Mangaluru: ತುಳುನಾಡ ಉತ್ಸವ ಪಿಲಿಕುಳ ಕಂಬಳ: ಬೆಂಗಳೂರಿನಲ್ಲಿ ಸಭೆ
ಜನಪ್ರತಿನಿಧಿಗಳು, ಅಧಿಕಾರಿಗಳ ಉಪಸ್ಥಿತಿಯಲ್ಲಿ ಮಹತ್ವದ ಸಭೆ
Team Udayavani, Sep 13, 2024, 1:10 AM IST
ಮಂಗಳೂರು: ಪಿಲಿಕುಳದಲ್ಲಿ ಸರಕಾರಿ ನೇತೃತ್ವದ ಕಂಬಳದ ಜತೆಗೆ 7 ದಿನಗಳ ತುಳುನಾಡ ಉತ್ಸವ ಸಂಬಂಧ ಸ್ಪೀಕರ್ ಯು.ಟಿ.ಖಾದರ್ ನೇತೃತ್ವದಲ್ಲಿ ಗುರುವಾರ ಬೆಂಗಳೂರಿನಲ್ಲಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಉಪಸ್ಥಿತಿಯಲ್ಲಿ ಮಹತ್ವದ ಸಭೆ ನಡೆಯಿತು.
ಸ್ಪೀಕರ್ ಯು.ಟಿ.ಖಾದರ್ ಮಾತನಾಡಿ, ಈ ಕಾರ್ಯಕ್ರಮದ ಮೂಲಕ ಪಿಲಿಕುಳಕ್ಕೆ ಸಾಕಷ್ಟು ಪ್ರವಾಸಿಗರು, ವಿದ್ಯಾರ್ಥಿಗಳು ಭೇಟಿ ನೀಡಿ ನಿಸರ್ಗಧಾಮದ ಪ್ರಯೋಜನ ಪಡೆದುಕೊಳ್ಳಲು ಸಾಧ್ಯ. ತುಳುನಾಡ ಉತ್ಸವವನ್ನು ಈ ಬಾರಿ ಯಶಸ್ವಿಯಾಗಿ ಆಚರಿಸಿ ಮುಂದಿನ ಹಂತದಲ್ಲಿ ರಾಜ್ಯದ ಬಜೆಟ್‌ನಲ್ಲಿ ಈ ಉತ್ಸವಕ್ಕೆ ಅನುದಾನ ನಿಗದಿಪಡಿಸಿ ಶಾಶ್ವತವಾಗಿ ಕಾರ್ಯಕ್ರಮ ನಡೆಸಬಹುದು ಎಂದರು.
ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ಪಿಲಿಕುಳ ಹಾಗೂ ಜಿಲ್ಲೆಯ ಅಭಿವೃದ್ಧಿಯ ನಿಟ್ಟಿನಲ್ಲಿ ಒಳ್ಳೆಯ ಉದ್ದೇಶದಿಂದ ಈ ಉತ್ಸವ ಹಮ್ಮಿಕೊಳ್ಳಲಾಗಿದೆ. ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಸದರು, ಶಾಸಕರು, ಅಧಿಕಾರಿಗಳು, ವಿವಿಧ ಸಂಘ ಸಂಸ್ಥೆಗಳ ಸಮಾಲೋಚನೆ ಸಭೆ ಕರೆಯಲಾಗುವುದು ಎಂದರು.
ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಮಾತನಾಡಿ, ಈ ಉತ್ಸವದಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಪ್ರಯೋಜನ ಪಡೆದುಕೊಳ್ಳುವಂತಾಗಬೇಕು ಎಂದರು.
ಶಾಸಕರಾದ ಉಮಾನಾಥ ಕೋಟ್ಯಾನ್, ಡಿ. ವೇದವ್ಯಾಸ ಕಾಮತ್, ಡಾ| ಭರತ್ ಶೆಟ್ಟಿ, ರಾಜೇಶ್ ನಾಯ್ಕ, ಹರೀಶ್ ಪೂಂಜ, ಅಶೋಕ್ ಕುಮಾರ್ ರೈ, ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ, ಐವನ್ ಡಿ’ ಸೋಜಾ, ಭೋಜೇಗೌಡ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೆ$ç ಮುಗಿಲನ್, ಮುಡಾ ಅಧ್ಯಕ್ಷ ಸದಾಶಿವ ಉಳ್ಳಾಲ್, ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ| ಎಂ. ಮೋಹನ್ ಆಳ್ವ, ದಕ್ಷಿಣ ಕನ್ನಡ ಕಂಬಳ ಸಮಿತಿಯ ಪ್ರಮುಖರಾದ ಬೆಳಪು ದೇವಿಪ್ರಸಾದ್ ಶೆಟ್ಟಿ, ಪಿ.ಆರ್.ಶೆಟ್ಟಿ, ಪಿಲಿಕುಳ ಅಭಿವೃದ್ಧಿ ಪ್ರತಿಷ್ಠಾನದ ಅಧಿಕಾರಿಗಳು, ರಾಜ್ಯದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ranga Chavadi: ಕಿಶೋರ್ ಡಿ ಶೆಟ್ಟಿ ಅವರಿಗೆ ರಂಗಚಾವಡಿ 2024 ಪ್ರಶಸ್ತಿ
Kateel: ತಾರಾನಾಥ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು… ಅಕ್ಕನಿಂದಲೇ ಕೊಲೆಯಾದ ತಮ್ಮ
ಮಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣ: ದಂಪತಿ ಸಹಿತ ಆರೋಪಿಗಳಿಗೆ ಮುಂದುವರಿದ ನ್ಯಾಯಾಂಗ ಬಂಧನ
Mangaluru: ಸಿಸಿಬಿ ಪೊಲೀಸರ ಕಾರ್ಯಾಚರಣೆ… ಅಪಾರ ಪ್ರಮಾಣದ ಮಾದಕ ವಸ್ತು ಸಹಿತ ಓರ್ವನ ಸೆರೆ
Mangaluru: ನೇತ್ರಾವತಿ ಸೇತುವೆ ಬಳಿ ಬೈಕ್ ಅಪಘಾತ… ಓರ್ವ ಮೃತ್ಯು, ಮತ್ತೋರ್ವ ಗಂಭೀರ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.