Makar Sankranti 2024: ಈ ಬಾರಿ ಮಕರ ಸಂಕ್ರಾಂತಿ ಜನವರಿ 14 ಅಥವಾ 15ಕ್ಕಾ? ಇತಿಹಾಸವೇನು…

ಮಕರ ಸಂಕ್ರಾಂತಿ ಇತಿಹಾಸವೇನು...

Team Udayavani, Jan 9, 2024, 1:34 PM IST

Makar Sankranti 2024: ಈ ಬಾರಿ ಮಕರ ಸಂಕ್ರಾಂತಿ ಜನವರಿ 14 ಅಥವಾ 15ಕ್ಕಾ? ಇತಿಹಾಸವೇನು…

ಹಿಂದೂಗಳ ವರ್ಷದ ಮೊದಲ ಹಬ್ಬ ಮಕರ ಸಂಕ್ರಾಂತಿಗೆ ದಿನಗಣನೆ ಆರಂಭವಾಗಿದೆ. ಜನವರಿ ತಿಂಗಳ ಮಧ್ಯ ಭಾಗದಲ್ಲಿ ಬರಲಿರುವ ಮಕರ ಸಂಕ್ರಾಂತಿಯನ್ನು ದೇಶಾದ್ಯಂತ ಜನರು ಸಂಭ್ರಮದಿಂದ ಆಚರಿಸುತ್ತಾರೆ. ದೇಶದ ವಿವಿಧ ಭಾಗದಲ್ಲಿ ವಿವಿಧ ಹೆಸರುಗಳಿಂದ ಸಂಕ್ರಾಂತಿಯನ್ನು ಆಚರಿಸಲಾಗುತ್ತದೆ.

ಮಕರ ಸಂಕ್ರಾಂತಿ ಇತಿಹಾಸ:

ಹಿಂದೂ ಪಂಚಾಂಗದ ಪ್ರಕಾರ ಸಂಕ್ರಾಂತಿ ಹಬ್ಬವನ್ನು ಪ್ರತಿ ವರ್ಷ ಪುಷ್ಯ ಮಾಸದ ಶುಕ್ಲ ಪಕ್ಷದ ದ್ವಾದಶಿಯಂದು ಆಚರಿಸುತ್ತಾ ಬರಲಾಗಿದೆ. ಹಿಂದೂ ಶಾಸ್ತ್ರದ ಪ್ರಕಾರ ಸೂರ್ಯನು ನಿರ್ಯಾಣ ಮಕರರಾಶಿಯನ್ನು ಪ್ರವೇಶಿಸುವ ದಿನವೇ ಮಕರ ಸಂಕ್ರಾಂತಿ ಎನ್ನುತ್ತಾರೆ. ಬಹುತೇಕ ಪ್ರತಿವರ್ಷ ಜನವರಿ 14ರಂದೇ ಸಂಕ್ರಾಂತಿ ಹಬ್ಬವನ್ನು ಆಚರಿಸಲಾಗುತ್ತದೆ. ಸಂಕ್ರಾಂತಿ ಹಬ್ಬವನ್ನು ದೇಶದ ವಿವಿಧ ರಾಜ್ಯಗಳಲ್ಲಿ ಬೇರೆ, ಬೇರೆ ಹೆಸರುಗಳಲ್ಲಿ ಆಚರಿಸಲ್ಪಡುತ್ತದೆ. ತಮಿಳುನಾಡಿನಲ್ಲಿ ಮಕರ ಸಂಕ್ರಮಣವನ್ನು ಪೊಂಗಲ್‌ ಹೆಸರಿನಲ್ಲಿ ಆಚರಿಸಲಾಗುತ್ತಿದೆ. ಗುಜರಾತ್‌ ಮತ್ತು ರಾಜಸ್ಥಾನದಲ್ಲಿ ಮಕರ ಸಂಕ್ರಾಂತಿಯನ್ನು ಉತ್ತರಾಯಣ ಪುಣ್ಯ ಕಾಲ ಆರಂಭ ಎಂದೇ ಸಂಭ್ರಮಿಸಲಾಗುತ್ತದೆ. ಹರ್ಯಾಣ ಹಾಗೂ ಪಂಜಾಬ್‌ ನಲ್ಲಿ ಮಕರ ಸಂಕ್ರಾಂತಿಯನ್ನು ಮಾಘಿ ಎಂದು ಕರೆಯುತ್ತಾರೆ. ಇನ್ನುಳಿದಂತೆ ಗೋವಾ, ಆಂಧ್ರಪ್ರದೇಶ, ಪಶ್ಚಿಮಬಂಗಾಳ, ಕರ್ನಾಟಕ ಮತ್ತು ತೆಲಂಗಾಣದಲ್ಲಿ ಮಕರ ಸಂಕ್ರಾಂತಿ ಅಥವಾ ಪುಷ್ಯ ಸಂಕ್ರಾಂತಿ ಎಂದು ಕರೆಯುತ್ತಾರೆ.

