ಮೇ 20ರಂದು ಬಹುನಿರೀಕ್ಷಿತ ರಾಜ್ ಸೌಂಡ್ಸ್ ಆ್ಯಂಡ್ ಲೈಟ್ಸ್ ತುಳು ಸಿನಿಮಾ ಬಿಡುಗಡೆ
ಕೋವಿಡ್ ಹಿನ್ನೆಲೆಯಲ್ಲಿ ದಿನಾಂಕ ಮುಂದೂಡಿದ್ದು, ಇದೀಗ ಸಿನಿಮಾ ಬಿಡುಗಡೆಯ ಹೊಸ ದಿನಾಂಕವನ್ನು ಘೋಷಿಸಿರುವುದಾಗಿ ಹೇಳಿದೆ
Team Udayavani, Feb 9, 2022, 11:28 AM IST
ಮಂಗಳೂರು: ರಾಹುಲ್ ಅಮೀನ್ ನಿರ್ದೇಶನದ ಬಹುನಿರೀಕ್ಷಿತ ರಾಜ್ ಸೌಂಡ್ಸ್ ಆ್ಯಂಡ್ ಲೈಟ್ಸ್ ತುಳು ಸಿನಿಮಾ 2022ರ ಮೇ 20ರಂದು ತೆರೆಕಾಣಲಿದೆ ಎಂದು ಚಿತ್ರತಂಡ ಘೋಷಿಸಿದೆ.
ರಾಜ್ ಸೌಂಡ್ಸ್ ಆ್ಯಂಡ್ ಲೈಟ್ಸ್ ತುಳು ಸಿನಿಮಾ ಫೆಬ್ರವರಿ ತಿಂಗಳಿನಲ್ಲಿ ಬಿಡುಗಡೆ ಮಾಡುವುದಾಗಿ ಘೋಷಿಸಿತ್ತು. ಆದರೆ ಕೋವಿಡ್ ಹಿನ್ನೆಲೆಯಲ್ಲಿ ದಿನಾಂಕ ಮುಂದೂಡಿದ್ದು, ಇದೀಗ ಸಿನಿಮಾ ಬಿಡುಗಡೆಯ ಹೊಸ ದಿನಾಂಕವನ್ನು ಘೋಷಿಸಿರುವುದಾಗಿ ಹೇಳಿದೆ.
ಸಿನಿಮಾ ಬಿಡುಗಡೆಗೂ ಮುನ್ನ ಬಹುನಿರೀಕ್ಷೆಯನ್ನು ಹುಟ್ಟುಹಾಕಿದೆ. ಈಗಾಗಲೇ ರಾಜ್ ಸೌಂಡ್ಸ್ ಆ್ಯಂಡ್ ಲೈಟ್ಸ್ ಸಿನಿಮಾದಲ್ಲಿನ ಎಲ್ಲಾ ನಟರ ಮೋಷನ್ ಪೋಸ್ಟರ್ ಚಿತ್ರತಂಡ ಈಗಾಗಲೇ ಬಿಡುಗಡೆಗೊಳಿಸಿದ್ದು, ಸಿನಿಪ್ರೇಕ್ಷಕರಿಂದ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗಿರುವುದು ಚಿತ್ರತಂಡದ ಖುಷಿಯನ್ನು ಇಮ್ಮಡಿಗೊಳಿಸಿದೆ.
ಚಿತ್ರದಲ್ಲಿನ ತುಳುನಾಡ ಕಾಮಿಡಿ ಕಿಂಗ್ ಅರವಿಂದ್ ಬೋಳಾರ್ ಅಭಿನಯದ ಇಂಟ್ರೋ ಟೀಸರ್ ಗೂ ಕೂಡಾ ಯೂಟ್ಯೂಬ್ ನಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಒಂದು ಮೊಟ್ಟೆಯ ಕಥೆಯ ಚಿತ್ರತಂಡ ಇದೀಗ ರಾಜ್ ಸೌಂಡ್ಸ್ ಆ್ಯಂಡ್ ಲೈಟ್ಸ್ ಎಂಬ ಹಾಸ್ಯ ಹಾಗೂ ಕೌಟುಂಬಿಕ ಕಥಾಹಂದರದ ಚಿತ್ರಕಥೆಯನ್ನು ತೆರೆಯ ಮೇಲೆ ತರಲು ಸಜ್ಜಾಗಿರುವುದಾಗಿ ತಿಳಿಸಿದೆ.
