ಮಾದಪ್ಪನ ಹುಂಡಿಯಲ್ಲಿ ದಾಖಲೆಯ ನಗದು, 28 ದಿನಗಳಲ್ಲಿ 2.83 ಕೋಟಿ ನಗದು ಸಂಗ್ರಹ
Team Udayavani, Mar 12, 2022, 7:04 PM IST
ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಎಣಿಕೆ ಪ್ರಕ್ರಿಯೆಯು ಜರುಗಿದ್ದು ಕಳೆದ 28 ದಿನಗಳಲ್ಲಿ ಸಾರ್ವಕಾಲೀಕ ದಾಖಲೆಯ 2.83 ಕೋಟಿ ನಗದು, 73ಗ್ರಾಂ ಚಿನ್ನ ಮತ್ತು 3.8ಕೆ.ಜಿ ಬೆಳ್ಳಿ ಸಂಗ್ರಹವಾಗಿದೆ.
ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಖಾಸಗಿ ಬಸ್ ನಿಲ್ದಾಣ ಸಮೀಪದ ವಾಣಿಜ್ಯ ಸಂಕೀರ್ಣದಲ್ಲಿ ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ಪ್ರಾರಂಭವಾದ ಹುಂಡಿ ಎಣಿಕೆಯು ತಡರಾತ್ರಿ 12 ಗಂಟೆಯವರೆಗೂ ಜರುಗಿತು. ಈ ಬಾರಿ ಕಳೆದ 28 ದಿನಗಳ ಅವಧಿಯಲ್ಲಿ ಮಲೆ ಮಾದಪ್ಪನ ಹುಂಡಿಯಲ್ಲಿ 2,83, 12,841(ಎರಡು ಕೋಟಿ ಎಂಭತ್ತಮೂರು ಲಕ್ಷದ ಹನ್ನೆರೆಡು ಸಾವಿರದ ಎಂಟುನೂರ ನಲವತ್ತೊಂದು)ರೂ ನಗದು, 73 ಗ್ರಾಂ ಚಿನ್ನದ ಪದಾರ್ಥಗಳು ಮತ್ತು 3.8 ಕೆ,ಜಿ ಬೆಳ್ಳಿಯ ಪದಾರ್ಥಗಳು ಸಂಗ್ರಹವಾಗಿವೆ. ಈ ಬಾರಿ ಕಳೆದ 28 ದಿನಗಳ ಅವಧಿಯಲ್ಲಿ ಸಂಗ್ರಹವಾಗಿರುವ ಮೊತ್ತವು ಸಾರ್ವಕಾಲೀಕ ದಾಖಲೆಯ ಮೊತ್ತವಾಗಿದೆ.
ಹುಂಡಿ ಎಣಿಕೆ ಪ್ರಕ್ರಿಯೆಯು ಸಾಲೂರು ಬೃಹನ್ಮಠದ ಶಾಚಿತಮಲ್ಲಿಕಾರ್ಜುನ ಶ್ರೀಗಳ ದಿವ್ಯಸಾನಿಧ್ಯದಲ್ಲಿ ಮಲೆ ಮಹದೇಶ್ವರ ಸ್ವಾಮಿ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಜಯವಿಭವಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಜರುಗಿತು. ಹುಂಡಿ ಎಣಿಕೆ ಪ್ರಕ್ರಿಯೆಯಲ್ಲಿ ಪ್ರಾಧಿಕಾರದ ಅಧಿಕಾರಿ ಮತ್ತು ಸಿಬ್ಬಂದಿ, ಮಹದೇಶ್ವರ ಬೆಟ್ಟ ಎಸ್‍ಬಿಐ ಬ್ಯಾಂಕಿನ ಶಾಖೆಯ ವ್ಯವಸ್ತಾಪಕರು ಮತ್ತು ಸಿಬ್ಬಂದಿ ಹಾಜರಿದ್ದರು. ಹುಂಡಿ ಎಣಿಕೆ ಪ್ರಕ್ರಿಯೆಯು ಸಿಸಿಕ್ಯಾಮರ ಕಣ್ಗಾವಲಿನಲ್ಲಿ ಜರುಗಿತು. ಮಲೆ ಮಹದೇಶ್ವರ ಬೆಟ್ಟ ಪೊಲೀಸರು ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಿದ್ದರು.
