Mangaluru: ಉಳ್ಳಾಲ ಗೂಡ್ಸ್ ಶೆಡ್ ಕಾರ್ಯಾಚರಣೆ ಆರಂಭ
ಆಂಧ್ರದಿಂದ ಆಗಮಿಸಿದ 10 ವ್ಯಾಗನ್ ಸಿಮೆಂಟ್; ರೈಲ್ವೇ ಇಲಾಖೆ 8.44 ಲಕ್ಷ ಆದಾಯ
Team Udayavani, Aug 25, 2024, 1:23 AM IST
ಮಂಗಳೂರು: ಉಳ್ಳಾಲದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಗೂಡ್ಸ್ ಶೆಡ್ ಶನಿವಾರದಿಂದ ಕಾರ್ಯಾಚರಣೆ ಆರಂಭಿಸಿದೆ. ಆಂಧ್ರಪ್ರದೇಶದ ಗೂಟಿ ಪಟ್ಟಣದ ಅಲ್ಟ್ರಾಟೆಕ್‌ನಿಂದ ಆ.21ರಂದು 10 ವ್ಯಾಗನ್ ಸಿಮೆಂಟ್ ಲೋಡ್‌ನೊಂದಿಗೆ ಹೊರಟಿದ್ದ ಗೂಡ್ಸ್ ರೈಲು ಆ.24ರಂದು ಉಳ್ಳಾಲ ತಲುಪಿದೆ. ಆ ಮೂಲಕ ಈ ಪ್ರದೇಶದ ಅಭಿವೃದ್ಧಿಯ ಹೊಸ ಮೈಲಿಗಲ್ಲು ಆರಂಭವಾಗಿದ್ದು, ರೈಲ್ವೇ ಇಲಾಖೆಗೆ 8,44,753 ರೂ. ಆದಾಯ ತಂದಿದೆ.
ಉಳ್ಳಾಲ ಗೂಡ್ಸ್ ಶೆಡ್ ದಕ್ಷಿಣ ರೈಲ್ವೇಯ ಪಾಲಕ್ಕಾಡ್ ವಿಭಾಗದಿಂದ ಅಭಿವೃದ್ಧಿಪಡಿಸಲಾಗಿದ್ದು, ಮಂಗ ಳೂರಿನ ಬಂದರಿನಲ್ಲಿದ್ದ ಗೂಡ್ಸ್ ಶೆಡ್‌ನ್ನು ಉಳ್ಳಾಲಕ್ಕೆ ಸ್ಥಳಾಂತರಿಸಲಾಗಿತ್ತು. 650 ಮೀ. ಉದ್ದ ಮತ್ತು 15 ಮೀ. ಅಗಲದ ಪ್ಲಾಟ್‌ಫಾರ್ಮ್ ಹೊಂದಿದ್ದು, 42 ಬಿಸಿಎನ್ ವ್ಯಾಗನ್‌ಗಳನ್ನು ನಿಲ್ಲಿಸಲು ಸಾಧ್ಯವಾಗಲಿದೆ. ಉಳ್ಳಾಲದಲ್ಲಿ ಗೂಡ್ಸ್ ಶೆಡ್ ಮರು ನಿರ್ಮಾಣ ಮಾಡಿರುವುದರಿಂದ ದಕ್ಷಿಣ ಕನ್ನಡ ಜಿಲ್ಲೆಯ ಕೃಷಿ, ಕೈಗಾರಿಕೆ ಮತ್ತು ಮೂಲ ಸೌಕರ್ಯ ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶ ನೀಡಿದೆ.
ಉಳ್ಳಾಲಕ್ಕೆ ಬರುವ ಸರಕುಗಳನ್ನು ಪಣಂಬೂರು, ಬೈಕಂಪಾಡಿ, ಮರೋಳಿ ಮತ್ತು ಇತರ ಕಡೆಗಳಲ್ಲಿರುವ ಗೋದಾಮುಗಳಿಗೆ ನೇರವಾಗಿ ವರ್ಗಾಯಿಸಲು ಸಾಧ್ಯವಾಗಲಿದೆ. ನಗರದ ವಾಹನ ದಟ್ಟಣೆ, ಮಾಲಿನ್ಯ ಮೊದಲಾದವು ಇದರಿಂದ ಸಾಕಷ್ಟು ಕಡಿಮೆಯಾಗಲಿದೆ. ನಿರ್ಮಾಣ ವಾಗಿರುವ ಉಳ್ಳಾಲ ಗೂಡ್ಸ್ ಶೆಡ್ ಈ ಪ್ರದೇಶದ ಆರ್ಥಿಕ ಅಭಿವೃದ್ಧಿಯಲ್ಲೂ ಪ್ರಮುಖ ಪಾತ್ರವಹಿಸಲಿದೆ ಎಂದು ಪಾಲಕ್ಕಾಡ್ ವಿಭಾಗದ ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ
Mangaluru: ವಕ್ಫ್ ಭೂಮಿ ಅತಿಕ್ರಮಣ: ಸಲ್ಲಿಕೆಯಾದ ವರದಿ ಬಗ್ಗೆ ತನಿಖೆಯಾಗಲಿ: ಮಾಣಿಪ್ಪಾಡಿ
Ullala: ಯುವತಿಯ ಮಾನಭಂಗಕ್ಕೆ ಯತ್ನ: ಬಾಲಕ ವಶಕ್ಕೆ
Doctor; ಖ್ಯಾತ ಹೃದ್ರೋಗ ತಜ್ಞ ಡಾ.ಎಸ್.ಜಿ.ಸರ್ವೋತ್ತಮ ಪ್ರಭು ವಿಧಿವಶ
Vertex Workspace ಸಂಸ್ಥೆಗೆ ಬೆಸ್ಟ್ ಇನ್ನೋವೇಟಿವ್ ಎಂಟರ್‌ಪೈಸ್ ಅವಾರ್ಡ್
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.