Manipal: ಕೇಂದ್ರ ಸರಕಾರದ ಯೋಜನೆ ಫಲಾನುಭವಿಗಳಿಗೆ ಸಾಲ ನೀಡಲು ಸತಾಯಿಸಬೇಡಿ: ಸಂಸದ ಕೋಟ
ಬ್ಯಾಂಕರ್‌ಗಳ ಸಭೆಯಲ್ಲಿ ಅಧಿಕಾರಿಗಳಿಗೆ ಶ್ರೀನಿವಾಸ ಪೂಜಾರಿ ಸೂಚನೆ, ಕನ್ನಡದಲ್ಲೇ ಮಾಹಿತಿ ನೀಡುವ ವ್ಯವಸ್ಥೆಯನ್ನೂ ಮಾಡಬೇಕು
Team Udayavani, Dec 22, 2024, 2:39 AM IST
ಮಣಿಪಾಲ: ಕೇಂದ್ರ ಸರಕಾರ ಪಿ.ಎಂ. ಸ್ವನಿಧಿ, ವಿಶ್ವಕರ್ಮ ಮೊದಲಾದ ಯೋಜನೆಯ ಫಲಾನುಭವಿಗಳು ಸಾಲಕ್ಕೆ ಅರ್ಜಿ ಸಲ್ಲಿಸಿದಾಗ ಅವರನ್ನು ಬ್ಯಾಂಕ್ ಅಧಿಕಾರಿಗಳು ಸತಾಯಿಸುವುದು, ಅವರೊಂದಿಗೆ ಕಟುವಾಗಿ ವರ್ತಿಸುವುದು ಸರಿಯಲ್ಲ. ಇದು ಬಡವರಿಗಾಗಿಯೇ ಇರುವ ಯೋಜನೆ. ವಿನಾಕಾರಣ ಅರ್ಜಿಯನ್ನು ತಿರಸ್ಕರಿಸಬಾರದು. ಕನ್ನಡದಲ್ಲೇ ಮಾಹಿತಿ ನೀಡುವ ವ್ಯವಸ್ಥೆಯನ್ನೂ ಮಾಡಬೇಕು ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಡಾ| ವಿ.ಎಸ್. ಆಚಾರ್ಯ ಸಭಾಂಗಣ ದಲ್ಲಿ ಶನಿವಾರ ಜರಗಿದ ಬ್ಯಾಂಕರ್‌ಗಳ ಸಭೆ ಮತ್ತು ಕೇಂದ್ರ ಸರಕಾರದ ಯೋಜನೆಗಳ ಪ್ರಗತಿ ಪರಿಶೀಲನೆಯ ಸಭೆಯಲ್ಲಿ ಮಾತನಾಡಿದರು. ಪಿಎಂ ವಿಶ್ವಕರ್ಮ ಯೋಜನೆಗೆ ಸಂಬಂಧಿಸಿ ಬ್ಯಾಂಕ್‌ಗಳು ತಿರಸ್ಕರಿಸಿರುವ ಪಟ್ಟಿಯನ್ನು ನಮಗೆ ನೀಡಬೇಕು ಮತ್ತು ಯಾವ ಕಾರಣಕ್ಕೆ ತಿರಸ್ಕರಿಸಲಾಗಿದೆ ಎಂಬದನ್ನು ಸ್ಪಷ್ಟವಾಗಿ ತಿಳಿಸಬೇಕು. ಕೋವಿಡ್ ಅವಧಿಯ ಬ್ಯಾಂಕ್ ಸಾಲ ಪಾವತಿ ಸಮಸ್ಯೆಗೂ ಇದಕ್ಕೂಸಂಬಂಧ ಕಲ್ಪಿಸಬಾರದು ಎಂದರು.
