ಮಲೇಷಿಯಾ ಮರಳು ಯೋಜನೆ ವಿಫಲ, ಈ ಮರಳಿಗೆ ಬೇಡಿಕೆಯೇ ಇಲ್ಲ: ಸಚಿವ ಶೆಟ್ಟರ್
Team Udayavani, Dec 21, 2019, 10:03 PM IST
ಬೆಂಗಳೂರು: “ಮಲೇಷ್ಯಾದಿಂದ ಬಂದಿರುವ ಮರಳಿಗೆ ಬೇಡಿಕೆಯೇ ಇಲ್ಲ. ಎಷ್ಟು ಆಮದಾಗಿದೆ, ಎಷ್ಟು ಮಾರಾಟವಾಗಿದೆ. ಇದರಿಂದ ಆಗಿರುವ ನಷ್ಟವೆಷ್ಟು ಎಂಬ ಬಗ್ಗೆ ಯಾವುದೇ ಮಾಹಿತಿ ಇಲ್ಲ…’
ಇದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅವರು ನೀಡಿರುವ ಮಾಹಿತಿ. ಹಿಂದಿನ ಕಾಂಗ್ರೆಸ್ ಸರಕಾರ, ರಾಜ್ಯದಲ್ಲಿನ ಮರಳು ಸಮಸ್ಯೆ ನಿವಾರಿಸುವ ನಿಟ್ಟಿನಲ್ಲಿ ಮಲೇಷ್ಯಾದಿಂದ ಮರಳು ಆಮದು ಮಾಡಿಕೊಳ್ಳಲು ನಿರ್ಧರಿಸಿತ್ತು. ಅದರಂತೆ ರಾಜ್ಯದ ಕರಾವಳಿ ಸಹಿತ ವಿವಿಧೆಡೆಗಳಿಗೆ ಮರಳೂ ಬಂದಿತ್ತು. ಇದನ್ನು ಎಂಎಸ್‌ಐಎಲ್ ಮೂಲಕ ಮಾರಾಟ ಮಾಡಲು ತೀರ್ಮಾನಿಸಲಾಗಿತ್ತು. ಆದರೆ ಈ ಮರಳಿಗೆ ಯಾವುದೇ ರೀತಿಯಲ್ಲೂ ಬೇಡಿಕೆ ಬಂದಿಲ್ಲ ಎಂದಿರುವ ಶೆಟ್ಟರ್ ಅವರು, ಈ ಯೋಜನೆ ವಿಫಲವಾಗಿದೆ ಎಂದು ತಿಳಿಸಿದ್ದಾರೆ.
ಗ್ರಾಮೀಣಾಭಿವೃದ್ಧಿ, ನಗರಾಭಿವೃದ್ಧಿ ಹಾಗೂ ಕೈಗಾರಿಕೆ ಇಲಾಖೆ ಅಧಿಕಾರಿಗಳ ಜತೆ ಸಭೆ ನಡೆಸಿದ ಅನಂತರ ಖನಿಜ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದಿನ ಸರಕಾರ ಎಂಎಸ್‌ಐಎಲ್ ಮೂಲಕ ಮಲೇಷ್ಯಾದಿಂದ ಮರಳು ತರಿಸಿತ್ತು. ಆದರೆ ಆ ಮರಳಿಗೆ ಬೇಡಿಕೆಯೇ ಬರುತ್ತಿಲ್ಲ. ಇದಷ್ಟೇ ಅಲ್ಲ, ವಿದೇಶದಿಂದ ಯಾವ ಪ್ರಮಾಣದಲ್ಲಿ ಆಮದು ಆಗಿದೆ? ಎಷ್ಟು ಮಾರಾಟ ಆಗಿದೆ? ನಷ್ಟ ಎಷ್ಟು ಎಂಬುದರ ಸರಿಯಾದ ಮಾಹಿತಿಯೂ ಇಲ್ಲ ಎಂದು ತಿಳಿಸಿದರು.
