Mangaluru: ಅಯೋಧ್ಯೆ ಮಾದರಿ ಎಲ್ಲ ದೇವಾಲಯಗಳಿಗೂ ವಿಶ್ವಸ್ಥ ಮಂಡಳಿ ರೂಪಿಸಿ: ಪೇಜಾವರ ಶ್ರೀ
ದೇಗುಲಗಳು ಸರಕಾರದ ವಶದಿಂದ ಮುಕ್ತಗೊಳ್ಳಲಿ, ಸ್ವಂತ ಗೋಶಾಲೆ ಹೊಂದುವಂತಾಗಬೇಕಿದೆ: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ
Team Udayavani, Oct 6, 2024, 5:09 PM IST
ಮಂಗಳೂರು: ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ಹಿಂದೂ ದೇವಾಲಯಗಳು ಇನ್ನೂ ಸರಕಾರದ ವಶದಲ್ಲಿವೆ. ಪ್ರಾಚೀನ ದೇವಾಲಯಗಳನ್ನೇ ಸರಕಾರ ತನ್ನ ವಶದಲ್ಲಿ ಇರಿಸಿಕೊಂಡಿದೆ. ಸರಕಾರದ ಹಿಡಿತದಿಂದ ದೇಗುಲಗಳು ಮುಕ್ತಗೊಳ್ಳುವ ಅಗತ್ಯವಿದ್ದು, ರಾಮ ಮಂದಿರದ ಮಾದರಿಯಲ್ಲಿ ಎಲ್ಲ ದೇವಾಲಯಗಳಿಗೆ ಪ್ರತ್ಯೇಕ ವಿಶ್ವಸ್ಥ ಮಂಡಳಿ ರೂಪುಗೊಳ್ಳಬೇಕು ಎಂದು ಪೇಜಾವರ ಮಠಾಧೀಶ ಹಾಗೂ ಆಯೋಧ್ಯೆ ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ವಿಶ್ವಸ್ಥರಾಗಿರುವ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಆಗ್ರಹಿಸಿದರು.
ರವಿವಾರ ನಗರದಲ್ಲಿ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸರಕಾರದ ವಶದಲ್ಲಿರುವ ದೇವಾಲಯಗಳನ್ನು ಹಿಂದೂಗಳ ವಶಕ್ಕೆ ನೀಡು
ವಂತೆ ಸುಪ್ರೀಂ ಕೋರ್ಟ್ ಈಗಾಗಲೇ ಆದೇಶ ನೀಡಿದೆ. ಅದರ ಹೊರತಾಗಿಯೂ ಇದುವರೆಗೆ ಯಾವುದೇ ದೇವಾಲಯಗಳನ್ನು ಸರಕಾರ ತನ್ನ ಹಿಡಿತ ದಿಂದ ಮುಕ್ತಗೊಳಿಸಿಲ್ಲ. ಇತರ ಧರ್ಮೀಯರ ಆರಾಧನ ಸ್ಥಳಗಳು ಅವರ ಹಿಡಿತದಲ್ಲಿವೆ. ದೇವಸ್ಥಾನಗಳು ಸರಕಾರ ವಶದಲ್ಲಿರುವುದರಿಂದಲೇ ಶ್ರದ್ಧಾ ಕೇಂದ್ರ
ಗಳಿಗೆ ಅಪಚಾರಗಳು ಉಂಟಾಗುತ್ತಿವೆ. ಹಿಂದೂಗಳೇ ಶ್ರದ್ಧಾ ಕೇಂದ್ರಗಳನ್ನು ನಡೆಸಿದರೆ ಯಾವುದೇ ಅಪಚಾರಗಳು ಉಂಟಾಗಲು ಅವಕಾಶ ಇರುವುದಿಲ್ಲ ಎಂದು ಸ್ವಾಮೀಜಿ ಹೇಳಿದರು.
ತಿರುಪತಿ ಲಡ್ಡು ಅಪವಿತ್ರವಾಗದಂತೆ ಸರಕಾರ ನಿಗಾ ವಹಿಸಬೇಕಿತ್ತು:
ತಿರುಪತಿಯ ಲಡ್ಡು ಅಪವಿತ್ರವಾದ ಘಟನೆಗೆ ಸಂಬಂಧಿಸಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸ್ವಾಮೀಜಿ, ತಿರುಪತಿ-ತಿರುಮಲ ಶ್ರೀವೆಂಕಟೇಶ್ವರ ಸ್ವಾಮಿಯ ಲಡ್ಡು ಪ್ರಸಾದ ಅಪವಿತ್ರದಂತಹ ಘಟನೆ ನಡೆಯದಂತೆ ನೋಡಿಕೊಳ್ಳಬೇಕಾದ್ದು ಸರ್ಕಾರಗಳ ಕರ್ತವ್ಯ. ಸಂಬಂಧಪಟ್ಟ ವಿಭಾಗಗಳು ಈ ಬಗ್ಗೆ ನಿಗಾ ವಹಿಸಬೇಕಿತ್ತು. ಇಂತಹ ಘಟನೆ ಮರುಕಳಿಸದೇ ಇರಬೇಕಾದರೆ, ದೇವಾಲಯಗಳು ಸ್ವಂತ ಗೋಶಾಲೆ ಹೊಂದುವಂತಾಗಬೇಕು. ಜಾಗೃತ ಕೇಂದ್ರಗಳಾದಾಗ ಮಾತ್ರ ಹಿಂದೂಗಳ ನಂಬಿಕೆ, ನಡವಳಿಕೆಯ ಗೌರವಿಸಲು ಸಾಧ್ಯವಾಗುತ್ತದೆ. ಇಂತಹ ಉಪಕ್ರಮಕ್ಕೆ ಸರ್ಕಾರಗಳು ಮುಂದಾಗಬೇಕು ಎಂದರು.