ಇದನ್ನೂ ಓದಿ : ನಾನಿಲ್ಲಿಗೆ ಬರದೇ ಇದ್ರೆ ಸತ್ತು 8 ವರ್ಷ ಆಗಬೇಕಾಗಿತ್ತು
ಹೆಚ್ಚಿನ ಭಕ್ತಾದಿಗಳು ಭೇಟಿ: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಕಳೆದ 28 ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಭೇಟಿ ನೀಡಿದ್ದರು. ಮಹಾಶಿವರಾತ್ರಿ ಜಾತ್ರಾ ಸಂದರ್ಭದಲ್ಲಿ ರಾಜ್ಯದ ರಾಮನಗರ, ಚನ್ನಪಟ್ಟಣ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಭಾಗಗಳಿಂದ ಹೆಚ್ಚಿನ ಭಕ್ತಾದಿಗಳು ಪಾದಯಾತ್ರೆಯಲ್ಲಿ ಹಾಗೂ ನೆರೆಯ ತಮಿಳುನಾಡು ಆಂಧ್ರಪ್ರದೇಶ ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಲಕ್ಷಾಂತರ ಭಕ್ತಾದಿಗಳು ಆಗಮಿಸಿದ್ದರು. ಅಲ್ಲದೆ ಕಳೆದ 2 ವರ್ಷಗಳಿಂದ ಕೋವಿಡ್ ನಿಯಮಾವಳಿಗಳಿಂದ ಜಾತ್ರಾ ಸಂದರ್ಭಗಳಲ್ಲಿ ಹಲವು ನಿರ್ಬಂಧಗಳನ್ನು ವಿಧಿಸಲಾಗುತಿತ್ತು. ಆದರೆ ಈ ಬಾರಿ ಎಲ್ಲಾ ನಿರ್ಬಂಧಗಳಿಂದ ವಿನಾಯಿತಿ ನೀಡಿದ್ದ ಹಿನ್ನೆಲೆ ಶಿವರಾತ್ರಿ ಸಂದರ್ಭದ ಆಸುಪಾಸಿನ ಒಂದು ವಾರದಲ್ಲಿ 10ಲಕ್ಷಕ್ಕೂ ಹೆಚ್ಚಿನ ಭಕ್ತಾದಿಗಳು ಆಗಮಿಸಿದ್ದರು. ಅಲ್ಲದೆ ವಾರಾಂತ್ಯ, ಸರ್ಕಾರಿ ರಜಾ ಸಂದರ್ಭದಲ್ಲಿಯೂ ಹೆಚ್ಚಿನ ಭಕ್ತಾದಿಗಳು ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿದ್ದರು.
– ವಿನೋದ್ ಎನ್ ಗೌಡ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಜಮೀರ್ ವಿರುದ್ಧ ಕೈಕಮಾಂಡ್‌ಗೆ 20ಕ್ಕೂ ಹೆಚ್ಚು ಶಾಸಕರಿಂದ ದೂರು
Belagavi: ಎಸ್‌ಡಿಎ ಆತ್ಮಹ*ತ್ಯೆ: ಸಚಿವೆ ಹೆಬ್ಬಾಳ್ಕರ್ ರಾಜೀನಾಮೆಗೆ ಬಿಜೆಪಿ ಪಟ್ಟು
Congress Government: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಮುಹೂರ್ತ ನಿಗದಿ: ವಿಜಯೇಂದ್ರ
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
MUST WATCH
ಹೊಸ ಸೇರ್ಪಡೆ
Jharkhand; ಇಂಡಿಯಾ ಒಕ್ಕೂಟದ “ಸಪ್ತ ಗ್ಯಾರಂಟಿ’!: ಮಹಿಳೆಯರಿಗೆ ಮಾಸಿಕ 2,500 ರೂ.
T-Shirt: ಫ್ಲಿಪ್‌ಕಾರ್ಟ್, ಮೀಶೋದಲ್ಲಿ ಲಾರೆನ್ಸ್ ಬಿಷ್ಣೋಯ್ ಟೀಶರ್ಟ್ ಮಾರಾಟ: ಆಕ್ರೋಶ
Daily Horoscope; ಇಷ್ಟಾರ್ಥ ಸಿದ್ಧಿಯ ದಿನ..ಉದ್ಯೋಗ ಸ್ಥಾನದಲ್ಲಿ ಸದ್ಯಕ್ಕೆ ನಿಶ್ಚಿಂತೆ
Milk: ಕರ್ನಾಟಕ ಗಡಿಯ ಹಾಲು ಕೇರಳ ಪಾಲು! ಖರೀದಿ ದರ ಇಲ್ಲಿಗಿಂತ ಕೇರಳದಲ್ಲೇ ಅಧಿಕ
Congress: ಜಮೀರ್ ವಿರುದ್ಧ ಕೈಕಮಾಂಡ್‌ಗೆ 20ಕ್ಕೂ ಹೆಚ್ಚು ಶಾಸಕರಿಂದ ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.