ಮಂಗಳೂರು: ವೈದ್ಯರು, ವಿದ್ಯಾರ್ಥಿಗಳ ಡ್ರಗ್ಸ್ ಪ್ರಕರಣ: 23 ಆರೋಪಿಗಳಿಗೆ ಜಾಮೀನು
Team Udayavani, Feb 1, 2023, 10:43 PM IST
ಮಂಗಳೂರು: ನಗರದಲ್ಲಿ ಇತ್ತೀಚೆಗೆ ಮಾದಕ ವಸ್ತು ಸೇವನೆ ಮತ್ತು ಮಾರಾಟ ಪ್ರಕರಣಕ್ಕೆ ಸಂಬಂಧಿಸಿ ಬಂಧಿಸಲ್ಪಟ್ಟಿದ್ದ ಒಟ್ಟು ನಾಲ್ವರು ವೈದ್ಯರು ಮತ್ತು 19 ವೈದ್ಯಕೀಯ ವಿದ್ಯಾರ್ಥಿಗಳಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ವೈದ್ಯರು ಮತ್ತು ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 24 ಮಂದಿಯನ್ನು ಬಂಧಿಸಲಾಗಿತ್ತು. ಈ ಪೈಕಿ ವೈದ್ಯಕೀಯ (ಬಿಡಿಎಸ್) ವಿದ್ಯಾರ್ಥಿ ಸಾಗರೋತ್ತರ ಭಾರತೀಯ ಪ್ರಜೆ ಯುನೈಟೆಡ್ ಕಿಂಗ್‌ಡಮ್‌ನ ನೀಲ್ ಕಿಶೋರಿಲಾಲ್ ರಾಮ್ ಜಿ ಶಾ (38) ಹೊರತುಪಡಿಸಿ ಉಳಿದವರಿಗೆ ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. 13 ಮಂದಿಗೆ ಇತ್ತೀಚೆಗೆ ಜಾಮೀನು ಮಂಜೂರಾಗಿತ್ತು.
ಮಂಗಳವಾರ 10 ಮಂದಿ ಆರೋಪಿಗಳಿಗೆ ಜಾಮೀನು ಮಂಜೂರಾಗಿದೆ. ನೀಲ್ ಕಿಶೋರಿಲಾಲ್ ರಾಮ್ ಜಿ ಶಾ ಈ ಪ್ರಕರಣದ ಪ್ರಮುಖ ಆರೋಪಿಯಾಗಿದ್ದು, ನ್ಯಾಯಾಂಗ ಬಂಧನದಲ್ಲಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಇದನ್ನೂ ಓದಿ : ಚಿನ್ನದ ಬ್ರೇಸ್‌ಲೆಟ್ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಬ್ಲೂ ಫ್ಲ್ಯಾಗ್ ಸಿಬಂದಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
Mangaluru: ಆಟೋ ವರ್ಕಶಾಪ್ನಿಂದ 93,540 ರೂ. ಕಳವು
Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ
Mangaluru: ವಕ್ಫ್ ಭೂಮಿ ಅತಿಕ್ರಮಣ: ಸಲ್ಲಿಕೆಯಾದ ವರದಿ ಬಗ್ಗೆ ತನಿಖೆಯಾಗಲಿ: ಮಾಣಿಪ್ಪಾಡಿ
Ullala: ಯುವತಿಯ ಮಾನಭಂಗಕ್ಕೆ ಯತ್ನ: ಬಾಲಕ ವಶಕ್ಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.