೆಯಲು ಪ್ರಯತ್ನಗಳು ಸಾಗುತ್ತಿವೆ. ಅಡಿಕೆ ಬೆಳೆಗಾರರು ಹಾಗೂ ಸಂಘಟನೆಗಳ ಹಿತರಕ್ಷಣೆಗೆ “ಅಡಿಕೆ ಪ್ರಾಧಿಕಾರ’ದ ರಚನೆ, ವಿದೇಶಿ ಅಡಿಕೆ ಅಮದು ಮೇಲಣ ನಿಯಂತ್ರಣ, ಉತ್ಪಾದನ ವೆಚ್ಚವನ್ನು ಆಧರಿಸಿ ಬೆಲೆ ನಿಗದಿಪಡಿಸುವ ಸುಧಾರಿತ ಯೋಜನೆಗಳು ಅನು ಷ್ಠಾನದ ಹಾದಿಯಲ್ಲಿವೆ. ಅಡಿಕೆ ಬೆಳೆಯ ಮೌಲ್ಯವ ರ್ಧನೆಗೆ ಇರುವ ಅವಕಾಶಗಳ ಸಂಶೋಧನೆ ಇಂದಿನ ತುರ್ತು ಅಗತ್ಯವಾಗಿದ್ದು , ಈ ನಿಟ್ಟಿನಲ್ಲಿ ವಿಜ್ಞಾನಿಗಳು ಕಾರ್ಯೋನ್ಮುಖರಾಗಿರುವುದು ಸಂತಸದ ವಿಷಯ.

ವಿವಿಧ ವಾಣಿಜ್ಯ ಬೆಳೆಗಳ ಸಂಬಂಧಿತ ಮಂಡಳಿ ಈಗಾಗಲೇ ಕಾರ್ಯ ನಿರ್ವಹಿಸುತ್ತಿರುವುದರಿಂದ ಹಾಗೂ ವಾಣಿಜ್ಯ ಬೆಳೆಗಳ ಸಂಶೋಧನ ಕೇಂದ್ರ, ಕ್ಯಾಂಪ್ಕೋದಂತಹ ಸಂಸ್ಥೆಗಳು ಕಾರ್ಯನಿರ್ವಹಿಸು ತ್ತಿವೆ. ಹೀಗಾಗಿ ಅಡಿಕೆಗಾಗಿ ಪ್ರತ್ಯೇಕ ಮಂಡಳಿ ಅಥವಾ ನಿಗಮ ಸ್ಥಾಪನೆ ಕೇಂದ್ರದ ಆದ್ಯತಾ ಪಟ್ಟಿಯಲ್ಲಿ ಇಲ್ಲ ಎಂಬುದಾಗಿ ಕೇಂದ್ರ ಕೃಷಿ ಸಚಿವಾಲಯ ಈಗಾಗಲೇ ಸ್ಪಷ್ಟಪಡಿಸಿದೆಯಾದರೂ ನೂತನ ತಂತ್ರಜ್ಞಾನವನ್ನು ಬಳಸಿ ಕರ್ನಾಟಕದಲ್ಲಿ ಅಡಿಕೆ ಬೆಳೆಯುವ ಪ್ರದೇಶದ ವಿಸ್ತೀರ್ಣ ಹಾಗೂ ಉತ್ಪಾದನ ಪ್ರಮಾಣದ ನಿಖರ ಮಾಹಿತಿ ಸಂಗ್ರಹಿಸುವಂತೆ ರಾಜ್ಯ ಸರಕಾರಕ್ಕೆ ಕೇಂದ್ರ ತಿಳಿಸಿದೆ ಎನ್ನುವ ವರದಿಯೂ ಬೆಳೆಗಾರರ ಪಾಲಿಗೆ ಸಿಹಿ ಸುದ್ದಿಯೇ.

