Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ
Team Udayavani, Sep 19, 2024, 6:30 AM IST
ಮಂಗಳೂರು: ಪಾಲಕ್ಕಾಡ್ ರೈಲ್ವೇ ವಿಭಾಗದ ವಿವಿಧ ಪ್ರದೇಶಗಳಲ್ಲಿ ಹಳಿ ನಿರ್ವಹಣೆ ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತಿರುವ ಹಿನ್ನೆಲೆಯಲ್ಲಿ ಹಲವು ರೈಲು ಸಂಚಾರದಲ್ಲಿ ವ್ಯತ್ಯಯವಾಗಲಿದೆ.
ಸೆ. 19ರಂದು ಡಾ.ಎಂಜಿಆರ್ ಚೆನ್ನೈ ಸೆಂಟ್ರಲ್ನಿಂದ ಮಂಗಳೂರು ಸೆಂಟ್ರಲ್ಗೆ ಆಗಮಿಸುವ ನಂ. 22637 ವೆಸ್ಟ್ ಕೋಸ್ಟ್ ಸೂಪರ್ ಫಾಸ್ಟ್ ಎಕ್ಸ್ಪ್ರೆಸ್ ರೈಲನ್ನು 2 ಗಂಟೆ 10 ನಿಮಿಷಗಳ ಕಾಲ ನಿಯಂತ್ರಿಸಲಾಗಿದೆ. ಆದೇ ದಿನ ಚೆನ್ನೈ ಸೆಂಟ್ರಲ್ನಿಂದ ಮಂಗಳೂರು ಸೆಂಟ್ರಲ್ಗೆ ಆಗಮಿಸುವ ರೈಲು ಸಂಖ್ಯೆ 12685 ಸೂಪರ್ ಫಾಸ್ಟ್ ಎಕ್ಸ್ಪ್ರೆಸ್ ರೈಲನ್ನು 40 ನಿಮಿಷಗಳ ಕಾಲ ನಿಯಂತ್ರಿಸಲಾಗಿದೆ.
ಸೆ. 19ರಂದು ತಿರುವನಂತಪುರಂ ಸೆಂಟ್ರಲ್ನಿಂದ ಮಂಗಳೂರು ಸೆಂಟ್ರಲ್ಗೆ ಆಗಮಿಸುವ ನಂ. 16604 ಮಾವೇಲಿ ಎಕ್ಸ್ಪ್ರೆಸ್ ರೈಲು 30 ನಿಮಿಷಗಳ ಕಾಲ ವ್ಯತ್ಯಯವಾಗಲಿದೆ. ಸೆ. 20ರಂದು ಡಾ. ಎಂಜಿಆರ್ ಚೆನ್ನೈ ಸೆಂಟ್ರಲ್ನಿಂದ ಮಂಗಳೂರು ಸೆಂಟ್ರಲ್ಗೆ ಆಗಮಿಸುವ ರೈಲು ಸಂಖ್ಯೆ 22637 ವೆಸ್ಟ್ ಕೋಸ್ಟ್ ಸೂಪರ್ ಫಾಸ್ಟ್ ಎಕ್ಸ್ಪ್ರೆಸ್ ರೈಲು ಸೇವೆ 1 ಗಂಟೆ 30 ನಿಮಿಷಗಳ ಕಾಲ ವ್ಯತ್ಯಯವಾಗಲಿದೆ.
ಸೆ. 21ರಂದು ಡಾ. ಎಂಜಿಆರ್ ಚೆನ್ನೈ ಸೆಂಟ್ರಲ್ನಿಂದ ಮಂಗಳೂರು ಸೆಂಟ್ರಲ್ಗೆ ಆಗಮಿಸುವ ರೈಲು ಸಂಖ್ಯೆ 22637 ವೆಸ್ಟ್ ಕೋಸ್ಟ್ ಸೂಪರ್ ಫಾಸ್ಟ್ ಎಕ್ಸ್ಪ್ರೆಸ್ ರೈಲು ಸೇವೆ 1 ಗಂಟೆ ಕಾಲ ವ್ಯತ್ಯಯವಾಗಲಿದೆ. ಸೆ. 27ರಂದು ಮಂಗಳೂರು ಸೆಂಟ್ರಲ್ನಿಂದ ಡಾ| ಎಂಜಿಆರ್ ಚೆನ್ನೈ ಸೆಂಟ್ರಲ್ಗೆ ತೆರಳುವ ನಂ. 22638 ವೆಸ್ಟ್ ಕೋಸ್ಟ್ ಸೂಪರ್ ಫಾಸ್ಟ್ ಎಕ್ಸ್ಪ್ರೆಸ್ ರೈಲು ಸೇವೆ 30 ನಿಮಿಷಗಳ ಕಾಲ ವ್ಯತ್ಯಯವಾಗಲಿದೆ ಎಂದು ರೈಲ್ವೇ ಇಲಾಖೆ ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.