Malpe ನರ ಸಂಬಂಧಿ ಕಾಯಿಲೆ; ಬಾಲಕಿ ಸಾವು
Team Udayavani, Sep 28, 2023, 12:44 AM IST
ಮಲ್ಪೆ: ಮಲ್ಪೆ ಕೊಡವೂರು ಬಳಿಯ ದಾಮೋದರ್ ಅವರ ಪುತ್ರಿ ಅಂಗ್ಲಮಾಧ್ಯಮ ಶಾಲೆಯ 5ನೇ ತರಗತಿ ವಿದ್ಯಾರ್ಥಿನಿ ದೃಶ್ಯ (12) ನರ ಸಂಬಂಧಿ ಕಾಯಿಲೆಗೆ ಒಳಗಾಗಿ ಸಾವನ್ನಪ್ಪಿದ್ದಾರೆ.
ಮಂಗಳವಾರ ರಾತ್ರಿ ಔಷಧ ಸೇವಿಸಿ ಮಲಗಿದ್ದ ಬಾಲಕಿ ಬೆಳಗ್ಗೆ ಮಾತನಾಡದ ಸ್ಥಿತಿಯಲ್ಲಿದ್ದರು. ತತ್ಕ್ಷಣ ಉಡುಪಿಯ ಖಾಸಗಿ ಅಸ್ಪತ್ರೆಗೆ ದಾಖಲಿಸಲಾಗಿದ್ದು ಅಲ್ಲಿ ಪರೀಕ್ಷಿಸಿದ ವೈದ್ಯರು ಅದಾಗಲೇ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೈಕ್-ಸ್ಕೂಟರ್ ಢಿಕ್ಕಿ; ಗಾಯ
ಕುಂದಾಪುರ: ಕಂದಾವರ ಗ್ರಾಮದ ಕಾಡಿನಕೊಂಡ ಬಳಿ ಬೈಕ್-ಸ್ಕೂಟರ್ ಢಿಕ್ಕಿಯಾಗಿ ವ್ಯಕ್ತಿಯೊಬ್ಬರು ಗಾಯಗೊಂಡಿದ್ದಾರೆ.ಸುಮೇಶ ಗೋಪಿ ಅವರು ಸ್ಕೂಟರಿನಲ್ಲಿ ರಿûಾವನ್ನು ಹಿಂದಿಕ್ಕಿ ಮುಂದಕ್ಕೆ ಹೋಗುವ ಭರದಲ್ಲಿ ವಿದ್ಯಾಧರ (56) ಅವರ ಬೈಕಿಗೆ ಢಿಕ್ಕಿಯಾಗಿದೆ. ಗಾಯಾಳು ವಿದ್ಯಾಧರ ಕುಂದಾಪುರ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಗಾಂಜಾ ಸೇವನೆ: ಯುವಕ ವಶಕ್ಕೆ
ಮಂಗಳೂರು: ಗಾಂಜಾ ಸೇವನೆ ಮಾಡಿದ ಆರೋಪದಲ್ಲಿ ಯೆಯ್ನಾಡಿಯ ಪ್ರತ್ಯಕ್ಷ (26)ನನ್ನು ಸೆ. 27ರಂದು ಬೆಳಗ್ಗೆ 11.30ಕ್ಕೆ ಲೇಡಿಹಿಲ್ ಬಳಿ ಬರ್ಕೆ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ
Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ
National Badminton: ರೋಣಕ್ ಚೌಹಾಣ್ ಸೆಮಿಗೆ
Champions Trophy: ದುಬಾೖಯಲ್ಲಿ ಭಾರತದ ಪಂದ್ಯಗಳು: ನಾಕೌಟ್ ಹಂತಕ್ಕೇರಿದರೆ?
H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.