ಚಿತ್ರವನ್ನು ಆನಂದ್ ಎಂ ನಿರ್ಮಿಸಿದ್ದು, ಬಿ.ಅಶೋಕ್ ಕುಮಾರ್, ಸೀತಾರಾಮ್ ಶೆಟ್ಟಿ, ಅಜಯ್ ಬಾಳಿಗಾ, ಸುಹಾನ್ ಪ್ರಸಾದ್, ಪವನ್ ಕುಮಾರ್, ನಿತಿನ್ ರಾಜ್ ಶೆಟ್ಟಿ ಮತ್ತು ಅರ್ಪಿತ್ ಅಡ್ಯಾರ್ ಸಹ ನಿರ್ಮಾಪಕರಾಗಿದ್ದಾರೆ.
ನಾಯಕ ನಟ ವಿ.ಜೆ.ವಿನೀತ್ ಸಿನಿಮಾಕ್ಕೆ ಕಥೆ, ಚಿತ್ರಕಥೆ ಕೂಡಾ ಬರೆದಿದ್ದಾರೆ. ರಾಹುಲ್ ಅಮೀನ್ ಸಿನಿಮಾವನ್ನು ನಿರ್ದೇಶಿಸಿದ್ದಾರೆ. ಚಿತ್ರಕ್ಕೆ ಪಡ್ಡಾಯಿ ಖ್ಯಾತಿಯ ಪ್ರಸಾದ್ ಪಿ. ಕ್ಯಾಮರಾ ಸೆರೆಹಿಡಿದಿದ್ದಾರೆ. ಜೇಕಬ್ ಜಾನ್ಸನ್ ಸಹಕಾರ ನೀಡಿದ್ದಾರೆ. ಗಿರ್ಗಿಟ್ ಖ್ಯಾತಿಯ ಪ್ರಸನ್ನ ಶೆಟ್ಟಿ ಬೈಲೂರು ಸಂಭಾಷಣೆ ಬರೆದಿದ್ದಾರೆ.
ಚಿತ್ರದ ಹಾಡುಗಳನ್ನು ಸೃಜನ್ ಕುಮಾರ್ ತೋನ್ಸೆ ಸಂಯೋಜಿಸಿದ್ದು, ಪ್ಲ್ಯಾಂಗಲ್ ಸ್ಟುಡಿಯೋ ಸಂಕಲನ, ಚಿತ್ರದ ಸಾಹಸ ದೃಶ್ಯಗಳನ್ನು ಚೇತನ್ ಡಿಸೋಜಾ ನಿರ್ವಹಿಸಿದ್ದಾರೆ. ನವೀನ್ ಶೆಟ್ಟಿ ಆರ್ಯನ್ ನೃತ್ಯ ಸಂಯೋಜನೆ ಮಾಡಿರುವುದಾಗಿ ಚಿತ್ರತಂಡ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Davanagere: ಇನ್ಶೂರೆನ್ಸ್ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ
Udupi: ನ. 9-11ರ ವರೆಗೆ 3 ದಿನಗಳ ಹರಿದಾಸ ಸಾಹಿತ್ಯ ಅಂತಾರಾಷ್ಟ್ರೀಯ ಸಮ್ಮೇಳನ
Commonwealth ಸಂಸದೀಯ ಸಭೆ; ಸ್ಪೀಕರ್ ಯು.ಟಿ. ಖಾದರ್ ಭಾಗಿ
Salman Khan: ಕ್ಷಮೆ ಕೇಳಿ ಇಲ್ಲವೇ 5 ಕೋಟಿ ಕೊಡಿ: ನಟ ಸಲ್ಮಾನ್‌ಗೆ ಮತ್ತೂಂದು ಬೆದರಿಕೆ
Mangaluru: ಎಡನೀರು ಶ್ರೀಗಳ ಕಾರಿನ ಮೇಲೆ ದಾಳಿ ಖಂಡನೀಯ; ಪುಂಡರ ತಕ್ಷಣವೇ ಬಂಧಿಸಿ: ಕ್ಯಾ.ಚೌಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.