ಮರಳು ಸುಲಭವಾಗಿ ಸಿಗುವಂತಾಗಲು ಹೊಸ ವ್ಯವಸ್ಥೆ ಮಾಡಲಾಗುತ್ತಿದೆ. ಈ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರೂ ಚಿಂತನೆ ನಡೆಸಿದ್ದು ಇದಕ್ಕಾಗಿ ಒಂದು ಸಮಿತಿ ರಚಿಸಲಾಗಿದೆ ಎಂದು ಹೇಳಿದರು.
ವಿದೇಶೀ ಮರಳು ಆಮದಿಲ್ಲ
ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಗಣಿ ಮತ್ತು ಭೂ ವಿಜ್ಞಾನ ಸಚಿವ ಸಿ.ಸಿ.ಪಾಟೀಲ್, ಮಲೇಷ್ಯಾದಿಂದ ಬಂದಿರುವ ಮರಳು ಕುರಿತಾಗಿ ಮುಖ್ಯಮಂತ್ರಿಗಳ ಜತೆ ಚರ್ಚೆ ನಡೆಸಲಿದ್ದೇನೆ. ವಿದೇಶೀà ಮರಳು ಆಮದು ಮಾಡಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿಗಳು ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಆದ್ದರಿಂದ ಅತೀ ಶೀಘ್ರದಲ್ಲಿ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಒಂದು ಸಭೆ ನಡೆಸಿ ಈಗಾಗಲೇ ಬಂದಿರುವ ವಿದೇಶೀ ಮರಳು ಕುರಿತು ಯಾವ ನಿರ್ಧಾರ ತೆಗೆದುಕೊಳ್ಳಬೇಕು ಎಂಬುದನ್ನು ತೀರ್ಮಾನಿಸಲಿದ್ದೇವೆ ಎಂದು ಹೇಳಿದರು.
ಕರಾವಳಿ ಮರಳಿನ ಸಮಸ್ಯೆಗೆ ಪರಿಹಾರ
ಕರಾವಳಿ ಭಾಗದ ಮರಳಿನ ಸಮಸ್ಯೆಯ ಬಗ್ಗೆ ಮಾಹಿತಿಯಿದ್ದು, ನೀತಿಯನ್ನು ಸರಳೀಕರಿಸುವ ಮೂಲಕ ಸಮಸ್ಯೆಗೆ ಜ.15ರೊಳಗೆ ಪರಿಹಾರ ನೀಡಲಿದ್ದೇವೆ ಎಂದು ಅವರು ತಿಳಿಸಿದರು.
ಕರಾವಳಿ ಜಿಲ್ಲೆಗಳ ಮರಳಿನ ಸಮಸ್ಯೆಗೆ ಸಂಬಂಧಿಸಿದಂತೆ ಅಧಿಕಾರಿಗಳು, ಸ್ಥಳೀಯ ಜನ ಪ್ರತಿನಿಧಿಗಳ ಜತೆ ನಿರಂತರ ಸಭೆ ನಡೆಸಿದ್ದೇನೆ. ಹಾಗೆಯೇ ಗುಜರಾತ್ ಮಾದರಿಯ ಅಧ್ಯಯನಕ್ಕಾಗಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಪ್ರವಾಸ ಹೋಗಿ ಬಂದಿದ್ದಾರೆ. ಆ ಭಾಗದ ಜನ ಸಾಮಾನ್ಯರಿಗೆ ಅನುಕೂಲ ಆಗುವಂತೆ ಯಾವ ರೀತಿ ನೀತಿಯನ್ನು ಸರಳೀಕರಿಸಬಹುದು ಎಂಬುದನ್ನು ಜ.15ರೊಳಗೆ ತೀರ್ಮಾನಿಸಲಿದ್ದೇವೆ ಎಂದು ಹೇಳಿದರು.