ದುಬಾರಿ ಸ್ಟಾಂಪ್ ಪೇಪರ್ ಸಲ್ಲದು
ಕೆಲವು ಬ್ಯಾಂಕ್‌ಗಳು ಸ್ಟಾಂಪ್ ಪೇಪರ್‌ಗೆ ದುಬಾರಿ ದರ ನಿಗದಿ ಮಾಡಿರುವ ಬಗ್ಗೆ ದೂರುಗಳು ಬಂದಿವೆ. ಸ್ಟಾಂಪ್ ಪೇಪರ್ ಬೆಲೆ 500 ರೂ. ಇದ್ದರೂ 2 ಸಾ. ರೂ. ಪಡೆಯಲಾಗುತ್ತಿರುವ ಬಗ್ಗೆ ಅನೇಕರು ಲಿಖಿತ ದೂರು ನೀಡಿದ್ದಾರೆ. ಈ ಬಗ್ಗೆ ತತ್‌ಕ್ಷಣವೇ ಕ್ರಮ ತೆಗೆದುಕೊಳ್ಳಬೇಕು ಎಂದು ಲೀಡ್ ಬ್ಯಾಂಕ್ ಮ್ಯಾನೇಜರ್‌ಗೆ ಸೂಚಿಸಿದರು. 500 ರೂ. ಮುಖಬೆಲೆಯ ಸ್ಟಾಂಪ್ ಪೇಪರ್ ಮಾತ್ರ ತೆಗೆದುಕೊಳ್ಳಲು ಸೂಚನೆ ನೀಡಲಾಗುವುದು ಎಂದು ಲೀಡ್ ಬ್ಯಾಂಕ್ ಮ್ಯಾನೇಜರ್ ಹೇಳಿದರು.
ಸಾಲ ಠೇವಣಿ ಅನುಪಾತ ಸುಧಾರಣೆ
ಕೆನರಾ ಬ್ಯಾಂಕ್ ಉಡುಪಿ ಪ್ರಾದೇಶಿಕ ಕಚೇರಿಯ ಎಜಿಎಂ ಶ್ರೀಜಿತ್ ಕೆ. ಮಾತನಾಡಿ, ಜಿಲ್ಲೆಯ ಸಾಲ-ಠೇವಣಿ ಅನುಪಾತ(ಸಿಡಿ ರೇಶಿಯೋ) ಸುಧಾ ರಣೆಯಾಗುತ್ತಿದೆ ಎಂದರು. ಜಿಪಂ ಸಿಇಒ ಪ್ರತೀಕ್ ಬಾಯಲ್ ಅಧ್ಯಕ್ಷತೆ ವಹಿಸಿದ್ದರು. ಜಿಪಂ ಸಿಪಿಒ ಡಾ.ಉದಯ ಶೆಟ್ಟಿ, ಆರ್‌ಬಿಐ ಬೆಂಗಳೂರು ಮ್ಯಾನೇಜರ್ ವೆಂಕಟರಮಣಯ್ಯ ಟಿ.ಎನ್. ಉಪಸ್ಥಿತರಿದ್ದರು. ಲೀಡ್ ಬ್ಯಾಂಕ್ ಮ್ಯಾನೇಜರ್ ಹರೀಶ್ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kambala Kalarava: ರಾಜ ಮನೆತನದ ಐತಿಹ್ಯವಿರುವ ಮೂಲ್ಕಿ ಸೀಮೆಯ ʼಅರಸು ಕಂಬಳʼ
Udupi; ಗೀತಾರ್ಥ ಚಿಂತನೆ 132: ತಣ್ತೀವಿರುವುದು ಉಪದೇಶಕ್ಕಲ್ಲ, ಅಭ್ಯಾಸಕ್ಕೆ
Udupi: ವಿಶ್ವಶಾಂತಿಗೆ ಭಗವದ್ಗೀತೆಯೇ ಮೂಲಾಧಾರ: ಪುತ್ತಿಗೆ ಶ್ರೀಸುಗುಣೇಂದ್ರ ತೀರ್ಥ ಸ್ವಾಮೀಜಿ
Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು
Udupi: 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.