Mangaluru: ಪಬ್ಜಿ ಆಟದ ಅಭ್ಯಾಸವಿದ್ದ ಯುವತಿ ನಾಪತ್ತೆ
Team Udayavani, Jul 31, 2024, 10:52 PM IST
ಮಂಗಳೂರು: ಮೊಬೈಲ್ನಲ್ಲಿ ಪಬ್ಜಿ ಆನ್ಲೈನ್ ಆಟವಾಡುವ ಹವ್ಯಾಸವಿದ್ದ ನಗರದ ಬಿಜೈಯ ಯುವತಿಯೋರ್ವಳು ನಾಪತ್ತೆಯಾಗಿರುವ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದೆ.
ಕೆಲಿಸ್ತಾ ಫೆರಾವೊ (18) ನಾಪತ್ತೆಯಾದವರು. ಎಸೆಸೆಲ್ಸಿ ಬಳಿಕ ಆಟೊಮೊಬೈಲ್ ಕೋರ್ಸ್ಗೆ ಸೇರ್ಪಡೆಗೊಂಡಿದ್ದ ಈಕೆ ಮಂಗಳವಾರ ಮಧ್ಯಾಹ್ನ 12.15ರ ಸುಮಾರಿಗೆ ಮನೆಯಿಂದ ಹೊರಗೆ ಹೋಗಿದ್ದಳು. ಇದು ಮನೆಯವರ ಗಮನಕ್ಕೆ ಬಂದ ಕೂಡಲೇ ಅವರು ಹುಡುಕಾಟ ಆರಂಭಿಸಿದರು. ಸಿಸಿ ಕೆಮರಾವೊಂದನ್ನು ಪರಿಶೀಲಿಸಿದಾಗ ಈಕೆ ಆಟೋರಿಕ್ಷಾದಲ್ಲಿ ಹೋಗುತ್ತಿರುವ ದೃಶ್ಯ ದಾಖಲಾಗಿತ್ತು.
ಕೆಲಿಸ್ತಾ ಕನ್ನಡ, ತುಳು, ಇಂಗ್ಲಿಷ್, ಕೊಂಕಣಿ ಭಾಷೆಗಳನ್ನು ಮಾತನಾಡುತ್ತಾಳೆ. ಬಿಳಿ ಟಾಪ್ ಮತ್ತು ನೀಲಿ ಜೀನ್ಸ್ ಪ್ಯಾಂಟ್ ಧರಿಸಿದ್ದಳು. ಮಾಹಿತಿ ದೊರೆತವರು ಬರ್ಕೆ ಪೊಲೀಸ್ ಠಾಣೆ (0824-2220522) ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.
ಹೆತ್ತವರು ಎಚ್ಚರಿಸಿದ್ದರು
ಈಕೆಗೆ ಪಬ್ಜೀ ಗೇಮ್ನ ಅಭ್ಯಾಸವಿತ್ತು. ಈಕೆ 9ನೇ ತರಗತಿಯಲ್ಲಿದ್ದಾಗಲೂ ಪಬ್ಜಿ ಆಡುತ್ತಿದ್ದಳು. ಶಾಲೆಯಿಂದ ಮನೆಗೆ ಬಂದ ಮೇಲೆ ವೈಫೈ ಮೂಲಕ ಮನೆಯ ಮೊಬೈಲ್ನಲ್ಲಿ ಪಬ್ಜಿ ಆಡುತ್ತಿದ್ದಳು. ಈ ಬಗ್ಗೆ ಹೆತ್ತವರು ಹಲವಾರು ಬಾರಿ ಎಚ್ಚರಿಕೆ ನೀಡಿದ್ದರು. ಇದೇ ವಿಚಾರವಾಗಿ ಹಿಂದೊಮ್ಮೆ ಗಲಾಟೆ ಕೂಡ ನಡೆದಿತ್ತು. ಇತ್ತೀಚೆಗೆ ಮನೆಯವರು ಈಕೆಗೆ ಮೊಬೈಲ್ ಕೊಡಲು ನಿರ್ಧರಿಸಿ ಸಿಮ್ ಖರೀದಿಸಿದ್ದರು ಎಂದು ತಿಳಿದುಬಂದಿದೆ.
ಹುಡುಕಾಟದಲ್ಲಿದ್ದ ತಂದೆಗೆ ಅಪಘಾತ
ಕೆಲಿಸ್ತಾಳ ಹುಡುಕಾಟದಲ್ಲಿ ತೊಡಗಿದ್ದ ಆಕೆಯ ತಂದೆ ಕೆನ್ಯೂಟ್ ಫೆರಾವೊ ಅವರಿಗೆ ಮಂಗಳವಾರ ಮಧ್ಯಾಹ್ನ ಬಿಜೈ ಚರ್ಚ್ ಬಳಿ ಕಾರೊಂದು ಢಿಕ್ಕಿ ಹೊಡೆದು ಅವರು ಗಂಭೀರವಾಗಿ ಗಾಯಗೊಂಡು ನಗರದ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.