Mangaluru Airport : ಅ. 31ರಿಂದ ಅದಾನಿ ಸುಪರ್ದಿಗೆ
Team Udayavani, Oct 7, 2023, 12:19 AM IST
ಮಂಗಳೂರು: ಮಂಗಳೂರಿನ ವಿಮಾನ ನಿಲ್ದಾಣದ ಪೂರ್ಣ ಆಡಳಿತವು ಅ. 31ರ ಅನಂತರ ಅದಾನಿ ಸಮೂಹದ ಪಾಲಾಗಲಿದೆ.
2020ರ ಅ. 31ರಂದು ಮಂಗಳೂರು ಸೇರಿದಂತೆ ದೇಶದ 6 ವಿಮಾನ ನಿಲ್ದಾಣಗಳ ಆಡಳಿತವನ್ನು ಅದಾನಿ ಸಂಸ್ಥೆ ತನ್ನ ವಶಕ್ಕೆ ಪಡೆದುಕೊಂಡಿತ್ತು. ಆಗಿನ ಒಪ್ಪಂದ ಪ್ರಕಾರ ಮೂರು ವರ್ಷಗಳವರೆಗೆ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ (ಎಎಐ) ಅರ್ಧದಷ್ಟು ಸಿಬಂದಿ ಹಾಗೂ ಅದಾನಿ ಸಿಬಂದಿ ಜತೆಯಾಗಿಯೇ ಕೆಲಸ ಮಾಡಬೇಕಿತ್ತು.
ಈ ಒಪ್ಪಂದದ ಅವಧಿ ಅ.30ಕ್ಕೆ ಮುಕ್ತಾಯಗೊಳ್ಳುತ್ತಿದೆ. ಆ ವಿಮಾನ ನಿಲ್ದಾಣದ ಪೂರ್ಣ ಆಡಳಿತ ಅದಾನಿ ಪಾಲಾಗಲಿದೆ.
ಈ ಕಾರಣದಿಂದ ವಿಮಾನ ನಿಲ್ದಾಣದ ಹಣಕಾಸು, ಎಚ್‌ಆರ್, ಆಡಳಿತ, ವಾಣಿಜ್ಯ, ಅಗ್ನಿಶಾಮಕ, ಟರ್ಮಿನಲ್ ವಿಭಾಗ ಅ. 31ರ ಬಳಿಕ ಅದಾನಿ ಆಡಳಿತಕ್ಕೆ ಒಳಪಡಲಿದೆ. ಮುಂದೆ, ಏರ್‌ಟ್ರಾಫಿಕ್ ಕಂಟ್ರೋಲ್ (ಎಟಿಸಿ), ಕಾರ್ಗೊ ಹಾಗೂ ಸಿಎನ್‌ಎಸ್(ಕಮ್ಯುನಿಕೇಶನ್ ನೇವಿಗೇಶನ್ ಆ್ಯಂಡ್ ಸರ್ವೆಲೆನ್ಸ್) ಮಾತ್ರ ಎಎಐ ನಿರ್ವಹಿಸಲಿದೆ.
ಕಳೆದ ಮೂರು ವರ್ಷಗಳ ಅಂತರದಲ್ಲಿ ಏರ್‌ಪೋರ್ಟ್‌ನಲ್ಲಿ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಆಗಮನ ಹಾಲ್ ರಚಿಸಲಾಗಿದೆ. ಹಿಂದಿನ ಹಾಲ್ ಅನ್ನು ವಿಶಾಲವಾಗಿ ದೇಶೀಯ ಯಾನಿಗಳಿಗೆ ಮೀಸ ಲಿರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Mangaluru: ಡಿಜಿಟಲ್ ಅರೆಸ್ಟ್, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ
ವಿಡಿಯೋ | Mangaluru; ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು
Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ
Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ
MUST WATCH
ಹೊಸ ಸೇರ್ಪಡೆ
Kollywood: ಬಹಿರಂಗ ಪತ್ರ ಬರೆದು ಧನುಷ್ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್
Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.