Mangaluru: ಒಂದೂವರೆ ಕೋಟಿಗೂ ಅಧಿಕ ಬಿಜೆಪಿ ಸದಸ್ಯತ್ವ ಗುರಿ: ಧೀರಜ್ ಮುನಿರಾಜು
ದೇಶದಲ್ಲಿ ಸದಸ್ಯತ್ವ ಅಭಿಯಾನದಡಿ 9 ಕೋಟಿ ಮಂದಿ ಈಗಾಗಲೇ ಪಕ್ಷದ ಪ್ರಾಥಮಿಕ ಸದಸ್ಯರು: ಯುವ ಮೋರ್ಚಾ ರಾಜ್ಯಾಧ್ಯಕ್ಷ
Team Udayavani, Oct 5, 2024, 1:41 AM IST
ಮಂಗಳೂರು: ರಾಜ್ಯದಲ್ಲಿ ಈ ತಿಂಗಳೊಳಗೆ ಒಂದೂವರೆ ಕೋಟಿಗೂ ಹೆಚ್ಚು ಮಂದಿಯನ್ನು ಬಿಜೆಪಿ ಸದಸ್ಯರನ್ನಾಗಿಸುವ ನಿಟ್ಟಿನಲ್ಲಿ ಅಭಿಯಾನ ಸಾಗುತ್ತಿದೆ. ಪ್ರತಿ ಮನೆಯಿಂದಲೂ ಓರ್ವ ಬಿಜೆಪಿ ಕಾರ್ಯಕರ್ತರನ್ನು ಹೊಂದುವುದು ಪಕ್ಷದ ಉದ್ದೇಶವಾಗಿದೆ ಎಂದು ಬಿಜೆಪಿ ಯುವ ಮೋರ್ಚಾ ರಾಜ್ಯಾಧ್ಯಕ್ಷ ಧೀರಜ್ ಮುನಿರಾಜು ತಿಳಿಸಿದ್ದಾರೆ.
ದ.ಕ. ಜಿಲ್ಲೆಯಲ್ಲಿ ಸದಸ್ಯತ್ವ ಅಭಿಯಾನಕ್ಕಾಗಿ ಆಗಮಿಸಿರುವ ಅವರು ಮಂಗಳೂರಿನ ಕುಲಶೇಖರ ದಲ್ಲಿ ಶುಕ್ರವಾರ ಜರಗಿದ ಅಭಿಯಾನದ ಸಂದರ್ಭದಲ್ಲಿ ಪಾಲ್ಗೊಂಡು ಪತ್ರಕರ್ತರೊಂದಿಗೆ ಮಾತನಾಡಿದರು. ದೇಶದಲ್ಲಿ ಸದಸ್ಯತ್ವ ಅಭಿಯಾನದಡಿ 9 ಕೋಟಿ ಮಂದಿ ಈಗಾಗಲೇ ಸದಸ್ಯತ್ವ ಪಡೆದುಕೊಂಡಿದ್ದಾರೆ. ರಾಜ್ಯದಲ್ಲಿ ಈಗಾಗಲೇ 50 ಲಕ್ಷ ಮಂದಿ ಸದಸ್ಯತ್ವ ಪಡೆದುಕೊಂಡಿದ್ದಾರೆ.
ಬಿಜೆಪಿಯ ಆಂತರಿಕ ಸಂವಿಧಾನದಂತೆ ಪ್ರತಿ 6 ವರ್ಷಕ್ಕೊಮ್ಮೆ ಸದಸ್ಯತ್ವವನ್ನು ಪಡೆಯಲಾಗುತ್ತದೆ. ಅದರಂತೆ ಅಭಿಯಾನ ನಡೆಯುತ್ತಿದ್ದು, ದ.ಕ. ಜಿಲ್ಲೆಯಲ್ಲೂ ಉತ್ತಮ ಸ್ಪಂದನೆ ದೊರೆಯುತ್ತಿದೆ. ನಿಗದಿತ ಗುರಿಗಿಂತ ಎರಡುಪಟ್ಟು ಹೆಚ್ಚು ಮಂದಿಯನ್ನು ಸದಸ್ಯರನ್ನಾಗಿ ಮಾಡಲಾಗುವುದು ಎಂದು ಅವರು ತಿಳಿಸಿದರು.
ವಿಕಸಿತ ಭಾರತಕ್ಕಾಗಿ ನರೇಂದ್ರ ಮೋದಿ ನೇತೃತ್ವದಲ್ಲಿ ಮುನ್ನಡೆಯುತ್ತಿರುವ ನಮ್ಮ ದೇಶವನ್ನು ಜಗತ್ತು ತಿರುಗಿ ನೋಡುವಂತಾಗಿದೆ. ಹಿಂದೆ ಯಾವತ್ತೂ ಸಿಗದ ಗೌರವ ಭಾರತಕ್ಕೆ ಇಂದು ಸಿಗುತ್ತಿದೆ. 2047ಕ್ಕೆ ಸ್ವಾತಂತ್ರ್ಯೋತ್ಸವದ ನೂರನೇ ವರ್ಷ ಆಚರಣೆ ಸಂದರ್ಭದಲ್ಲಿ ವಿಕಸಿತ ಭಾರತವನ್ನಾಗಿ ಮಾಡುವುದು ನರೇಂದ್ರ ಮೋದಿಯವರ ಗುರಿಯಾಗಿದೆ. ಅದಕ್ಕೆ ಪೂರಕವಾಗಿ ಮತದಾರರು, ನಾಗರಿಕರ ಸದಸ್ಯತ್ವ ಪಡೆದುಕೊಳ್ಳಲಾಗುತ್ತಿದೆ ಎಂದು ಧೀರಜ್ ಹೇಳಿದರು.
ಶಾಸಕ ವೇದವ್ಯಾಸ ಕಾಮತ್, ಯುವಮೋರ್ಚಾ ಜಿಲ್ಲಾಧ್ಯಕ್ಷ ನಂದನ್ ಮಲ್ಯ, ಪ್ರಮುಖರಾದ ಅಶ್ವಿತ್ ಕೊಟ್ಟಾರಿ, ರಮೇಶ್ ಕಂಡೆಟ್ಟು, ರಮೇಶ್ ಹೆಗ್ಡೆ, ಲಲ್ಲೇಶ್ ಕುಮಾರ್, ಮೌನೇಶ್ ಚೌಟ, ಋತ್ವಿಕ್ ಕದ್ರಿ, ಕಿಶೋರ್ ಕೊಟ್ಟಾರಿ, ಕಾವ್ಯಾ ನಟರಾಜ್, ರೂಪಶ್ರೀ ಪೂಜಾರಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.