ಮಂಗಳೂರು-ಬೆಂಗಳೂರು ರೈಲು ಮಾರ್ಗ: ವಿದ್ಯುದೀಕರಣ 2024ರಲ್ಲಿ ಪೂರ್ಣ: ಸಂಸದ ನಳಿನ್
Team Udayavani, Feb 26, 2022, 6:05 AM IST
ಪುತ್ತೂರು: ಮಂಗಳೂರು-ಬೆಂಗಳೂರು ರೈಲು ಮಾರ್ಗ ವಿದ್ಯುದೀಕರಣ ಕಾಮಗಾರಿ 2024ರಲ್ಲಿ ಪೂರ್ಣಗೊಳ್ಳಲಿದೆ ಎಂದು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲು ಹೇಳಿದರು.
ಪುತ್ತೂರು ಎಪಿಎಂಸಿ ರಸ್ತೆಯ ರೈಲು ಮಾರ್ಗದಲ್ಲಿ ಅಂಡರ್ಪಾಸ್ ನಿರ್ಮಾಣದ ಬಗ್ಗೆ ರೈಲ್ವೇ ಅಧಿಕಾರಿಗಳ ಜತೆ ಸಭೆ ನಡೆಸಿದ ಬಳಿಕ ಪತ್ರಕರ್ತರ ಜತೆ ಮಾತನಾಡಿದ ಅವರು, ಕಾಣಿಯೂರು, ಎಡಮಂಗಲ ರೈಲು ನಿಲ್ದಾಣ ಮೇಲ್ದರ್ಜೆ, ಪುತ್ತೂರು ವಿವೇಕಾನಂದ ಕಾಲೇಜು ಸಂಪರ್ಕ ರಸ್ತೆಯಲ್ಲಿನ ರೈಲ್ವೇ ಸೇತುವೆ ವಿಸ್ತರಣೆ ಮೊದಲಾದ ಕಾಮಗಾರಿಗಳ ಪ್ರಸ್ತಾವನೆ ಸಲ್ಲಿಸಲಾಗಿದ್ದು ಶೀಘ್ರ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಶಿರಾಡಿಯಲ್ಲಿ ಸುರಂಗ ಯೋಜನೆ: ವೆಚ್ಚ ಅಧಿಕ
ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟಿ ರಸ್ತೆಯಲ್ಲಿ 23.6 ಕಿ.ಮೀ. ಉದ್ದದ ಮೆಗಾ ಸುರಂಗ ನಿರ್ಮಾಣಕ್ಕೆ 10 ಸಾವಿರ ಕೋ.ರೂ. ವೆಚ್ಚದಲ್ಲಿ ಡಿಪಿಆರ್ ತಯಾರಿಸಲಾಗಿದೆ. ಮಣ್ಣಿನ ಗುಣಮಟ್ಟ ಪರಿಶೀಲಿಸಲಾಗಿದ್ದು ಕೆಲವೆಡೆ ಮಣ್ಣು ಸಡಿಲಿಕೆ ಕಂಡು ಬಂದಿದೆ. ಹೀಗಾಗಿ ಕಾಮಗಾರಿ ವೆಚ್ಚ ಅಧಿಕವಾಗಲಿದೆ. ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಫೆ. 28ರಂದು ಮಂಗಳೂರಿಗೆ ಬರಲಿದ್ದು ಕಾಮಗಾರಿ ಬಗ್ಗೆ ಮಾಹಿತಿ ನೀಡಲಿದ್ದಾರೆ. ಜಿಲ್ಲೆಯಲ್ಲಿನ ವಿವಿಧ ಕಾಮಗಾರಿಗಳ ಉದ್ಘಾಟನೆ, ಶಿಲಾನ್ಯಾಸ ನೆರವೇರಿಸಲಿದ್ದಾರೆ ಎಂದು ಸಂಸದ ನಳಿನ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.