ಅಯೋಧ್ಯೆಯಲ್ಲಿ ಕಾಮಗಾರಿಗೆ ವೇಗ
ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠೆಯ ಬಳಿಕ ಕಾಮಗಾರಿ ಮುಂದುವರಿದಿದೆ. ಬಾಕಿ ಉಳಿದಿರುವ ಕಾಮಗಾರಿಯನ್ನು ಶೀಘ್ರ ಮುಗಿಸುವ ನಿಟ್ಟಿನಲ್ಲಿ ಭರದಿಂದ ಕಾಮಗಾರಿ ನಡೆಯುತ್ತಿದೆ. ಮುಂದಿನ ಒಂದೂವರೆ ವರ್ಷದೊಳಗೆ ಕಾಮಗಾರಿ ಮುಗಿಸಲು ಉದ್ದೇಶಸಲಾಗಿದೆ ಎಂದು ಸ್ವಾಮೀಜಿ ತಿಳಿಸಿದರು.
ಲೋಕಕಲ್ಯಾಣಕ್ಕಾಗಿ ಪ್ರಾರ್ಥನೆ
ಚೆನ್ನೈನಲ್ಲಿ ಈ ಬಾರಿಯ ಚಾತುರ್ಮಾಸ್ಯ ವ್ರತ ಮುಗಿಸಿದ ಬಳಿಕ ಅಯೋಧ್ಯೆಗೆ ತೆರಳಿ ಒಂದು ವಾರಗಳ ಕಾಲ ಪೂಜಾ ಕಾರ್ಯದಲ್ಲಿ ಪಾಲ್ಗೊಂಡು ಅಲ್ಲಿಂದ ಪ್ರಯಾಗ, ಕಾಶಿ, ಹರಿದ್ವಾರ, ಹೃಷಿಕೇಶ ಮತ್ತು ಬದರಿ ಕ್ಷೇತ್ರಗಳನ್ನು ಸಂದರ್ಶಿಸಿ ಲೋಕಕಲ್ಯಾಣಕ್ಕಾಗಿ ಪ್ರಾರ್ಥನೆ ಮಾಡಿರುವುದಾಗಿ ಸ್ವಾಮೀಜಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal: ಕೇಂದ್ರ ಸರಕಾರದ ಯೋಜನೆ ಫಲಾನುಭವಿಗಳಿಗೆ ಸಾಲ ನೀಡಲು ಸತಾಯಿಸಬೇಡಿ: ಸಂಸದ ಕೋಟ
Udupi; ಗೀತಾರ್ಥ ಚಿಂತನೆ 132: ತಣ್ತೀವಿರುವುದು ಉಪದೇಶಕ್ಕಲ್ಲ, ಅಭ್ಯಾಸಕ್ಕೆ
Udupi: ವಿಶ್ವಶಾಂತಿಗೆ ಭಗವದ್ಗೀತೆಯೇ ಮೂಲಾಧಾರ: ಪುತ್ತಿಗೆ ಶ್ರೀಸುಗುಣೇಂದ್ರ ತೀರ್ಥ ಸ್ವಾಮೀಜಿ
Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು
Udupi: ಕುದ್ರು ನೆಸ್ಟ್ ರೆಸಾರ್ಟ್‌ನಲ್ಲಿ ಬೆಂಕಿ ಅವಘಡ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kota; ಮತ್ತೊಬ್ಬ ವಿದ್ಯಾರ್ಥಿ ಆತ್ಮಹ*ತ್ಯೆ: ವರ್ಷದ 17ನೇ ಕೇಸು
C.T. Ravi ಗೈರು; ಸಾಹಿತ್ಯ ಕ್ಷೇತ್ರದಲ್ಲಿ ರಾಜಕೀಯ ಮಾಡಬಾರದು: ಎಚ್.ಕೆ.ಪಾಟೀಲ್
ಮಮ್ತಾಜ್ ಅಲಿ ಆತ್ಮಹತ್ಯೆಗೆ ಪ್ರಚೋದನೆ ಆರೋಪ: ಜಾಮೀನು ವಿಚಾರಣೆ ಅರ್ಜಿ ಮುಂದೂಡಿಕೆ
Kannada; ಬಳ್ಳಾರಿಯಲ್ಲಿ 88ನೇ ಕನ್ನಡ ಸಾಹಿತ್ಯ ಸಮ್ಮೇಳನ
BBK11: ಫಿನಾಲೆಗೆ ಬರುತ್ತಾರೆ ಎನ್ನಲಾಗುತ್ತಿದ್ದ ದೈತ್ಯ ಸ್ಪರ್ಧಿಯೇ ಬಿಗ್ ಬಾಸ್ ನಿಂದ ಔಟ್?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.