ಮಂಗಳೂರು-ಹುಬ್ಬಳ್ಳಿ ವಿಮಾನಯಾನ ಆರಂಭ
Team Udayavani, May 2, 2022, 6:50 AM IST
ಮಂಗಳೂರು: ಮಂಗಳೂರು- ಹುಬ್ಬಳ್ಳಿ ನಡುವೆ ವಿಮಾನ ಸಂಚಾರ ರವಿವಾರ ಆರಂಭಗೊಂಡಿತು.
ಹುಬ್ಬಳ್ಳಿಯಿಂದ 48 ಮಂದಿ ಪ್ರಯಾಣಿಕರನ್ನು ಹೊತ್ತ ಇಂಡಿಗೋ ವಿಮಾನ ಸಂಜೆ 6.50ಕ್ಕೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿಯಿತು.
ವಾಟರ್ ಸೆಲ್ಯೂಟ್
ವಿಮಾನಕ್ಕೆ ವಾಟರ್ ಸೆಲ್ಯೂಟ್ ಸ್ವಾಗತ ನೀಡಲಾಯಿತು. ಹಿರಿಯ ಪ್ರಥಮ ಅ ಧಿಕಾರಿ ವಿನೋದ್ ರಂಗನಾಥ್ ಮತ್ತು ಕ್ಯಾಬಿನ್ ಸಿಬಂದಿ ಆನಂದಿತಾ ದಾಸ್, ಸಂಗಮಿ ಮಂಡಲ್, ಕ್ಯಾಪ್ಟನ್ ಗುರುಪ್ರೀತ್ ಸಿಂಗ್ ಸುಡಾನ್ ಮೊದಲಾದವರು ಪಾಲ್ಗೊಂಡರು.
ಟರ್ಮಿನಲ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಗಣ್ಯರು ದೀಪ ಬೆಳಗಿ ಕೇಕ್ ಕತ್ತರಿಸಿ ಪ್ರಯಾಣಿಕರೊಂದಿಗೆ ಸಂಭ್ರಮಿಸಿ ದರು. ಹುಬ್ಬಳ್ಳಿಯಿಂದ ಮಂಗಳೂರಿಗೆ ಆಗಮಿಸಿದ ಪ್ರಯಾಣಿಕರಿಗೆ ಹೂ ನೀಡಿ ಸ್ವಾಗತಿಸಲಾಯಿತು.
ಮಂಗಳೂರಿನಿಂದ ಹುಬ್ಬಳ್ಳಿಗೆ ಪ್ರಯಾಣಿಸಲು ಸಿದ್ಧರಾಗಿದ್ದ 36 ಮಂದಿ ಪ್ರಯಾಣಿಕರನ್ನು ಬೀಳ್ಕೊಟ್ಟು ಶುಭ ಹಾರೈಸಲಾಯಿತು.
ಮಂಗಳೂರು- ಹುಬ್ಬಳ್ಳಿ ನಡುವೆ ಸೋಮವಾರ, ಬುಧವಾರ, ಶುಕ್ರವಾರ ಹಾಗೂ ರವಿವಾರ ಇಂಡಿಗೋ ವಿಮಾನ ಸಂಚಾರ ನಡೆಸಲಿದೆ.
ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಸಂಜೆ 5.15ಕ್ಕೆ ಟೇಕಾಫ್ ಆಗುವ ವಿಮಾನ ಸಂಜೆ 6.15ಕ್ಕೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿಯಲಿದೆ.
ಮಂಗಳೂರಿನಿಂದ ಸಂಜೆ 6.35ಕ್ಕೆ ಟೇಕಾಫ್ ಆಗಲಿರುವ ವಿಮಾನ ರಾತ್ರಿ 7.40ಕ್ಕೆ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Mangaluru: ಟ್ರಾಯ್ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.