ಮನ್‌ಮುಲ್ ಹಗರಣದ ತನಿಖೆಯನ್ನು ಸಿಐಡಿಗೆ ವಹಿಸಿ ಅಧಿಕೃತ ಆದೇಶ ಹೊರಡಿಸಿದ ಸರ್ಕಾರ
Team Udayavani, Jun 30, 2021, 7:23 PM IST
ಮಂಡ್ಯ: ಮನ್‌ಮುಲ್‌ನಲ್ಲಿ ನಡೆದಿರುವ ಹಾಲು-ನೀರು ಮಿಶ್ರಿತ ಹಗರಣವನ್ನು ಕೊನೆಗೂ ಸರ್ಕಾರ ಸಿಐಡಿ ತನಿಖೆಗೆ ವಹಿಸಿ ಬುಧವಾರ ಅಧಿಕೃತ ಆದೇಶ ಹೊರಡಿಸಿದೆ.
ಮದ್ದೂರು ತಾಲೂಕಿನ ಗೆಜ್ಜಲಗೆರೆ ಕೈಗಾರಿಕಾ ಪ್ರದೇಶದಲ್ಲಿರುವ ಮಂಡ್ಯ ಜಿಲ್ಲಾ ಹಾಲು ಒಕ್ಕೂಟದಲ್ಲಿ ಗುತ್ತಿಗೆದಾರರು ಹಾಲು ಸಾಗಾಣೆಯಲ್ಲಿ ದುರುಪಯೋಗಪಡಿಸಿಕೊಂಡಿರುವ ಬಗ್ಗೆ ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ಗಂಭೀರ ಹಾಗೂ ಸೂಕ್ಷö್ಮವಾಗಿರುವುದರಿಂದ ಪಾರದರ್ಶಕತೆ ಹಾಗೂ ತೀವ್ರತರ ತನಿಖೆ ನಡೆಸಬೇಕಾಗಿರುವುದರಿಂದ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ ಎಂದು ಸರ್ಕಾರದ ಉಪ ಕಾರ್ಯದರ್ಶಿ ಬಿ.ಎಸ್.ನಾಗರತ್ಮಮ್ಮ ಆದೇಶದಲ್ಲಿ ತಿಳಿಸಿದ್ದಾರೆ.
ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಮೊದಲ ಹಂತವಾಗಿ ಡಿವೈಎಸ್ಪಿ ನೇತೃತ್ವದಲ್ಲಿ ತನಿಖೆ ನಡೆಸಲಾಗುತ್ತಿತ್ತು. ಆದರೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕಳೆದ ವಾರ ಸಿಐಡಿ ವಹಿಸಲಾಗುವುದು ಎಂದು ಘೋಷಣೆ ಮಾಡಿದ್ದರು. ಆದರೆ ಅಧಿಕೃತ ಆದೇಶ ಹೊರ ಬಿದ್ದಿರಲಿಲ್ಲ.
ಇದನ್ನೂ ಓದಿ :ಸಹಕಾರಿ ಅಧಿಕಾರಿಗಳಿಂದ ರೈತರಿಗೆ ಅನುಕೂಲವಾಗಲಿ : ಸಚಿವ ಎಸ್.ಟಿ. ಸೋಮಶೇಖರ್
ಸಿಬಿಐಗೆ ಹೆಚ್ಚಿದ ಒತ್ತಡ:
ಆದರೆ ಜಿಲ್ಲೆಯಲ್ಲಿ ಹೋರಾಟಗಾರರು, ರೈತಸಂಘಟನೆಗಳು, ಕಾರ್ಮಿಕ, ದಲಿತ, ಮಹಿಳಾ ಸಂಘಟನೆಗಳು, ಹಿರಿಯ ಸಹಕಾರಿಗಳು, ರಾಜಕೀಯ ಮುಖಂಡರು ಸೇರಿದಂತೆ ವಿವಿಧ ಪ್ರಗತಿಪರ ಸಂಘಟನೆಗಳು ಪ್ರಕರಣವನ್ನು ಸಿಬಿಐಗೆ ವಹಿಸಿ ತನಿಖೆ ನಡೆಸುವಂತೆ ಆಗ್ರಹಿಸಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jogging: ಬೆಳಗಾವಿಯಲ್ಲಿ ಕಾರ್ಮಿಕ ಸಚಿವ ಸಂತೋಷ ಲಾಡ್ ನೈಟ್ ರನ್ನಿಂಗ್, ಜಾಗಿಂಗ್
Pavithra Gowda: 6 ತಿಂಗಳ ಬಳಿಕ ಜೈಲಿನಿಂದ ಬಿಡುಗಡೆಯಾದ ನಟಿ ಪವಿತ್ರಾ ಗೌಡ
Kottigehara: ನಿರ್ದೇಶಕ ಉಪೇಂದ್ರ ಅವರ ‘ಯುಐ’ ಚಿತ್ರದಲ್ಲಿ ಖಳನಟನಾಗಿ ನಟಿಸಿದ ಬಣಕಲ್ ನಿವಾಸಿ
Tabla Maestro; ಉಸ್ತಾದ್ ಜಾಕೀರ್ ಹುಸೇನ್ ದೈವೀ ಪುರುಷ
Karnataka: ಕೊಳವೆ ಬಾವಿ ಮುಚ್ಚದಿದ್ದರೆ 1 ವರ್ಷ ಜೈಲು ಶಿಕ್ಷೆ
MUST WATCH
ಹೊಸ ಸೇರ್ಪಡೆ
ಕಲ್ಮಕಾರು: ಅಯ್ಯಪ್ಪ ವೃತಧಾರಿ ಮೇಲೆ ಕಾಡಾನೆ ದಾಳಿ… ಆಸ್ಪತ್ರೆಗೆ ದಾಖಲು
Jogging: ಬೆಳಗಾವಿಯಲ್ಲಿ ಕಾರ್ಮಿಕ ಸಚಿವ ಸಂತೋಷ ಲಾಡ್ ನೈಟ್ ರನ್ನಿಂಗ್, ಜಾಗಿಂಗ್
Bengaluru: ಟೆಕಿ ಅತುಲ್‌ನಂತೆ ಪತ್ನಿ ಕಿರುಕುಳ ತಾಳದೆ ಕಾರ್ಮಿಕ ಆತ್ಮಹತ್ಯೆ
Udupi: ಯಕ್ಷಗಾನದಲ್ಲಿ ಭಗವದ್ಗೀತೆ ಪ್ರಯೋಗ: ಡಾ| ಪ್ರಭಾಕರ್ ಜೋಶಿ
Theft Case: ರಿಯಲ್ ಎಸ್ಟೇಟ್ ಉದ್ಯಮಿ ಮನೆಗೆ ನುಗ್ಗಿ 50 ಲಕ್ಷ ಮೌಲ್ಯದ ಚಿನ್ನ ಕಳವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.