ಕರ್ನಾಟಕದಲ್ಲಿ ಮನೆಗಳಲ್ಲಿ ಎಳ್ಳು-ಬೆಲ್ಲ ತಯಾರಿಸಿ ಸುತ್ತಮುತ್ತ ಹಂಚುವುದು ಸಂಪ್ರದಾಯ. ಎಳ್ಳಿನ ಜೊತೆಗೆ ಬೆಲ್ಲದ ಅಚ್ಚು, ಹಣ್ಣು, ಕಬ್ಬಿನ ತಂಡುಗಳನ್ನು ಕೊಡುತ್ತಾರೆ. ಹೆಣ್ಣು ಮಕ್ಕಳು ಹೊಸ ಬಟ್ಟೆ ಧರಿಸಿ ಎಳ್ಳು ಬೆಲ್ಲದೊಂದಿಗೆ ಸಂಬಂಧಿಕರನ್ನು ಭೇಟಿಯಾಗಿ ಎಳ್ಳುಬೆಲ್ಲ ವಿನಿಮಯ ಮಾಡಿಕೊಳ್ಳುತ್ತಾರೆ.

ಉತ್ತರಾಯಣ ಪುಣ್ಯಕಾಲ:

ಸಾಮಾನ್ಯವಾಗಿ ಪುಷ್ಯ ಮಾಸದಲ್ಲಿ ಬರುವ (ಜನವರಿ 14) ಮಕರ ಸಂಕ್ರಾಂತಿಯನ್ನು ಉತ್ತರಾಯಣ ಪುಣ್ಯಕಾಲವೆಂದು ಕರೆಯುತ್ತಾರೆ. ಕೇವಲ ಬದುಕುವುದಕ್ಕೆ ಮಾತ್ರವಲ್ಲ, ಈ ದಿನದಂದು ಕೊನೆಯುಸಿರೆಳದರೂ ಅವರಿಗೆ ಸ್ವರ್ಗ ಪ್ರಾಪ್ತಿ ಎಂಬ ನಂಬಿಕೆ ಇದೆ. ಅದಕ್ಕಾಗಿಯೇ ಮಹಾಭಾರತದಲ್ಲಿ ಭೀಷ್ಮ ದೇಹ ತ್ಯಜಿಸಲು ಉತ್ತರಾಯಣ ಕಾಲದವರೆಗೂ ಶರಶಯ್ಯೆಯಲ್ಲಿ ಹರಿಸ್ಮರಣೆ ಮಾಡುತ್ತ ಕಾದಿದ್ದರು ಎಂಬ ಉಲ್ಲೇಖವಿದೆ.

2024ರಲ್ಲಿ ಮಕರ ಸಂಕ್ರಾಂತಿ ಜನವರಿ 14 ಅಥವಾ 15ಕ್ಕಾ?

