Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!
ಮಂಡ್ಯದಲ್ಲಿ ಪೊಲೀಸರ ಭದ್ರತೆಯೊಂದಿಗೆ ದೇಗುಲ ಪ್ರವೇಶ
Team Udayavani, Nov 11, 2024, 7:15 AM IST
ಮಂಡ್ಯ: ಸವರ್ಣೀಯರ ವಿರೋಧದ ನಡುವೆಯೂ ಮುಜರಾಯಿ ಇಲಾಖೆಗೆ ಸೇರಿದ ಶ್ರೀ ಕಾಲಭೈರವೇಶ್ವರ ಸ್ವಾಮಿ ದೇವಾಲಯಕ್ಕೆ ದಲಿತರು ಪ್ರವೇಶ ಮಾಡಿದ ಪರಿ ಣಾಮ ಆಕ್ರೋಶಗೊಂಡ ಕೆಲವು ಸವರ್ಣೀಯರು, ದೇವಸ್ಥಾನಕ್ಕೆ ನುಗ್ಗಿ ಉತ್ಸವಮೂರ್ತಿ ಯನ್ನು ಹೊತ್ತೂಯ್ದ ಘಟನೆ ತಾಲೂಕಿನ ಹನಕೆರೆ ಗ್ರಾಮದಲ್ಲಿ ರವಿವಾರ ನಡೆದಿದೆ.
ಈ ದೇಗುಲದಲ್ಲಿ ದಲಿತರ ಪ್ರವೇಶಕ್ಕೆ ಹಿಂದಿ ನಿಂದಲೂ ನಿರ್ಬಂಧ ಹೇರಲಾಗಿದೆ ಎಂದು ಹೇಳಲಾಗುತ್ತಿದೆ. ಆದರೆ ಕೆಲವು ವರ್ಷಗಳಿಂದ ದಲಿತರು ಸಹ ಪ್ರವೇಶಿಸಿ ಪೂಜೆ ಸಲ್ಲಿಸುತ್ತಿದ್ದರು. ಆದರೆ ಇತ್ತೀಚೆಗೆ ಅವರು ದೇಗುಲ ಪ್ರವೇಶಿಸದಂತೆ ಪಟ್ಟು ಹಿಡಿದಿದ್ದರು. ಆದರೆ ಕೆಲ ಸವರ್ಣೀಯರು ದಲಿತರ ದೇವಾಲಯ ಪ್ರವೇಶಕ್ಕೆ ಒಪ್ಪಿರಲಿಲ್ಲ. ಇದರಿಂದ 2 ಬಾರಿ ಮಾಜಿ ಶಾಸಕ ಎಂ. ಶ್ರೀನಿವಾಸ್ ಹಾಗೂ ತಾಲೂಕು ಅಧಿಕಾರಿಗಳಿಂದ ಶಾಂತಿ ಸಭೆ ನಡೆದಿತ್ತು.
ಸಭೆಯಲ್ಲಿಯೂ ಸವರ್ಣೀಯರು ಒಪ್ಪಿಗೆ ಸೂಚಿಸದ್ದರಿಂದ ವಿವಾದ ಮುಂದುವರಿದಿತ್ತು. ಆದರೆ, ಭಾನುವಾರ ಪೊಲೀಸರ ಭದ್ರತೆಯೊಂದಿಗೆ ದಲಿತರು ದೇವಾಲಯ ಪ್ರವೇಶಿಸಿ ಪೂಜೆ ಸಲ್ಲಿಸಿದ್ದರು. ಈ ವೇಳೆ ಸವರ್ಣೀಯರ ಮನವೊಲಿಸಲು ಮಾಜಿ ಶಾಸಕ ಎಂ. ಶ್ರೀನಿವಾಸ್, ಅಧಿಕಾರಿಗಳು, ಪೊಲೀಸರು ಮುಂದಾದರೂ ಸಫಲವಾಗಲಿಲ್ಲ.
ದಲಿತರ ಪ್ರವೇಶದಿಂದ ಸವರ್ಣೀಯರು ಅಸಮಾಧಾನ ವ್ಯಕ್ತಪಡಿಸಿ, ಉತ್ಸವ ಮೂರ್ತಿ ಯನ್ನು ಹೊತ್ತೂಯ್ದು ನಾವು ದೇವರ ಪೂಜೆ ಮಾಡುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾಡಳಿತ ಹಾಗೂ ಮುಜರಾಯಿ ಇಲಾಖೆ ಉತ್ಸವ ಮೂರ್ತಿ ಯನ್ನು ಕೊಠಡಿಯಿಂದ ಮತ್ತೆ ದೇವಾ ಲಯಕ್ಕೆ ತಂದು ಇರಿಸುವ ಮೂಲಕ ಪರಿಸ್ಥಿತಿ ತಿಳಿಗೊಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?
Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ
Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ
H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BBK11: ನಡುರಾತ್ರಿ ದೇವರ ಮುಂದೆ ಒಂಟಿಯಾಗಿ ಕೂತು ಪ್ರಾರ್ಥಿಸಿದ ಚೈತ್ರಾ.!
Ex-US President: ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು
Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್ ಪ್ರತಾಪ್ ಜಾಮೀನು ಮಂಜೂರು
Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!
Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.