ಅಡಿಕೆ ಸಹಿತ ಎಲ್ಲ ವಾಣಿಜ್ಯ ಬೆಳೆಗಳ ಧಾರಣೆಯೂ ಅಸ್ಥಿರತೆ ಹೊಂದಿರುವುದು ಬೆಳೆಗಾರರನ್ನು ಇಕ್ಕಟ್ಟಿಗೆ ಸಿಲುಕಿಸುತ್ತಲೇ ಬಂದಿದೆ. ಇದರಿಂದಾಗಿ ಬೆಳೆಗಾರರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಎಂಬುದು ಇನ್ನು ಮರೀಚಿಕೆಯಾಗಿಯೇ ಉಳಿದಿದೆ. ಸದ್ಯ ಅಡಿಕೆ ಧಾರಣೆ ಏರುಗತಿಯಲ್ಲಿದ್ದರೂ ಮುಂದಿನ ದಿನಗಳಲ್ಲಿ ಇದೇ ಸ್ಥಿತಿಯಲ್ಲಿರಲಿದೆ ಎನ್ನಲಾಗದು. ಹೀಗಾಗಿ ಅಡಿಕೆ ಸಹಿತ ಎಲ್ಲ ವಾಣಿಜ್ಯ ಬೆಳೆಗಳ ಬೆಲೆಗಳು ಸ್ಥಿರತೆಯನ್ನು ಕಾಯ್ದುಕೊಳ್ಳುವಂತಾಗಲು ಸರಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕಿದೆ.

– ಬೆಳ್ಳಿಪ್ಪಾಡಿ ರಾಜೇಂದ್ರ ರೈ

ಟಾಪ್ ನ್ಯೂಸ್

SALMAN-KHAN

Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

231

BBK11: ಕ್ಯಾಪ್ಟನ್‌ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉದ್ಯೋಗ, ಅರ್ಹತೆ ಮತ್ತು ವೃತ್ತಿ ನಿಷ್ಠೆ

Employment: ಉದ್ಯೋಗ, ಅರ್ಹತೆ ಮತ್ತು ವೃತ್ತಿ ನಿಷ್ಠೆ

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

ಒತ್ತುವರಿ ತೆರವು ಎಂಬ ಜೇನುಗೂಡಿಗೆ ಕೈಹಾಕುವಾಗ…

India ಸೆಕ್ಯುಲರ್‌ ಸಿವಿಲ್‌ ಕೋಡ್‌-ನಾಡಿನ ನಾಡಿಮಿಡಿತದ ಕರೆ

India ಸೆಕ್ಯುಲರ್‌ ಸಿವಿಲ್‌ ಕೋಡ್‌-ನಾಡಿನ ನಾಡಿಮಿಡಿತದ ಕರೆ

Cinema Story:”ಇಂತಹ” ನೆಗೆಟಿವ್ ಕಥಾ ವಸ್ತುಗಳಿಲ್ಲದೇನೆ ಸಿನಿಮಾ ಬಾಕ್ಸಾಫೀಸ್ ತುಂಬ ಬಹುದೇ ?

Cinema Story:”ಇಂತಹ” ನೆಗೆಟಿವ್ ಕಥಾ ವಸ್ತುಗಳಿಲ್ಲದೇನೆ ಸಿನಿಮಾ ಬಾಕ್ಸಾಫೀಸ್ ತುಂಬ ಬಹುದೇ ?

ರಾಜ್ಯದಲ್ಲಿ ಇನ್ನೊಂದು ಪಕ್ಷದ ಸರ್ಕಾರವಿದ್ದಾಗ ಈ ರಾಜ್ಯಪಾಲರುಗಳು‎ ತುಂಬಾ ಆತಂತ್ರ ಸ್ಥಿತಿ

ಮುಡಾ: ಸಿದ್ದು ವಿರುದ್ಧ ರಾಜ್ಯಪಾಲರ prosecution ಅನುಮತಿ ಸಿಎಂ ಸ್ಥಾನಕ್ಕೆ ಮುಳುವಾಗಬಹುದೇ?

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

SALMAN-KHAN

Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

231

BBK11: ಕ್ಯಾಪ್ಟನ್‌ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.