ಕರಾವಳಿ ಭಾಗದ ನಾನ್ ಸಿಆರ್‌ಝಡ್ ವ್ಯಾಪ್ತಿಯಲ್ಲಿ ಯಾವುದೇ ಸಮಸ್ಯೆಯಿಲ್ಲ. ಸಿಆರ್‌ಝಡ್ ವ್ಯಾಪ್ತಿಯಲ್ಲಿ ಸ್ವಲ್ಪ ಸಮಸ್ಯೆಯಾಗಲಿದೆ. ಅದನ್ನು ಸರಿಪಡಿಸಲಿದ್ದೇವೆ. ಕರಾವಳಿ ಹೊರತುಪಡಿಸಿ ಬೇರೆ ಪ್ರದೇಶಗಳಲ್ಲಿ 5 ಎಕರೆ ಜಾಗ ಮರಳು ತೆಗೆಯಲು ಸಿಗುತ್ತದೆ. ಕರಾವಳಿಯಲ್ಲಿ ಐದು ಎಕರೆ ಕಷ್ಟ 1 ಎಕರೆ ಸಿಗುತ್ತಿದೆ, ಇದನ್ನು ಅರ್ಧ ಎಕರೆಗೆ ಇಳಿಸಬೇಕು ಎಂಬ ಅಲ್ಲಿನ ಜನರ ಮುಖ್ಯ ಬೇಡಿಕೆಯನ್ನು ಈಡೇರಿಸಿದ್ದೇವೆ. ಅರ್ಧ ಎಕರೆಗೆ ಇಳಿಸಲು ಸರಕಾರ ನಿರ್ಧಾರ ತೆಗೆದುಕೊಂಡಿದೆ ಎಂದು ಹೇಳಿದರು.
ಈ ತಿಂಗಳ ಅಂತ್ಯ ಅಥವಾ ಮುಂದಿನ ತಿಂಗಳ ಮೊದಲ ವಾರದಲ್ಲಿ ಕರಾವಳಿ ಜಿಲ್ಲೆಗಳಿಗೆ ಪ್ರವಾಸ ಮಾಡಲಿದ್ದೇನೆ. ಪ್ರಗತಿ ಪರಿಶೀಲನ ಸಭೆ ನಡೆಸಲಿದ್ದೇನೆ. ಅಲ್ಲಿ ಬಹುತೇಕ ಸಮಸ್ಯೆಗೆ ಪರಿಹಾರ ಸಿಗಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್‌ಗೆ ಬಿಸಿ ಊಟ: ಪರಂಗೆ ಹೈ ಬುಲಾವ್?ವಿವಾದ ಬೆನ್ನಲ್ಲೇ ದಿಲ್ಲಿಗೆ ಕರೆದ ಹೈಕಮಾಂಡ್
Naxal: ಶರಣಾಗತಿ ಎಂದರೆ ದ್ರೋಹ: ನಕ್ಸಲ್ ವಿಕ್ರಂ ಗೌಡ ಆಡಿಯೋ!
CID; ಶಾಸಕ ಸಿ.ಟಿ. ರವಿ ಬೆಳಗಾವಿ ದೌರ್ಜನ್ಯ ವಿವರಣೆ
Karnataka Govt.: ಅನರ್ಹ “ಬಿಪಿಎಲ್’ ಕತ್ತರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
ಗುತ್ತಿಗೆಯಡಿ ತುರ್ತು ಚಿಕಿತ್ಸಾ ವೈದ್ಯರ ನೇಮಕಕ್ಕೆ ಆರೋಗ್ಯ ಇಲಾಖೆ ಸೂಚನೆ
MUST WATCH
ಹೊಸ ಸೇರ್ಪಡೆ
Bantwal: ಕಾಂಟ್ರಾಕ್ಟ್ ಕ್ಯಾರೇಜ್ ಬಸ್ ಪ್ರಯಾಣ ದರ ಏರಿಕೆ
Special Train ಮಕರ ಸಂಕ್ರಾಂತಿ: ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು
Daily Horoscope: ಅನಿರೀಕ್ಷಿತ ಧನಾಗಮ, ಅವಿವಾಹಿತರಿಗೆ ಯೋಗ್ಯ ಸಂಗಾತಿ ಲಭ್ಯ
ಕಾಂಗ್ರೆಸ್‌ಗೆ ಬಿಸಿ ಊಟ: ಪರಂಗೆ ಹೈ ಬುಲಾವ್?ವಿವಾದ ಬೆನ್ನಲ್ಲೇ ದಿಲ್ಲಿಗೆ ಕರೆದ ಹೈಕಮಾಂಡ್
California Wildfire: “ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.