ಪ್ರತಿವರ್ಷ ಜನವರಿ 14ರಂದೇ ಸಂಕ್ರಾಂತಿ ಹಬ್ಬವನ್ನು ಆಚರಿಸಲಾಗುತ್ತದೆ. ಆದರೆ 2024 ಈ ಬಾರಿ ಅಧಿಕ ವರ್ಷವಾಗಿದೆ.(ಅಂದರೆ ಫೆಬ್ರವರಿ 29 ದಿನ). ಈ ಹಿನ್ನೆಲೆಯಲ್ಲಿ 2024ರ ಆಗಸ್ಟ್‌ 15ರಂದು ಮಕರ ಸಂಕ್ರಾಂತಿ ಆಚರಿಸಲಾಗುತ್ತಿದೆ.  ಜ್ಯೋತಿಷ್ಯಶಾಸ್ತ್ರದ ಪ್ರಕಾರ ಈ ವರ್ಷ ಜನವರಿ 15ರಂದು ಸೂರ್ಯ ದೇವನು ಧನು ರಾಶಿಯಿಂದ ಹೊರಬಂದು 2;54ಕ್ಕೆ ಮಕರ ರಾಶಿಯನ್ನು ಪ್ರವೇಶಿಸುತ್ತಾರೆ. ಆದ್ದರಿಂದ ಜನವರಿ 15ರಂದು ಮಕರ ಸಂಕ್ರಾಂತಿ ಆಚರಿಸಲಾಗುತ್ತದೆ.

ಮಕರ ಸಂಕ್ರಾಂತಿ ಶುಭ ಮುಹೂರ್ತ:

ಮಕರ ಸಂಕ್ರಾಂತಿ ದಿನ: ಜನವರಿ 15

ಮಕರ ಸಂಕ್ರಾಂತಿ ಪುಣ್ಯ ಕಾಲ: ಬೆಳಗ್ಗೆ 7-15ಕ್ಕೆ ಆರಂಭವಾಗಿ ಸಂಜೆ 5.46ಕ್ಕೆ ಕೊನೆಗೊಳ್ಳಲಿದೆ.

ಮಕರ ಸಂಕ್ರಾಂತಿ ಮಹಾ ಪುಣ್ಯಕಾಲ: ಬೆಳಗ್ಗೆ 7-15ರಿಂದ ಬೆಳಗ್ಗೆ 9ಗಂಟೆವರೆಗೆ.

ಟಾಪ್ ನ್ಯೂಸ್

Yaksha

Yakshagana ಆಯುಧ ವೇಷದ ಲಕ್ಷಣ ಸೂಚಕ; ಪರಾಮರ್ಶೆ ಇಂದಿನ ಅಗತ್ಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

Karwar: ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yaksha

Yakshagana ಆಯುಧ ವೇಷದ ಲಕ್ಷಣ ಸೂಚಕ; ಪರಾಮರ್ಶೆ ಇಂದಿನ ಅಗತ್ಯ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

Assembly Elections: ಕಾಶ್ಮೀರದಲ್ಲಿ ಪ್ರಾದೇಶಿಕ ಪಕ್ಷಗಳೇ ಕಿಂಗ್‌ಮೇಕರ್!

Assembly Elections: ಕಾಶ್ಮೀರದಲ್ಲಿ ಪ್ರಾದೇಶಿಕ ಪಕ್ಷಗಳೇ ಕಿಂಗ್‌ಮೇಕರ್!

ಬಿಜೆಪಿಗೆ ಇಡೀ ರಾಜ್ಯವೇ ಒಪ್ಪಿಕೊಳ್ಳುವಂಥ ಸರ್ವಸ್ಪರ್ಶಿ ನಾಯಕತ್ವ ಇನ್ನಷ್ಟೇ ಸಿಗಬೇಕಿದೆ

ಬಿಜೆಪಿಗೆ ಇಡೀ ರಾಜ್ಯವೇ ಒಪ್ಪಿಕೊಳ್ಳುವಂಥ ಸರ್ವಸ್ಪರ್ಶಿ ನಾಯಕತ್ವ ಇನ್ನಷ್ಟೇ ಸಿಗಬೇಕಿದೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Yaksha

Yakshagana ಆಯುಧ ವೇಷದ ಲಕ್ಷಣ ಸೂಚಕ; ಪರಾಮರ್ಶೆ ಇಂದಿನ ಅಗತ್ಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

1-kashmir-msulim-IAS

Kashmir; ಮೊದಲ ಮುಸ್ಲಿಂ ಐಎಎಸ್‌ ಅಧಿಕಾರಿ ನಿಧನ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

1-tWWW

Tupperware ಲಂಚ್‌ ಬಾಕ್ಸ್‌ ದಿವಾಳಿ: ಅಮೆರಿಕದ ಕಂಪೆನಿ ಘೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.