Mangaluru: ಅಪ್ರಾಪ್ತೆಗೆ ಶಿಕ್ಷಕನಿಂದ ಲೈಂಗಿಕ ಕಿರುಕುಳ: ಆರೋಪ ಸಾಬೀತು, ಶಿಕ್ಷೆ ಪ್ರಕಟ
ಕಾರಾಗೃಹ ಶಿಕ್ಷೆ, ದಂಡ ವಿಧಿಸಿದ ಜಿಲ್ಲಾ ನ್ಯಾಯಾಲಯ, ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ
Team Udayavani, Oct 19, 2024, 8:44 PM IST
ಮಂಗಳೂರು: ಅಪ್ರಾಪ್ತೆಗೆ ಶಾಲೆಯ ಶಿಕ್ಷಕನೇ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪ ಸಾಬೀತಾಗಿದ್ದು, ಶಿಕ್ಷಕನಿಗೆ 5 ವರ್ಷ ಕಾರಾಗೃಹ ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಪೋಕ್ಸೋ ಎಫ್‌ಟಿಎಸ್‌ಸಿ-1) ಆದೇಶ ನೀಡಿದೆ.
ಮೂಲತಃ ಹತ್ಯಡ್ಕ ಅರಸಿನಮಕ್ಕಿ ಪಡ್ಡಾಯಿಬೆಟ್ಟು, ಕಲ್ಲಮುಂಡ್ಕೂರಿನಲ್ಲಿ ವಾಸವಾಗಿದ್ದ ಗುರುವ ಮೊಗೇರ ಯಾನೆ ಗುರುವ ಎಂ.ಪಿ. (49) ಶಿಕ್ಷೆಗೆ ಒಳಗಾದ ಶಾಲಾ ಶಿಕ್ಷಕ. ಆತ ವಿದ್ಯಾರ್ಥಿನಿಯರಿಗೆ ರಜೆ ಬೇಕಿದ್ದರೆ, ಪಾಠಕ್ಕೆ ಸಂಬಂಧಪಟ್ಟ ಏನಾದರೂ ಸಂದೇಹಗಳ ಕೇಳಲು ಹೋದಾಗ ಶಾಲೆಯಯಲ್ಲಿರುವ ಪ್ರತ್ಯೇಕ ಕೊಠಡಿಗೆ ಬರಲು ಹೇಳುತ್ತಿದ್ದ. ಅಲ್ಲಿ ಆತ ಲೈಂಗಿಕ ಕಿರುಕುಳ ನೀಡುತ್ತಿದ್ದ. ಈ ಬಗ್ಗೆ ವಿದ್ಯಾರ್ಥಿನಿಯರು ಶಾಲೆಯ ಮುಖ್ಯ ಶಿಕ್ಷಕರಲ್ಲಿ ದೂರು ನೀಡಿದ್ದರು.
ವಿದ್ಯಾರ್ಥಿನಿಯೊಬ್ಬಳಿಗೆ ಎರಡು ಬಾರಿ ಲೈಂಗಿಕ ಕಿರುಕುಳ ನೀಡಿದ್ದು, ಆಕೆ ನೀಡಿದ ದೂರಿನಂತೆ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಪೋಕ್ಸೋ ಎಫ್‌ಟಿಎಸ್‌ಸಿ-೧) ನ್ಯಾಯಾಧೀಶರಾದ ಡಿ.ವಿನಯ್ ಸಮಗ್ರ ವಿಚಾರಣೆ ನಡೆಸಿ ಆದೇಶ ನೀಡಿದ್ದಾರೆ. ಸಂತ್ರಸ್ತೆ ಪರವಾಗಿ ವಿಶೇಷ ಸರಕಾರಿ ಅಭಿಯೋಜಕರಾದ ಸಹನಾದೇವಿ ಬೋಳೂರು ವಾದ ಮಂಡಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.